ಮಾಜಿ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಅವರನ್ನು ಯುಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕುಮಾರ್ ಅವರ ನೇಮಕಾತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದಿಸಿದ್ದಾರೆ.
ಏಪ್ರಿಲ್ 29ರಂದು ಪ್ರೀತಿ ಸೂದನ್ ಅವರ ಅಧಿಕಾರಾವಧಿ ಪೂರ್ಣಗೊಂಡ ನಂತರ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅಧ್ಯಕ್ಷರ ಹುದ್ದೆ ಖಾಲಿಯಾಗಿತ್ತು. ಇದೀಗ ಅಜಯ್ ಕುಮಾರ್ ಯುಪಿಎಸ್‌ಸಿ ಅಧ್ಯಕ್ಷರಾಗಲಿದ್ದಾರೆ.
ಇದನ್ನು ಓದಿದ್ದೀರಾ? ಯುಪಿಎಸ್‌ಸಿ ಅಧ್ಯಕ್ಷೆಯಾಗಿ ಮಾಜಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸೂದನ್ ನೇಮಕ
1985ರ ಬ್ಯಾಚ್‌ನ ನಿವೃತ್ತ ಐಎಎಸ್ ಅಧಿಕಾರಿಯಾಗಿರುವ ಕುಮಾರ್ ಅವರ ಸೇವಾ ದಾಖಲೆಗಳ ಪ್ರಕಾರ, 2019ರ ಆಗಸ್ಟ್ 23ರಿಂದ 2022ರ ಅಕ್ಟೋಬರ್ 31ರವರೆಗೆ ರಕ್ಷಣಾ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.
STORY | Former defence secretary Ajay Kumar appointed UPSC chairman
— Press Trust of India (@PTI_News) May 14, 2025
READ: https://t.co/Z0qatTtdrd pic.twitter.com/rsE8R4GAHy
ಐಎಎಸ್, ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಸೇರಿದಂತೆ ಇತರ ಹುದ್ದೆಗಳಿಗೆ ಅಧಿಕಾರಿಗಳನ್ನು ಆಯ್ಕೆ ಮಾಡಲು ನಾಗರಿಕ ಸೇವಾ ಪರೀಕ್ಷೆಗಳನ್ನು ಯುಪಿಎಸ್‌ಸಿ ನಡೆಸುತ್ತದೆ.
ಇದರ ಅಧ್ಯಕ್ಷತೆಯನ್ನು ಈಗ ಕುಮಾರ್ ವಹಿಸಿಕೊಳ್ಳಲಿದ್ದಾರೆ. ಸಮಿತಿ ಗರಿಷ್ಠ 10 ಸದಸ್ಯರನ್ನು ಹೊಂದಿರಬಹುದಾಗಿದೆ. ಪ್ರಸ್ತುತ, ಆಯೋಗದಲ್ಲಿ ಇಬ್ಬರು ಸದಸ್ಯರ ಹುದ್ದೆಗಳು ಖಾಲಿ ಇವೆ. ಯುಪಿಎಸ್‌ಸಿ ಅಧ್ಯಕ್ಷರನ್ನು ಆರು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯಸ್ಸಾಗುವವರೆಗೆ ನೇಮಿಸಲಾಗುತ್ತದೆ.
