ಕಲಬುರಗಿ ನಗರದ ಎಂಎಸ್‌ಕೆ ಮಿಲ್ ಬಳಿ ನಿರ್ಮಾಣವಾಗುತ್ತಿರುವ ಕಣ್ಣಿ ತರಕಾರಿ ಮಾರುಕಟ್ಟೆ ಕಟ್ಟಡ ಕಾಮಗಾರಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತರಕಾರಿ ಮಾರಾಟಗಾರರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗುವ ರೀತಿ ಸೌಲಭ್ಯಗಳನ್ನು ವಿಶೇಷವಾಗಿ ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ, ವಾಹನ ನಿಲುಗಡೆಗೆ ಅಗತ್ಯ ಸ್ಥಳಾವಕಾಶ ಕಲ್ಪಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಕುಡಾ ಅಧ್ಯಕ್ಷ ಮಜರ್ ಆಲಂ ಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಕಮಿಷನರ್ ಡಾ ಶರಣಪ್ಪ, ಎಸ್ ಪಿ ಅಡ್ಡೂರು ಶ್ರೀನಿವಾಸಲು ಹಾಗೂ ಮಹಾನಗರ ಪಾಲಿಕೆ ಕಮೀಷನರ್ ಇದ್ದರು.