2025-26ನೇ ಸಾಲಿನಲ್ಲಿ ಡಿಎಲ್‌ಇಡಿ(ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೊಮಾ) ಮತ್ತು ಡಿಪಿಇಡಿ(ದೈಹಿಕ ಶಿಕ್ಷಣದಲ್ಲಿ ಡಿಪ್ಲೊಮಾ) ಕೋರ್ಸ್‌ಗಳ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮತ್ತು ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ www.schooleducation.kar.nic.inನಲ್ಲಿರುವ ದಾಖಲಾತಿ ಅರ್ಜಿಯನ್ನು ಮುದ್ರಿಸಿಕೊಂಡು ಭರ್ತಿ ಮಾಡಿ ಅಥವಾ ಡಯಟ್ ವ್ಯವಸ್ಥಾಪಕ ಕೇಂದ್ರವನ್ನು ಸಂಪರ್ಕಿಸಿ ಅರ್ಜಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಿಸಿದ ಡಯಟ್‍ಗಳಿಗೆ ಸಲ್ಲಿಸಬೇಕು.
ಶೈಕ್ಷಣಿಕ ವಿದ್ಯಾರ್ಹತೆ
ಡಿಎಲ್‌ಇಡಿ ಕೋರ್ಸ್: ದ್ವಿತೀಯ ಪಿಯುಸಿ/12ನೇ ತರಗತಿಯ ಪರೀಕ್ಷೆಯಲ್ಲಿ ಎಸ್‌ಸಿ/ಎಸ್‌ಟಿ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳು ಕನಿಷ್ಟ 45% ಮತ್ತು ಇತರೆ ಸಾಮಾನ್ಯ ಅಭ್ಯರ್ಥಿಗಳು ಕನಿಷ್ಟ 50% ಅಂಕಗಳನ್ನು ಪಡೆದಿರಬೇಕು.
ಡಿಪಿಇಡಿ ಕೋರ್ಸ್: ಡಿಪಿಇಡಿ ಕೋರ್ಸಿಗೆ ಸೇರುವ ಎಲ್ಲ ಅಭ್ಯರ್ಥಿಗಳು ದ್ವಿತೀಯ ಪಿಯುಸಿ/12ನೇ ತರಗತಿಯ ಪರೀಕ್ಷೆಯಲ್ಲಿ ಕನಿಷ್ಟ 50% ಅಂಕಗಳನ್ನು ಹಾಗೂ ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಮತ್ತು ರಾಜ್ಯ ಅಥವಾ ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಪಾಲ್ಗೊಂಡಿದ್ದು ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ಕನಿಷ್ಟ 45% ಅಂಕಗಳನ್ನು ಪಡೆದಿರಬೇಕು.
ದಾಖಲಾತಿ ಅರ್ಜಿಗಳನ್ನು ಸಲ್ಲಿಸಲು, ಬ್ಯಾಂಕ್‍ಗೆ ನಿಗಧಿತ ಶುಲ್ಕ ಪಾವತಿಸಲು ಜೂನ್ 5 ಕೊನೆಯ ದಿನ.
ಅರ್ಜಿಯನ್ನು ಸಲ್ಲಿಸುವ ವಿಧಾನ, ಅರ್ಹತೆ ಮತ್ತು ಮೀಸಲಾತಿ ವಿವರಗಳು ಹಾಗೂ ಇತರೆ ಸೂಚನೆಗಳನ್ನು ವೆಬ್‍ಸೈಟ್ www.schooleducation.kar.nic.inನಲ್ಲಿ ಪ್ರಕಟಿಸಲಾಗಿದೆ. ವೆಬ್‍ಸೈಟ್‍ನಲ್ಲಿನ ಮಾಹಿತಿಗಳನ್ನು ಓದಿ, ಅರ್ಜಿ ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ವ್ಯವಸ್ಥಾಪಕ ಕೇಂದ್ರವಾದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಕಚೇರಿಗೆ ನಿಗಧಿತ ಅಂತಿಮ ದಿನಾಂಕದ ಒಳಗೆ ಸಲ್ಲಿಸಬೇಕು.
ಇದ್ದನ್ನೂ ಓದಿದ್ದೀರಾ? ಕೈಮಗ್ಗ, ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್: ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗೆ ಕೇಂದ್ರೀಕೃತ ದಾಖಲಾತಿ ಘಟಕದ ದೂರವಾಣಿ ಸಂಖ್ಯೆ:080-22483140 ಮತ್ತು 080-22483145 ಹಾಗೂ ಮಂಗಳೂರು ಕೊಡಿಯಾಲ್‍ಬೈಲು ಜೈಲ್ ರಸ್ತೆಯಲ್ಲಿರುವ -2493052, ಮೊಬೈಲ್: 8747857070) ಸಂಪರ್ಕಿಸಬಹುದು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಹಾಗೂ ಪದನಿಮಿತ್ತ ಉಪನಿರ್ದೇಶಕಿ ರಾಜಲಕ್ಷ್ಮೀ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.