ಆಪರೇಷನ್‌ ಸಿಂಧೂರ ಯಶಸ್ಸಿಗೆ ರಾಜ್ಯಾದ್ಯಂತ ತಿರಂಗಾ ಯಾತ್ರೆ, ಬಿಜೆಪಿ ಚಿಹ್ನೆ ಪ್ರದರ್ಶಿಸಲ್ಲ: ಆರ್‌ ಅಶೋಕ್

Date:

Advertisements

ಭಾರತೀಯ ಸೇನೆ 100 ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, “ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು. ಯುದ್ಧಕ್ಕೆ ಮುನ್ನ ಶಾಂತಿಯ ಮಾತು ಆಡುತ್ತಾರೆ, ಕದನ ವಿರಾಮವಾದಾಗ ಯುದ್ಧ ನಿಲ್ಲಿಸಿದ್ದೇಕೆ ಎಂದು ಪ್ರಶ್ನಿಸುತ್ತಾರೆ. ಜೊತೆಗೆ ಅಧಿವೇಶನ ನಡೆಸಬೇಕೆಂದು ಕೇಳುತ್ತಾರೆ. ಆದರೆ ಇದು ಅಧಿವೇಶನ ನಡೆಸುವ ಸಮಯವಲ್ಲ. ನಮ್ಮ ಯೋಧರು ಸಾಕ್ಷಿಗಳನ್ನು ನೀಡಿದ್ದಾರೆ. ಇನ್ನು ಮುಂದೆ ಯಾರೂ ಸಾಕ್ಷಿ ಕೇಳಬಾರದು. ಪಾಕ್‌ ಆಕ್ರಮಿತ ಕಾಶ್ಮೀರವನ್ನು ವಾಪಸ್‌ ಪಡೆಯುವ ಬಗ್ಗೆ, ಸಿಂದೂ ನದಿ ಒಪ್ಪಂದದ ಬಗ್ಗೆ ಪ್ರಧಾನಿ ಮೋದಿ ಈಗಾಗಲೇ ಸ್ಪಷ್ಟ ಸಂದೇಶ ನೀಡಿದ್ದಾರೆ” ಎಂದರು.

“ಈ ಸಂದರ್ಭದಲ್ಲಿ ಕಾಂಗ್ರೆಸ್‌ನವರು ರಾಜಕಾರಣ ಮಾಡುವುದು ಬಿಟ್ಟು ಯೋಧರಿಗೆ ಬೆಂಬಲ ನೀಡಬೇಕು. ಈ ಹಿಂದೆ ಪಿಒಕೆ ಬಿಟ್ಟುಕೊಟ್ಟಿದ್ದು, ಮುಂಬೈ ದಾಳಿ ಮೊದಲಾದವುಗಳ ಬಗ್ಗೆ ನಾವೇನೂ ಪ್ರಶ್ನೆ ಮಾಡುತ್ತಿಲ್ಲ. ಈ ಘಟನೆಗೆ ಇಂದಿರಾಗಾಂಧಿಯವರ ಹೋಲಿಕೆ ಮಾಡುವ ಅಗತ್ಯವಿಲ್ಲ. ಬಾಂಗ್ಲಾದೇಶದ ರಚನೆಯಾಯಿತು ಎನ್ನುವುದಾದರೆ ಪಿಒಕೆ ಯಾಕೆ ಬಿಟ್ಟಿದ್ದೀರಿ ಎಂಬ ಪ್ರಶ್ನೆ ಬರುತ್ತದೆ. ಆದರೆ ಇದರ ಬಗ್ಗೆ ನಾವ್ಯಾರೂ ಮಾತಾಡುತ್ತಿಲ್ಲ. ಇಂತಹ ಮಾತನಾಡಲು ಇದು ಸಮಯ ಅಲ್ಲ” ಎಂದು ಹೇಳಿದರು.

