ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ:‌ ಸಿಎಂ ಸಿದ್ದರಾಮಯ್ಯ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ ಸಭೆ ವಿಧಾನಸೌಧದಲ್ಲಿ ಗುರುವಾರ ನಡೆಯಿತು.

ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ. ಜನರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಯೋಜನಾ ಮತ್ತು ಅಭಿವೃದ್ಧಿ ಸಮಿತಿಗಳು ಬಜೆಟ್ ಮಂಡನೆಗೆ ಪೂರ್ವದಲ್ಲಿ ಸಭೆ ಕರೆದು ಅಭಿಪ್ರಾಯಗಳನ್ನು ಚರ್ಚಿಸಬೇಕು ಎಂದು ಸಭೆಯಲ್ಲಿ ಸಿಎಂ ಸೂಚಿಸಿದರು.

“ರಾಜ್ಯದ ನೀತಿ ಆಯೋಗದ ಉಪಾಧ್ಯಕ್ಷರು ನಿಯಮಿತವಾಗಿ ರಾಜ್ಯ ಪ್ರವಾಸ ಮಾಡಬೇಕು. ನೀತಿ ಯೋಜನೆ ಸಮಿತಿಗಳ ಆಯ್ಕೆ ಕಾಲಕಾಲಕ್ಕೆ ಆಗುವ ಕುರಿತಂತೆ ಹಾಗೂ  ಸಭೆಗಳು ನಿಯಮಿತವಾಗಿ ನಡೆಯಲು ಅಧಿಕಾರಿಗಳು ಕ್ರಮ ವಹಿಸಬೇಕು. ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಯಬೇಕು. ಇದಕ್ಕೆ ಕ್ರಮ ಕೈಗೊಳ್ಳಲಾಗುವಂತೆ ಜಿಲ್ಲಾಧಿಕಾರಿಗಳು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗುವುದು. ತಾಲ್ಲೂಕು, ಜಿಲ್ಲಾ ಮಟ್ಟದ ಸಮಿತಿಯ ಶಿಫಾರಸುಗಳನ್ನು ಗಮನಕ್ಕೆ ತಂದು ಬಜೆಟ್ ಪೂರ್ವ ಸಭೆಗಳಲ್ಲಿ ಮಂಡಿಸಬೇಕು” ಎಂದು ಹೇಳಿದರು.

Advertisements

ನಾನು ವಿಕೇಂದ್ರೀಕರಣದ ಪರ, ಅಧಿಕಾರವನ್ನು ಗ್ರಾಮ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು. ಸಂವಿಧಾನದ (73)(74) ರನ್ವಯ ಗ್ರಾಮ , ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿಲ್ಲ ಇದನ್ನು ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಿ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿದೆಯೇ ಗಮನ ವಹಿಸಲು ಉಪಾಧ್ಯಕ್ಷರಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಿರಂಗಾ ಯಾತ್ರೆ, ಸೈನಿಕರ ನಿಂದನೆ ಮತ್ತು ದೇಶಭಕ್ತಿ

“ಸ್ಥಳೀಯ ಸಂಸ್ಥೆಗಳ ಆರ್ಥಿಕ ಸಹಾಯ ಒದಗಿಸಲು ಹಣಕಾಸು ಆಯೋಗದ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ ಅವರು ವರದಿಯನ್ನು ನೀಡಿದ್ದು ಅದರ ಜಾರಿಗೆ ಕ್ರಮ ವಹಿಸಲಾಗುವುದು. ಸಂವಿಧಾನದ 73ನೇ ತಿದ್ದುಪಡಿ ಅನ್ವಯ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಜವಾಬ್ದಾರಿ ನಕ್ಷೆಯನ್ನು ಸಿದ್ದಪಡಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿತ್ತು. ಅದರಂತೆ
ಗ್ರಾಮೀಣಾಭಿವೃದ್ಧಿ ಇಲಾಖೆಯು 13 ಇಲಾಖೆಗಳಿಗೆ ಸಂಬಂಧಿಸಿದಂತೆ ಜವಾಬ್ದಾರಿ ನಕ್ಷೆಯನ್ನು ಸಿದ್ದಪಡಿಸಿದ್ದು ಅದರಲ್ಲಿ ಆರೋಗ್ಯ ಇಲಾಖೆ, ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ, ಕೃಷಿ, ಜಲಾನಯನ ಅಭಿವೃದ್ಧಿ, ತೋಟಗಾರಿಕೆ ಮತ್ತು ರೇಷ್ಮೆ ಸೇರಿದಂತೆ 9 ಇಲಾಖೆಗಳ ಕಾರ್ಯಚಟುವಟಿಕೆಯ ಜವಾಬ್ದಾರಿ ನಕ್ಷೆಗಳು ಅಧಿಸೂಚನೆಗೊಂಡಿವೆ.  ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳಿಂದ ಸಹಮತಿ ಬಾಕಿ ಇರುತ್ತದೆ” ಎಂದರು.

2ನೇ ಹಂತದಲ್ಲಿ  ಬಾಕಿ ಇರುವ ಉಳಿದ 16 ಇಲಾಖೆಗಳ ಕಾರ್ಯಚಟುವಟಿಕೆಗಳ ಜವಾಬ್ದಾರಿ ನಕ್ಷೆಯನ್ನು 2025ರ ಆಗಸ್ಟ್ 15ರ ಒಳಗೆ ಪೂರ್ಣಗೊಳಿಸಬೇಕು. ಗ್ರಾಮ ಠಾಣಾ ಗಡಿಯನ್ನು ಬಹಳ ಹಿಂದೆ ನಿಗದಿ ಪಡಿಸಲಾಗಿದ್ದು  ಪ್ರಸ್ತುತ ವಿಸ್ತರಣೆ ಆಗಿರುವ ಪ್ರದೇಶವನ್ನು
ಪುನರ್ ಸಮೀಕ್ಷೆ  ಮಾಡಿಸಿ ನಿಗದಿ ಪಡಿಸಲು ಕಂದಾಯ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕ್ರಮ ವಹಿಸುವ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸಲು ಲ್ಯಾಂಡ್ ಬ್ಯಾಂಕ್ ಸ್ಥಾಪನೆ , ಗ್ರಾಮ ನಕ್ಷೆ ಹೊಂದಿರದ ಗ್ರಾಮಗಳಿಗೆ ಗ್ರಾಮ ನಕ್ಷೆ ರಚನೆ ಕುರಿತಂತೆಯೂ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X