ಮಂಗಳೂರು | ಹೆದ್ದಾರಿ ಬದಿ ಕಸ ಎಸೆಯುವುದಕ್ಕೂ ಮುನ್ನ ಇರಲಿ ಎಚ್ಚರ: ನಿಗಾ ವಹಿಸಲು ಬರಲಿದೆ ತಂಡ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಹೆದ್ದಾರಿ ಬದಿಯಲ್ಲಿ ಕಸ ಎಸೆಯುವ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಇದನ್ನು ಮಟ್ಟಹಾಕಲು ಅಧಿಕಾರಿಗಳು ಯೋಜನೆ ಹಾಕಿಕೊಂಡಿದ್ದಾರೆ. ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡ ರಚನೆ ಮಾಡುವುದಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ತ್ಯಾಜ್ಯ ಬಿಸಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ.

ದ.ಕ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 73 ರ ಇಕ್ಕೆಲಗಳಲ್ಲಿ ತ್ಯಾಜ್ಯ ಬೀಳುವುದನ್ನು ನಿಯಂತ್ರಿಸುವ ಸಲುವಾಗಿ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮೀ ರಾಯಕೊಡ, “ಜಿಲ್ಲೆಯ ರಾಜ್ಯ ಮತ್ತು ಗ್ರಾಮೀಣ ಭಾಗದ ರಸ್ತೆ ಬದಿಯ ತ್ಯಾಜ್ಯ ಬೀಳುವುದನ್ನು ತಡೆಯುವ ಸಲುವಾಗಿ “ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು; ನಮ್ಮೊಂದಿಗೆ ನೀವು” ಅಭಿಯಾನ ಯಶಸ್ವಿಯಾಗಿ ಕೈಗೊಳ್ಳುವಂತೆ ಸೂಚಿಸಿದರು.

Advertisements

“ರಾಷ್ಟ್ರೀಯ ಹೆದ್ದಾರಿ 73 ರ ಇಕ್ಕೆಲಗಳಲ್ಲಿ ತ್ಯಾಜ್ಯ ಬೀಳುವುದನ್ನು ತಡೆಗಟ್ಟಲು ಮೊದಲನೆಯದಾಗಿ ಮಂಗಳೂರು ತಾಲೂಕಿನ ಅಡ್ಯಾರ್, ಬಂಟ್ವಾಳ ತಾಲೂಕಿನ ತುಂಬೆ, ಪುದು ಹಾಗೂ ಕಳ್ಳಿಗೆ ಗ್ರಾಮ ಪಂಚಾಯತ್‍ಗಳನ್ನು ಆಯ್ಕೆ ಮಾಡಲಾಗಿದ್ದು, ಈ ವ್ಯಾಪ್ತಿಯ ರಸ್ತೆ ಬದಿಗಳಲ್ಲಿ ಬೀಳುವ ತ್ಯಾಜ್ಯಗಳನ್ನು ತಡೆಗಟ್ಟಲು ಗಸ್ತು ಪಡೆ ಹಾಗೂ ಬ್ಲಾಕ್ ಸ್ಪಾಟ್‍ಗಳಲ್ಲಿ ನಿಲ್ಲಲು 5 ಜನರ ತಂಡವನ್ನು ರಚಿಸಲು ಸಿದ್ಧತೆ ನಡೆಸಲಾಗಿದೆ. ಬ್ಲಾಕ್ ಸ್ಪಾಟ್‍ನಲ್ಲಿ ನಿಲ್ಲಲು ಪರಿಸರ ಮತ್ತು ಸ್ವಚ್ಛತೆ ವಿಷಯದಲ್ಲಿ ಕಾಳಜಿ ಇರುವವರು ಭಾಗವಹಿಸಬಹುದು. ಈ ಅಭಿಯಾನವು 3 ತಿಂಗಳಿನವರೆಗೆ ನಡೆಯಲಿದ್ದು, ಈ ವೇಳೆ ಜನರನ್ನು ಮಾಹಿತಿ, ಶಿಕ್ಷಣ ಹಾಗೂ ಸಂವಹನ ನೀಡಿ ತ್ಯಾಜ್ಯ ಬಿಸಾಡುವವರ ಮೇಲೆ ನಿಗಾ ವಹಿಸಿ ಕ್ರಮ ಕೈಗೊಳ್ಳಬೇಕು” ಎಂದು ಅವರು ಸೂಚನೆ ನೀಡಿದರು.

