ಮಂಗಳೂರು | ಬ್ಲಡ್ ಡೋನರ್ಸ್ ಸಂಸ್ಥೆಯ 500ನೇ ಶಿಬಿರ ಪ್ರಚಾರಾರ್ಥವಾಗಿ ರಕ್ತದಾನ ಜಾಥಾ

Date:

Advertisements

ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ 500ನೇ ರಕ್ತದಾನ ಶಿಬಿರದ ಪ್ರಚಾರಾರ್ಥವಾಗಿ ಝಮಾನ್ ಬಾಯ್ಸ್ ಕಲ್ಲಡ್ಕ ಸಂಸ್ಥೆಯ ಸಹಕಾರದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಏಕಕಾಲಕ್ಕೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಮೊದಲು ರಕ್ತದಾನದ ಜಾಗೃತಿ ಜಾಥಾ ಆಯೋಜಿಸಲಾಗಿತ್ತು. ಕಲ್ಲಡ್ಕದಿಂದ ಹೊರಟ ಜಾಥಾ ಮಂಗಳೂರಿನ ರಾಜ ಬೀದಿಯಲ್ಲಿ ಸಂಚರಿಸಿತು. ಜಾಥಾದಲ್ಲಿ ಪಾಲ್ಗೊಂಡಿದ್ದ ಯುವಕರ ತಂಡ ವಿವಿಧ ಆಸ್ಪತ್ರೆಗಳಿಗೆ ತೆರಳಿ ರಕ್ತದಾನ ಮಾಡಿ ಮಾದರಿಯಾದರು. ಸುಮಾರು ನೂರಕ್ಕೂ ಅಧಿಕ ಯುವಕರು ರಕ್ತದಾನ ಮಾಡಿ ರಕ್ತದಾನದ ಅಭಾವವನ್ನು ಸ್ವಲ್ಪಮಟ್ಟಕ್ಕೆ ನೀಗಿಸುವಲ್ಲಿ ಸಫಲರಾದರು.

ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ರಕ್ತದಾನ ಶಿಬಿರಗಳನ್ನು ದೇಶ ವಿದೇಶಗಳಲ್ಲಿ ಆಯೋಜಿಸುತ್ತಿದ್ದು, ಸಂಸ್ಥೆಯ ಸಮಾಜಮುಖಿ ಸೇವೆಗೆ ಈಗಾಗಲೇ ಹಲವಾರು ಪ್ರಶಸ್ತಿಗಳು ಲಭಿಸಿದ್ದು, ಈ ಸೇವೆಯನ್ನು ಮತ್ತಷ್ಟು ಮುಂದುವರಿಸಿ ನಾಗರಿಕರಲ್ಲಿ ರಕ್ತದಾನದ ಕುರಿತು ಅರಿವನ್ನು ಮೂಡಿಸಲು ಸಂಸ್ಥೆ ಸಹಕರಿಸುತ್ತಿದೆ.

Advertisements
WhatsApp Image 2025 05 14 at 11.05.09 AM 1

ಇದನ್ನೂ ಓದಿ: ಮಂಗಳೂರು | ಮೇ 10ರಂದು ಪತ್ರಕರ್ತ ಬಿ.ಎಂ.ಬಶೀರ್ ಅವರ ‘ಅಗ್ನಿಪಥ’ ಕಾದಂಬರಿ ಬಿಡುಗಡೆ

ಕಾರ್ಯಕ್ರಮದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಝಮಾನ್ ಬಾಯ್ಸ್ ಕಲ್ಲಡ್ಕ ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X