ಉಡುಪಿ | ಮಲ್ಪೆಯಲ್ಲಿ ಬಾಂಬ್ ಸ್ಫೋಟ, ಐವರು ಗಂಭೀರ..! ಬಂದರಿನಲ್ಲಿ ಅಣಕು ಕಾರ್ಯಾಚರಣೆ

Date:

Advertisements

ಭಾರತ ಪಾಕಿಸ್ತಾನ ಯುದ್ದಭೀತಿಯ ನಡುವಲ್ಲೇ ನಗರದ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಪೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಸಂಜೆ ಸುಮಾರು 4.30 ಕ್ಕೆ ಪ್ರಶಾಂತವಾಗಿದ್ದ ಕಡಲಿನ ನಡುವೆ ತಣ್ಣಗೆ ಮೈಹೊದ್ದು ಕುಳಿತಿದ್ದ ಮೀನುಗಾರರಿಗೆ, ಒಮ್ಮೆಲೆ ದೊಡ್ಡ ಸದ್ದು ಕೇಳಿ, ಬೆಂಕಿ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ಗಾಬರಿಯಿಂದ ಓಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಇದು ನಿಜ ಘಟನೆ ಅಲ್ಲ. ಸಂಭಾವ್ಯ ಆತಂಕದ ಹಿನ್ನಲೆಯಲ್ಲಿ ನಡೆದ ಅಣಕು ಪ್ರದರ್ಶನ.

1005396236

ಮಲ್ಪೆ ಮೀನುಗಾರರ ಸಂಘ, ಕರಾವಳಿ ಕಾವಲು ಪಡೆ, ಆರೋಗ್ಯ ಇಲಾಖೆ, ಮೀನುಗಾರಿಕಾ ಇಲಾಖೆ, ಅಗ್ನಿಶಾಮಕ ದಳ, ಕಸ್ಟಮ್ಸ್ ವತಿಯಿಂದ ಜಂಟಿಯಾಗಿ ಮಲ್ಪೆ ಬಂದರಿನಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು.

Advertisements

ಅಗ್ನಿಶಾಮಕ ವಾಹನವು ಸೈರನ್ ಮೊಳಗಿಸುತ್ತಾ ಬಂದರಿಗೆ ಬಂದು ತಾತ್ಕಾಲಿಕ ಬೆಂಕಿಯನ್ನು ನಂದಿಸಿ, ಗಾಯಗೊಂಡವರನ್ನು ರಕ್ಷಿಸುವ ಅಣುಕು ಕಾರ್ಯಾಚರಣೆ ಮಾಡಲಾಯಿತು. ನಂತರ ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್ ಅಧಿಕಾರಿಗಳು ಹಾಗು ಮೀನುಗಾರರಿಗೆ ಕಾರ್ಯಾಚರಣೆಯ ಮಹತ್ವವನ್ನು ವಿವರಿಸಿದರು.

ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಬೋಟ್‌ನಲ್ಲಿ ಶಸ್ತ್ರಸಜ್ಜಿತರಾಗಿ ಬಂದರಿನ ಸುತ್ತಲೂ ಗಸ್ತು ತಿರುಗುವ ಮೂಲಕ ವಿಶೇಷ ಸನ್ನಿವೇಶದಲ್ಲಿ ಇಲಾಖೆಯ ಕಾರ್ಯದ ಬಗ್ಗೆ ಅರಿವು ಮೂಡಿಸಿದರು. ಕರಾವಳಿ ಕಾವಲು ಪಡೆಯ ಪೋಲಿಸ್ ನಿರೀಕ್ಷಕರಾದ ಪ್ರಮೋದ್, ಸೀತರಾಮ್, ಪಿಎಸ್ಐ ಫೆಮಿನಾ ಸೇರಿದಂತೆ ಮೊದಲಾದ ಅಧಿಕಾರಿಗಳು ಹಾಜರಿದ್ದರು.

1005396235

ಕರಾವಳಿ ಕಾವಲು ಪಡೆ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಮಾತನಾಡಿ, ಕರ್ನಾಟಕದ 12 ಪ್ರಮುಖ ಬಂದರಿನಲ್ಲಿ ಮಲ್ಪೆ ಬಂದರು ಪ್ರಮುಖವಾಗಿದೆ. ಅತೀ ಹೆಚ್ಚು ಮೀನುಗಾರಿಕಾ ಚಟುವಟಿಕೆ ನಡೆಯುವ ಬಂದರು ಇದಾಗಿದ್ದು, ಇಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದರೇ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಅಣಕು ಕಾರ್ಯಾಚರಣೆಯನ್ನು ನೀಡಲಾಗಿದೆ. ಮೀನುಗಾರರು 3 ಬೋಟ್‌ಗಳು ಒಟ್ಟಿಗೆ ಮೀನುಗಾರಿಕೆ ತೆರಳಬೇಕು. ಸೂಕ್ಷ್ಮ ಪ್ರದೇಶಗಳಿಗೆ ಮೀನುಗಾರಿಕೆಗೆ ತೆರಳುವಾಗ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X