ನಿರಂತರವಾಗಿ ಸುರಿದ ಮಳೆಯಿಂದ ತುಂಬಿ ಹರಿಯುತ್ತಿದ್ದ ಚರಂಡಿಗೆ ಕಾಲು ಜಾರಿ ಬಿದ್ದ ವ್ಯಕ್ತಿ ನಾಪತ್ತೆಯಾದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದ ಅಬ್ದುಲ್ ಕಲಾಮ್ ಕಾಲೇಜು ಬಳಿ ಮಂಗಳವಾರ ಸಂಜೆ ನಡೆದಿದ್ದು, ಶೋಧಕಾರ್ಯ ಮುಂದುವರಿದಿದೆ.
ಕಾಶಪ್ಪ ಶಿರಟ್ಟಿ (52) ಚರಂಡಿಯಲ್ಲಿ ಕೊಚ್ಚಿಹೋದ ವ್ಯಕ್ತಿ ಎಂಬುದು ತಿಳಿದುಬಂದಿದೆ. ಧಾರಾಕಾರ ಸುರಿದ ಮಳೆಯಿಂದ ರಸ್ತೆ ಹಾಗೂ ಚರಂಡಿಗಳು ತುಂಬಿ ಹರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.