ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭವಿದು. ಹೀಗಾಗಿ ಮೇ 15ರಂದು ಯಾರೂ ನನ್ನ ಜನ್ಮದಿನವನ್ನು ಆಚರಣೆ ಮಾಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಭಿಮಾನಿಗಳಿಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಎಕ್ಸ್ ತಾಣದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, “ನಿಮ್ಮ ಆಶೀರ್ವಾದವೇ ನನಗೆ ಶ್ರೀ ರಕ್ಷೆ. ನೀವು ಇರುವ ಜಾಗದಿಂದಲೇ ನನಗೆ ಶುಭ ಹಾರೈಸಿ, ಆಶೀರ್ವದಿಸಿ. ಜನ್ಮದಿನದ ಪ್ರಯುಕ್ತ ಯಾವುದೇ ಪ್ಲೆಕ್ಸ್, ಬ್ಯಾನರ್ ಹಾಕಬೇಡಿ. ಜಾಹೀರಾತು ನೀಡಬೇಡಿ” ಎಂದಿದ್ದಾರೆ.
“ನಾನು ಮೇ 15 ರಂದು ಬೆಂಗಳೂರಿನಲ್ಲಿ ಇರುವುದಿಲ್ಲ. ಹೀಗಾಗಿ ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸಕ್ಕಾಗಲಿ, ಕಚೇರಿಗಾಗಲಿ ಬರಬೇಡಿ. ಯಾರೂ ಅನ್ಯತಾ ಭಾವಿಸಬಾರದು” ಎಂದು ತಿಳಿಸಿದ್ದಾರೆ.
ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭವಿದು. ಹೀಗಾಗಿ ಮೇ 15ರಂದು ಯಾರೂ ನನ್ನ ಜನ್ಮದಿನವನ್ನು ಆಚರಣೆ ಮಾಡುವುದು ಬೇಡ ಎಂದು ವಿನಂತಿ ಮಾಡುತ್ತೇನೆ.
— DK Shivakumar (@DKShivakumar) May 14, 2025
ನಿಮ್ಮ ಆಶೀರ್ವಾದ ಸದಾ ಹೀಗೆ ಇರಲಿ, ಅದುವೇ ನನಗೆ ಶ್ರೀರಕ್ಷೆ.
ನಿಮ್ಮ ಡಿ ಕೆ ಶಿವಕುಮಾರ್ pic.twitter.com/UYKMf7Wb6I