ಉಡುಪಿ | ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ ಶಿಕ್ಷಕರನ್ನು ವೃತ್ತಿಯಿಂದ ವಜಾಗೊಳಿಸಲು ಎಸ್ ಡಿ ಪಿ ಐ ಆಗ್ರಹ

Date:

Advertisements

ಉಡುಪಿ ಜಿಲ್ಲೆಯ ಶಿರೂರಿನ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಯ ಮೇಲೆ ಶಿಕ್ಷಕರೊಬ್ಬರು ಅಮಾನುಷವಾಗಿ ಹಲ್ಲೆ ನಡೆಸಿರುವ ಹಳೆಯ ಘಟನೆಯೊಂದು ವಿಡಿಯೋ ವೈರಲ್ ಆಗುವ ಮೂಲಕ ಇಂದು ಬೆಳಕಿಗೆ ಬಂದಿದೆ.

ಈ ಘಟನೆ ಸುಮಾರು 7 ತಿಂಗಳ ಹಿಂದೆ ನಡೆದಿದ್ದು ಮಕ್ಕಳು ತರಗತಿಯಲ್ಲಿ ನಡೆಸುವ ಸಣ್ಣ ಪುಟ್ಟ ಚೇಷ್ಟೆಯನ್ನೇ ನೆಪವಾಗಿ ಇಟ್ಟುಕೊಂಡು ವಿನಾಯಕ ಕಾರ್ವಿ ಎಂಬ ಶಿಕ್ಷಕ ವಿದ್ಯಾರ್ಥಿಯ ಮೇಲೆ ಅತ್ಯಂತ ಅಮಾನುಷವಾಗಿ ಹಲ್ಲೆಯನ್ನು ನಡೆಸಿದ್ದಾರೆ. ಮಕ್ಕಳಿಗೆ ಮಾನವೀಯತೆಯ, ನೈತಿಕತೆಯ ಮೌಲ್ಯಗಳನ್ನು ಕಲಿಸಿ ಕೊಡಬೇಕಾದ ಶಿಕ್ಷಕರೇ ವಿದ್ಯಾರ್ಥಿ ಮೇಲೆ ಈ ರೀತಿಯ ದೌರ್ಜನ್ಯವೆಸಗಿರುವುದು ಖಂಡನೀಯ. ಮಾನವೀಯತೆ ಹಾಗೂ ಕರುಣೆ ಇಲ್ಲದ ಇಂತವರು ಶಿಕ್ಷಕ ವೃತ್ತಿಯಲ್ಲಿ ಇರಲು ಅನರ್ಹರು ಆದ್ದರಿಂದ ಆಡಳಿತ ಮಂಡಳಿ ಇವರನ್ನು ಕೂಡಲೇ ಕೆಲಸದಿಂದ ವಜಾಗೊಳಿಸಬೇಕು.

ಇದಲ್ಲದೆ ಈ ಶಿಕ್ಷಕನ ವಿರುದ್ಧ ಇದೇ ರೀತಿಯ ಹಲವು ಆರೋಪಗಳಿದ್ದು ಧರ್ಮದ ಆಧಾರದಲ್ಲಿ ಇವರು ವಿಧಾರ್ಥಿಗಳ ನಡುವೆ ತಾರತಮ್ಯ ಎಸಗುತ್ತಾರೆ ಎಂಬ ಆರೋಪವು ಕೇಳಿ ಬಂದಿದೆ. ಆದ್ದರಿಂದ ಪೊಲೀಸ್ ಇಲಾಖೆ ಇವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ರವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X