ಶಹಾಪೂರ ತಾಲೂಕು ತಹಶೀಲ್ದಾರ್ ಉಮಾಕಾಂತ ಹಳ್ಳೆಯವರು ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆ ಅವರ ಮನೆ ಮೇಲೆ ನಿನ್ನೆ ಲೋಕಾಯುಕ್ತ ದಾಳಿ ನಡೆಸಿದೆ.
ಕಲಬುರಗಿ ನಗರದ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿರುವುದಾಗಿ ತಿಳಿದು ಬಂದಿದೆ. ಬಳಿಕ ಶಹಾಪೂರ ತಹಶೀಲ್ದಾರ್ ಕಚೇರಿಯಲ್ಲಿ ದಾಖಲೆ ಪರೀಶಿಲನೆ ನಡೆಯುತ್ತಿದೆ.
ಲೋಕಾಯುಕ್ತ ಡಿವೈಎಸ್ಪಿ ಜೆ ಎಚ್ ಇನಾಂದಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇನ್ಸ್ಪೆಕ್ಟರ್ ಸಿದ್ದರಾಯ, ಸಂಗಮೇಶ, ಅರ್ಜುನಪ್ಪ, ಅಕ್ಕಮಹಾದೇವಿ, ಬಾಬಾ ಸಾಹೇಬ ಪಾಟೀಲ್ ಇದ್ದರು.