ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

Date:

Advertisements

ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಅವರ ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ ₹2,000 ಗಳಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

1001614266

ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹10,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹10,500 ಗೌರವ ಸಂಭಾವನೆಯನ್ನು ನಿಗದಿಪಡಿಸಿತ್ತು. ಇದೀಗ, ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹2,000 ಗಳನ್ನು ಸೇರಿಸಲಾಗಿದ್ದು, ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹12,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹12,500 ಆಗಲಿದೆ.

1001614265

ಅಂತೆಯೇ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ ₹2,000 ಗಳಷ್ಟು ಗೌರವಧನ ಹೆಚ್ಚಳವಾಗಲಿದೆ. ಈ ಹಿಂದೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ₹12,000 ನಿಗದಿಯಾಗಿತ್ತು.

Advertisements

ಇಂದಿನ ಆದೇಶದಿಂದ ಪರಿಷ್ಕೃತ ಗೌರವ ಸಂಭಾವನೆಯು ಅತಿಥಿ ಉಪನ್ಯಾಸಕರಿಕೆ ₹14,000 ಆಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X