WhatsApp Image 2025 05 13 at 5.15.44 PM

ಸಭೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಸಚಿನ್ ಮಾತನಾಡಿ, “ರಾಷ್ಟ್ರೀಯ ಹೆದ್ದಾರಿಗಳ ಕಸ ನಿರ್ವಹಣೆಗೆ ತೊಡಗುವ ಮೊದಲು ವಾಣಿಜ್ಯ ಮಳಿಗೆಗಳಲ್ಲಿ ಹಾಗೂ ಪ್ರತೀ ಮನೆಗಳಲ್ಲಿ ಕಸ ವಿಂಗಡಿಸಿ ಕೊಡುವಂತೆ ಕ್ರಮವಹಿಸಬೇಕಿದೆ. 100% ಮನೆಗಳಿಂದ ಸರಿಯಾದ ಕ್ರಮದಲ್ಲಿ ತ್ಯಾಜ್ಯ ಸಂಗ್ರಹ ಆದರೆ ಮಾತ್ರ ರಸ್ತೆ ಬದಿಗಳಲ್ಲಿ ಕಸ ಬೀಳುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದಾಗಿದೆ” ಎಂದರು.

ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಮಾತನಾಡಿ, “ರಸ್ತೆ ಬದಿಯಲ್ಲಿ ಕಸ ಬೀಳುವ ಪ್ರದೇಶವನ್ನು ಗುರುತಿಸಿ ಅದರ ಮೇಲೆ ನಿಗಾವಹಿಸಬೇಕಿದೆ. ಅವರ ಮೇಲೆ ಕ್ರಮ ಜರುಗಿಸಬೇಕು” ಎಂದರು.

ಇದನ್ನು ಓದಿದ್ದೀರಾ? ನಮಗೆ ಬೇಕಿರುವುದು ʼಕುರಿʼ ಅಲ್ಲ, ಕ್ರಿಮಿನಲ್‌ಗಳಿಗೆ ಸರಿಯಾದ ಶಿಕ್ಷೆ; ವಾಟ್ಸ್ಯಾಪ್‌ ಗ್ರೂಪಿನಲ್ಲಿ ಬ್ಯಾರಿಗಳ ಭಾರೀ ಚರ್ಚೆ

ಸಭೆಯಲ್ಲಿ ಕಳ್ಳಿಗೆ ಪಂಚಾಯತ್ ಅಧ್ಯಕ್ಷ ಪುರುಷೋತ್ತಮ, ಅಡ್ಯಾರ್ ಪಂಚಾಯತ್ ಅಧ್ಯಕ್ಷ ಅಬ್ದುಲ್ ಜಲೀಲ್, ತುಂಬೆ ಪಂಚಾಯತ್ ಉಪಾಧ್ಯಕ್ಷ ಗಣೇಶ್, ಹಸಿರು ದಳದ ನಾಗರಾಜ್ ಆರ್ ಅಂಚನ್, ಜಿಲ್ಲಾ ಸ್ವಚ್ಛ ಭಾರತ್ ಮಿಷನ್ (ಗ್ರಾ) ಸಮಾಲೋಚಕರು ಉಪಸ್ಥಿತರಿದ್ದರು.

ಕಸ ಬೀಳುವ ಪ್ರದೇಶ ಗುರುತಿಸಿ ಆ ಪ್ರದೇಶದಲ್ಲಿ ಬೆಳಗ್ಗೆ 5 ರಿಂದ 8 ಗಂಟೆಯವರಗೆ ಹಾಗೂ ಸಂಜೆ 6 ರಿಂದ 9 ಗಂಟೆಯವರೆಗೆ ಪರಿಸರ ಮತ್ತು ಸ್ವಚ್ಛತೆಯಲ್ಲಿ ಆಸಕ್ತಿ ಇರುವ 5 ಜನ ಸ್ವಯಂ ಸೇವಕರನ್ನು ನಿಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ. ಈ ವೇಳೆ ತ್ಯಾಜ್ಯ ಬಿಸಾಡುವರನ್ನು ಗುರುತಿಸಿ ಅವರಿಗೆ ಮನವರಿಕೆ ಮಾಡಲು ಉದ್ದೇಶಿಸಿದೆ. ಅಲ್ಲದೆ, ಸ್ವಚ್ಛತೆ ಜಾಗೃತಿ ಮೂಡಿಸುವ ಸಲುವಾಗಿ ವಾಹನದಲ್ಲಿ ಮೈಕ್ ಮೂಲಕ ವ್ಯಾಪಕ ಪ್ರಚಾರ, ತ್ಯಾಜ್ಯ ಬೀಳುವುದನ್ನು ತಡೆಹಿಡಿಯಲು ಗಸ್ತು ಪಡೆ ರಚಿಸಲು ದ.ಕ. ಜಿಲ್ಲಾ ಸ್ವಚ್ಛ ಭಾರತ್ ಮಿಷನ್ (ಗ್ರಾ) ಸಿದ್ಧತೆ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X