ಉಡುಪಿ | ತೆರೆಗೆ ಬರಲು ಸಜ್ಜಾಗಿದೆ ಕರಾವಳಿಯ ಮತ್ತೊಂದು ಸಿನೆಮಾ “ಲೈಟ್ ಹೌಸ್”

Date:

Advertisements

ಆಸ್ತ್ರ ಪ್ರೊಡಕ್ಷನ್ಸ್ ಹಾಗೂ ಅಮೆ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ “ಲೈಟ್ ಹೌಸ್” ಕನ್ನಡ ಚಲನಚಿತ್ರ ಇದೇ ಮೇ 16 ರಂದು ತೆರೆಗೆ ಬರಲು ಸಜ್ಜಾಗಿದೆ ಎಂದು ಚಿತ್ರದ ನಿರ್ದೇಶಕ ಸಂದೀಪ್ ಕಾಮತ್ ಅಜೆಕಾರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಶ್ರೀ ದತ್ತಾತ್ರೆಯ ಪಾಟ್ಕರ್ ಬಂಟಕಲ್ಲು ಇವರ ನಿರ್ಮಾಣದಲ್ಲಿ, ಸಂದೀಪ್ ಕಾಮತ್ ಅಜೆಕಾರು ಇವರ ನಿರ್ದೇಶನದಲ್ಲಿ ಸಿನೆಮಾ ಮೂಡಿಬಂದಿದ್ದು. ಕರಾವಳಿ ಭಾಗದ ಕಲೆ-ಸಂಸ್ಕೃತಿ-ಆಚಾರ-ವಿಚಾರಗಳನ್ನು ಬಹಳ ಸುಂದರವಾಗಿ ಸಿನೆಮಾದಲ್ಲಿ ತೋಸಿಸಲಾಗಿದೆ. ಚಿತ್ರದ ಬಹುತೇಕ ಎಲ್ಲಾ ಚಿತ್ರೀಕರಣವನ್ನು ಉಡುಪಿಯಲ್ಲಿ ನಡೆಸಲಾಗಿದ್ದು. ಕರಾವಳಿಯ ಸೌಂದರ್ಯವನ್ನು ಸಿನೆಮಾದಲ್ಲಿ ಸೆರೆಹಿಡಿಯಲಾಗಿದೆ.

1005397952

“ಲೈಟ್ ಹೌಸ್” ಸಂಪೂರ್ಣ ಸಾಂಸಾರಿಕ ಚಿತ್ರವಾಗಿದ್ದು, ಇಡೀ ಸಂಸಾರ ಮಕ್ಕಳ ಜೊತೆ ಕೂತು ನೋಡುವ ಸಿನೆಮಾ ಇದಾಗಿದ್ದು, ಪ್ರಸ್ತುತ ಕನ್ನಡ ಮಾದ್ಯಮ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು, ನೇತ್ರದಾನದ ಮಹತ್ವ ಹಾಗೂ ಕರಾವಳಿಯ ಕಲೆ-ಸಂಸ್ಕೃತಿಯನ್ನು ಸಮಾಜಕ್ಕೆ ತೋರಿಸುವ ಕಥೆ ಈ ಚಿತ್ರದಲ್ಲಿದೆ.

Advertisements

ಹೆಸರಾಂತ ಕಲಾವಿದರಾದ ಶೋಭರಾಜ್ ಪಾವೂರು, ಮಾನಸಿ ಸುಧೀರ್, ಪ್ರಕಾಶ್ ತೂಮಿನಾಡು, ದೀಪಕ್ ರೈ ಪಾಣಾಜೆ, ಪೃಥ್ವಿ ಅಂಬರ್, ರಾಹುಲ್ ಅಮೀನ್, ಶೈಲಶ್ರೀ ಮುಲ್ಕಿ, ಶೀತಲ್ ನಾಯಕ್, ಅಚಲ್ ಜಿ ಬಂಗೇರ, ಅಪೂರ್ವ ಮಾಳ, ಚಂದ್ರಕಲಾ ರಾವ್, ತಿಮ್ಮಪ್ಪ ಕುಲಾಲ್, ನಮಿತಾ ಕಿರಣ್ ಮುಂತಾದವರು ಚಿತ್ರದ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

ಚಿತ್ರದಲ್ಲಿ ಒಟ್ಟು 4 ಹಾಡುಗಳಿದ್ದು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹಾಗೂ ಕ್ಲಿಂಗ್ ಜಾನ್ಸನ್ ಇವರ ಸಾಹಿತ್ಯಕ್ಕೆ ಹೆಸರಾಂತ ಗಾಯಕರಾದ ವಿಜಯ್ ಪ್ರಕಾಶ್, ವಾಸುಕೀ ವೈಭವ್, ಪೃಥ್ವಿ ಭಟ್, ದಿಯಾ ಹೆಗ್ಡೆ ಚಿತ್ರದ ಹಾಡುಗಳಿಗೆ ಧ್ವನಿ ನೀಡಿರುತ್ತಾರೆ.

1005397806

ಚಿತ್ರದ ಛಾಯಗ್ರಹಣ ಹಾಗೂ ಸಂಕಲನದ ಜವಬ್ದಾರಿಯನ್ನು ಪ್ರಜ್ವಲ್ ಸುವರ್ಣ ವಹಿಸಿಕೊಂಡಿದ್ದು, ಚಿತ್ರಕ್ಕೆ ಸಂಗೀತವನ್ನು ಕಾರ್ತಿಕ್ ಮುಲ್ಕಿ ನೀಡಿರುತ್ತಾರೆ. ಉಡುಪಿ ನಮ್ಮ ಊರು ಹಾಡಿಗೆ ಗಿರಿಧರ್ ದಿವಾನ್ ಸಂಗೀತವನ್ನು ನೀಡಿರುತ್ತಾರೆ.

ಮೇ 16 ರಂದು “ಲೈಟ್ ಹೌಸ್” ಚಲನಚಿತ್ರ ರಾಜ್ಯದ ಬಹುತೇಕ ಕಡೆಗಳಲ್ಲಿ ತೆರೆಕಾಣಲಿದ್ದು ಚಿತ್ರದಲ್ಲಿ ಸಮಾಜದ ಜನತೆಗೆ ಹಾಗೂ ಮಕ್ಕಳಿಗೆ ಅನೇಕ ಸಂದೇಶಗಳು ಇದ್ದು, ಪ್ರತೀ ಒಬ್ಬ ಪೋಷಕರು ತಮ್ಮ ಮಕ್ಕಳೊಂದಿಗೆ ಕೂತು ಸಿನೆಮಾವನ್ನು ನೋಡಬಹುದಾಗಿದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

Download Eedina App Android / iOS

X