ದೇಶದ ಮೊದಲ ‘ಬೌದ್ಧ ಅಂಬೇಡ್ಕರ್‌ವಾದಿ ಸಿಜೆಐ; ಜಸ್ಟೀಸ್‌ ಗವಾಯಿಗೆ ರಾಜ್‌ದೀಪ್ ಸರ್ದೇಸಾಯಿ ಅಭಿನಂದನೆ

Date:

Advertisements

ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಇಂದು (ಮೇ 14) ದೇಶದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜಸ್ಟೀಸ್ ಗವಾಯಿ ಅವರನ್ನು ಅಭಿನಂದಿಸಿರುವ ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅವರು, “ಗವಾಯಿಯವರು ದೇಶದ ಮೊದಲ ಬೌದ್ಧ ಅಂಬೇಡ್ಕರ್‌ವಾದಿ ಸಿಜೆಐ” ಎಂದಿದ್ದಾರೆ.

ಈ ಬಗ್ಗೆ ತನ್ನ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ದೇಶಕ್ಕೆ ಸಂವಿಧಾನ ದೊರೆತ 75 ವರ್ಷಗಳ ನಂತರ ಗವಾಯಿಯವರು ದೇಶದ ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ಅಲಂಕರಿಸಿದ ಮೊದಲ ಬೌದ್ಧ ಅಂಬೇಡ್ಕರ್‌ವಾದಿಯಾಗಿದ್ದಾರೆ. ಬಾಬಾಸಾಹೇಬರಿಗೆ ಮತ್ತು ಹೆಚ್ಚು ಸಮಾನತೆಯ ಗಣರಾಜ್ಯದ ಕನಸಿಗೆ ಸೂಕ್ತವಾದ ಗೌರವ ಇದಾಗಿದೆ. ಜೈ ಭೀಮ್, ಜೈ ಹಿಂದ್” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಸಂವಿಧಾನ ‘ಭೀಮಸ್ಮೃತಿ’ ಎನ್ನುವ ಸಿಜೆಐ- ತಳಸ್ತರದ ಅಸಹಾಯಕರ ನ್ಯಾಯ ಪ್ರತಿಪಾದಕ

Advertisements

ನ್ಯಾಯಮೂರ್ತಿ ಗವಾಯಿ ಅವರು ಹಲವು ರಾಜ್ಯಗಳ ರಾಜ್ಯಪಾಲರಾಗಿದ್ದ ಪ್ರಸಿದ್ಧ ರಾಜಕಾರಣಿ ಆರ್ ಎಸ್ ಗವಾಯಿ ಅವರ ಪುತ್ರ. ಬಿ ಆರ್ ಅಂಬೇಡ್ಕರ್ ಅವರ ಆದರ್ಶಗಳನ್ನು ಆಳಕ್ಕೆ ಅಳವಡಿಸಿಕೊಂಡ ಕುಟುಂಬಕ್ಕೆ ಸೇರಿದವರು. ಅವರ ತಂದೆ ಅಂಬೇಡ್ಕರ್‌ವಾದಿ ಮತ್ತು ಮಾಜಿ ಸಂಸತ್ ಸದಸ್ಯರು. ನ್ಯಾಯಮೂರ್ತಿ ಗವಾಯಿ ಅವರೂ ಬೌದ್ಧ- ಅಂಬೇಡ್ಕರ್‌ವಾದಿಯಾಗಿದ್ದಾರೆ.

ಗವಾಯಿ ಸಂವಿಧಾನವನ್ನು ‘ಭೀಮಸ್ಮೃತಿ’ ಎಂದು ಕರೆಯುತ್ತಾರೆ. ‘ಅಂಬೇಡ್ಕರ್‌ ಕನಸುಗಳಿಗೆ ರೆಕ್ಕೆ ನೀಡುವ ಮಾರ್ಗ ಸಂವಿಧಾನ’ ಎಂಬ ತನ್ನ ತಂದೆಯ ಮಾತು ಗವಾಯಿ ಅವರಿಗೆ ದಾರಿದೀಪ ಎನ್ನಬಹುದು.

ಇದನ್ನು ಓದಿದ್ದೀರಾ? 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಬಿ. ಆರ್. ಗವಾಯಿ ಪ್ರಮಾಣ ವಚನ ಸ್ವೀಕಾರ

ಅವರ ನೇಮಕಾತಿಯನ್ನು ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು ಎಂದೇ ಪರಿಗಣಿಸಬಹುದು. ನಿವೃತ್ತ ಸಿಜೆಐ ಕೆ ಜಿ ಬಾಲಕೃಷ್ಣನ್ ನಂತರ ಸುಪ್ರೀಂ ಕೋರ್ಟ್‌ನ ಉನ್ನತ ಸ್ಥಾನವನ್ನು ತಲುಪಿದ ಪರಿಶಿಷ್ಟ ಜಾತಿ ಸಮುದಾಯದ ಎರಡನೇ ವ್ಯಕ್ತಿ ನ್ಯಾಯಮೂರ್ತಿ ಗವಾಯಿ. ಅಂಬೇಡ್ಕರ್‌ವಾದಿ ಸಿಜೆಐ ಆಗಿರುವುದು ಭರವಸೆ ಹೆಚ್ಚಿಸಿದೆ. ಆದರೆ ಅವರ ಅಧಿಕಾರಾವಧಿ ಕೇವಲ ಆರು ತಿಂಗಳು. 2025ರ ನವೆಂಬರ್ 23ರಂದು ನಿವೃತ್ತರಾಗಲಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X