ಯಾದಗಿರಿ | ಬಿರಾದಾರ ಆಸ್ಪತ್ರೆಯಲ್ಲಿ ಮಗು ಸಾವು; ಎಫ್‌ಐಆರ್ ನಂತರವೂ ಕ್ರಮಕ್ಕೆ ನಿರ್ಲಕ್ಷ್ಯ

Date:

Advertisements

ಯಾದಗಿರಿ ನಗರದ ಡಾ. ಎಸ್ ಎಂ ಬಿರಾದಾರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಮ್ಮ ಕರ್ನಾಟಕ ಸೇನೆ ಯಾದಗಿರಿ ಜಿಲ್ಲಾ ಘಟಕ ಆರೋಪಿಸಿದೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ರೀದೇವಿ ಎನ್ ಕಟ್ಟಿಮನಿ ಮಾತನಾಡಿ, “‘ಆಸ್ಪತ್ರೆಯಿಂದ ಈಗಾಗಲೇ ಇಂತಹ ಪ್ರಕರಣಗಳು ವರದಿಯಾಗಿದ್ದು, 45 ದಿನಗಳ ಶಿಶುವಿಗೆ ಅವಧಿ ಮುಗಿದ ವ್ಯಾಕ್ಸಿನ್ ಹಾಕಿದ ಪ್ರಕರಣ ಸೇರಿದಂತೆ ರಾಮಸಮುದ್ರ ಗ್ರಾಮದ ಚೇಳು ಕಡಿದ ಮಗುವಿನ ಸಾವಿನ ಪ್ರಕರಣಗಳು ನಡೆದಿವೆ. ಈ ಎಲ್ಲ ಘಟನೆಗಳಿಗೆ ಆಸ್ಪತ್ರೆ ವೈದ್ಯರು ಹಾಗೂ ಹೆಚ್ಚುವರಿ ಔಷಧ ನಿಯಂತ್ರಕರು ಸೇರಿದಂತೆ 5 ಜನರ ಮೇಲೆ ಯಾದಗಿರಿ ನಗರ ಠಾಣೆಯಲ್ಲಿ ಕಳೆದ ಮಾರ್ಚ್‌ನಲ್ಲಿಯೇ ಪ್ರಕರಣ ದಾಖಲಾಗಿದೆ. ನಗರದ ದೇವಮ್ಮ ಎನ್ನುವವರ 45 ದಿನದ ಮಗುವಿಗೆ 2022 ರಲ್ಲಿಯೇ ಅವಧಿ ಮುಗಿದ ವ್ಯಾಕ್ಸಿನ್ ಅನ್ನು ಈ ವರ್ಷದ ಫೆಬ್ರವರಿಯಲ್ಲಿ ಹಾಕಿದ್ದಾರೆ. ಇದನ್ನು ತಿಳಿದ ಮಗುವಿನ ತಂದೆ ದೂರು ದಾಖಲಿಸಿದ್ದಾರೆ. ಇದಲ್ಲದೇ ಚೇಳು ಕಡಿತಕ್ಕೊಳಗಾದ ಮಗುವಿಗೂ ಸರಿಯಾಗಿ ಚಿಕಿತ್ಸೆ ನೀಡದೇ ಮಗುವಿನ ಸಾವಿಗೆ ಕಾರಣರಾಗಿದ್ದಾರೆ. ವಾಸ್ತವದಲ್ಲಿ ಹೃದಯ ತಜ್ಞರಾಗಿರುವ ಇವರು ತಮಗೆ ಸಂಬಂಧವಿಲ್ಲದ ಚಿಕಿತ್ಸೆ ನೀಡಿ ಅಮಾಯಕರ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಯಾದಗಿರಿ | ನೀರು ಕುಡಿಯಲು ಹೋದ ಮೂವರು ಬಾಲಕರು ದುರ್ಮರಣ

Advertisements

“ಪ್ರಕರಣ ಸಂಬಂಧ 10 ದಿನಗಳ ಒಳಗಾಗಿ ಆಸ್ಪತ್ರೆ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಆಸ್ಪತ್ರೆಗೆ ಮುಳ್ಳುಬೇಲಿ ಹಚ್ಚಿ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆನೀಡಿದರು.

ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X