ಉಡುಪಿ | ಆಶ್ರಯವಿಲ್ಲದ ವಲಸೆ ಕಾರ್ಮಿಕರ ದಯನೀಯ ಸ್ಥಿತಿ, ಜಿಲ್ಲಾಧಿಕಾರಿ ಭೇಟಿ ಮಾಡಿದ ಸಿಐಟಿಯು

Date:

Advertisements

ರಾಜ್ಯದ ಇತರೇ ಜಿಲ್ಲೆಗಳಿಂದ ಉದ್ಯೋಗಕ್ಕಾಗಿ ವಲಸೆ ಬರುವ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳೊಂದಿಗೆ ಪರ್ಯಾಯ ಆಶ್ರಯದ ವ್ಯವಸ್ಥೆ ಮಾಡಲು ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗಳನ್ನು ಸಿಐಟಿಯು ನಿಯೋಗ ಭೇಟಿ ಮಾಡಿ ಮನವಿ ನೀಡಲಾಯಿತು.

ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿ ಹಲವಾರು ವರ್ಷಗಳಿಂದ ಆಶ್ರಯ ಪಡೆದಿದ್ದ ವಲಸೆ ಕಾರ್ಮಿಕರನ್ನು ಇತ್ತೀಚೆಗೆ ಸ್ಥಳೀಯ ಆಡಳಿತ ತೆರವುಗೊಳಿಸಿ ಪರ್ಯಾಯ ವ್ಯವಸ್ಥೆ ಮಾಡದೇ ಅವರನ್ನು ಅತಂತ್ರಗೊಳಿಸಿದೆ. ಈ ವಲಸೆ ಕಾರ್ಮಿಕರಿಗೆ ಖಾಯಂ ಉದ್ಯೋಗದಾತರಿಲ್ಲ ದಿನಕ್ಕೊಂದು ಮಾಲಕರು ಇವರನ್ನು ಕೆಲಸಕ್ಕೆ ನಿಯೋಜಿಸಿಕೊಂಡು ವೇತನ ನೀಡಿ ಕಳುಹಿಸುವ ದಿನಗೂಲಿ ಕಾರ್ಮಿಕರು.

ಜಿಲ್ಲಾಡಳಿತ ಸರ್ಕಾರಕ್ಕೆ ಇವರಿಗೆ ಆಶ್ರಯ ಕಲ್ಪಿಸಲು ಪ್ರಸ್ತಾವನೆ ಕಳುಹಿಸಬೇಕು ಎಂದು ಮನವಿ ಮಾಡಲಾಯಿತು.ಈ ವೇಳೆ ಉಪಸ್ಥತರಿದ್ದ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಮಾನ್ಯ ಜಿಲ್ಲಾಧಿಕಾರಿಗಳು ಕಾರ್ಮಿಕ ಆಯುಕ್ತರಿಗೆ ಪ್ರಸ್ತಾವನೆ ಕಳುಹಿಸಿ ವಲಸೆ ಕಾರ್ಮಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.ಈಗಾಗಲೇ ಅಜ್ಜಂಪುರದಲ್ಲಿ ವಲಸೆ ಕಾರ್ಮಿಕರಿಗೆ ಭೂಮಿ ಮೀಸಲಿರಿಸಿದರೂ ಕಾಮಗಾರಿ ನಡೆದಿಲ್ಲ ಎಂದರು.ಈ ಬಗ್ಗೆ ಜಿಲ್ಲಾ ಕೇಂದ್ರದ ಒಂದೇ ಕಡೆಯಲ್ಲಿ ವಸತಿ ನೀಡಿದರೆ ಪ್ರಯೋಜನವಿಲ್ಲ ಬದಲಾಗಿ ಜಿಲ್ಲೆಯಲ್ಲಿ ತಾಲೂಕುವಾರು ವಸತಿಗಳನ್ನು ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಒತ್ತಾಯಿಸಲಾಯಿತು.

Advertisements

ವಲಸೆ ಕಾರ್ಮಿಕರನ್ನು ಅಸ್ಪ್ರಶ್ಯರಂತೆ ಕಾಣುವುದು ನಿಲ್ಲಿಸಬೇಕು. ಅತಿಥಿ ಕಾರ್ಮಿಕರಂತೆ ಅವರನ್ನು ಗೌರವಿಸಬೇಕು ಎಲ್ಲಾ ಕಾರ್ಮಿಕರಲ್ಲಿ ಕೆಲವರು ಕೆಟ್ಟವರು ಇರುತ್ತಾರೆ ಅಂತವರಿಗೆ ಕಾನೂನು ಮೂಲಕ ಅರಿವು ಮೂಡಿಸಬೇಕು ಎಂದು ಸಿಐಟಿಯು ತಿಳಿಸಿದೆ.

ನಿಯೋಗದಲ್ಲಿ ಕರ್ನಾಟಕ ರಾಜ್ಯ ವಲಸೆ ಕಾರ್ಮಿಕರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ ಮಹಾಂತೇಶ್, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ರಾಜ್ಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಬೈಂದೂರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X