Advertisements

“ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಿಂದಲೂ ಯುದ್ಧ ಬೇಡ ಎಂದರು. ಕಾಂಗ್ರೆಸ್‌ ಪಕ್ಷ ಶಾಂತಿ ಎಂದು ಟ್ವೀಟ್‌ ಮಾಡಿತ್ತು. ಈ ನಡುವೆ ಸಚಿವ ಕೃಷ್ಣ ಬೈರೇಗೌಡ ಉಲ್ಟಾ ಮಾತಾಡುತ್ತಿದ್ದಾರೆ. ಇಲ್ಲಿ ನಾವು ಏನೇ ಮಾತಾಡಿದರೂ ಭಾರತೀಯ ಸೇನೆಯ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಕದನ ವಿರಾಮ ಕೂಡ ಸೇನಾಧಿಕಾರಿಗಳು ಕೈಗೊಂಡ ತೀರ್ಮಾನವಾಗಿದೆ. ಕದನ ವಿರಾಮಕ್ಕೆ ಯಾರದ್ದೇ ಮಧ್ಯಸ್ಥಿಕೆ ಇರಲಿಲ್ಲ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ. ಯಾರದ್ದೇ ಮಧ್ಯಸ್ಥಿಕೆಯನ್ನು ಭಾರತ ಒಪ್ಪಲ್ಲ” ಎಂದರು.

ತಿರಂಗಾ ಯಾತ್ರೆ

“ಯುದ್ಧ ಆರಂಭವಾಗುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದರು. ಯೋಧರ ಜೊತೆ ನಾವೆಲ್ಲರೂ ಇದ್ದೇವೆ ಎಂದು ಹೇಳುವುದು ಪ್ರತಿ ಭಾರತೀಯರ ಕರ್ತವ್ಯ. ಅದಕ್ಕಾಗಿ ಬಿಜೆಪಿ ವತಿಯಿಂದ ತಿರಂಗಾ ಯಾತ್ರೆ ನಡೆಯಲಿದೆ. ಮೇ 15 ರಂದು ರಾಜಧಾನಿ ಸೇರಿದಂತೆ ಪ್ರಮುಖ ನಗರಗಳಲ್ಲಿ ಯಾತ್ರೆ ನಡೆಯಲಿದೆ. ಬೆಂಗಳೂರಿನಲ್ಲಿ ಮಲ್ಲೇಶ್ವರದ ಸಂಪಿಗೆಯ ರಸ್ತೆಯಲ್ಲಿ ಶಿರೂರು ಪಾರ್ಕ್‌ನಿಂದ 18 ನೇ ಕ್ರಾಸ್‌ವರೆಗೆ ತಿರಂಗಾ ಯಾತ್ರೆ ನಡೆಯಲಿದೆ. ಇದರಲ್ಲಿ ಪಕ್ಷದ ಚಿಹ್ನೆ ಇರುವುದಿಲ್ಲ. ರಾಷ್ಟ್ರಧ್ವಜ ಇರಲಿದೆ” ಎಂದು ತಿಳಿಸಿದರು.

“ಮೇ 16 ಮತ್ತು 17 ರಂದು ಜಿಲ್ಲಾ ಕೇಂದ್ರದಲ್ಲಿ, ಮೇ 18 ರಿಂದ 23 ರವರೆಗೆ ತಾಲೂಕು ಕೇಂದ್ರಗಳಲ್ಲಿ ಯಾತ್ರೆ ಮಾಡಲಾಗುವುದು. ಇದರಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಭಾರತೀಯ ಮಹಿಳೆಯರ ಸಿಂದೂರ ಮುಟ್ಟಿದರೆ ಏನಾಗುತ್ತದೆ ಎಂಬುದನ್ನು ಭಾರತೀಯ ಸೇನೆ ತೋರಿಸಿದೆ. 100 ಕ್ಕೂ ಅಧಿಕ ಉಗ್ರರು ಸತ್ತಿದ್ದಾರೆ. ತರಬೇತಿ ಕೇಂದ್ರಗಳು ನಾಶವಾಗಿದೆ. ಯುದ್ಧ ಕೈ ಬಿಡಿ ಎಂದು ಅಂಗಲಾಚುವ ಮಟ್ಟಕ್ಕೆ ಪಾಕಿಸ್ತಾನ ಬಂದಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X