ಹಾಸನ | ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಲು ಆಗ್ರಹ; ತೆಂಗು ಬೆಳೆಗಾರರಿಂದ ಪ್ರತಿಭಟನಾ ಸಮಾವೇಶ

Date:

Advertisements
  • ತೆಂಗು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಿ
  • ವಿದ್ಯುತ್‌ ಪಂಪ್‌ಸೆಟ್‌ಗಳಿಗೆ ಡಿಜಿಟಲ್‌ ಮೀಟರ್ ಅಳವಡಿಕೆ ಹಿಂಪಡೆಯಲಿ

ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕು ಮತ್ತು ತೆಂಗು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ತೆಂಗು ಬೆಳೆಗಾರರ ಹೋರಾಟ ಸಮಿತಿ ಮತ್ತು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ಚನ್ನರಾಯಪಟ್ಟಣ ತಾಲೂಕು ಸಮಿತಿ ನೇತೃತ್ವದಲ್ಲಿ ತೆಂಗು ಬೆಳೆಗಾರರ ಸಮಾವೇಶ ನಡೆಸಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಇದಕ್ಕೂ ಮುನ್ನ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ತೆಂಗು ಬೆಳೆಗಾರರ ಸಮಾವೇಶದಲ್ಲಿ ರೈತರು ಮತ್ತು ರೈತ ಮುಖಂಡರು ತೆಂಗು ಬೆಳೆಗಾರರ ಸಮಸ್ಯೆಗಳು ಮತ್ತು ಪರಿಹಾರ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಹತ್ತಾರು ವರ್ಷಗಳ ಕಾಲ ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ಬೆಳೆದ ತೆಂಗಿನ ಫಸಲು ಕೈಗೆ ಬಂದ ಮೇಲೆ ಮಾರುಕಟ್ಟೆಯಲ್ಲಿ ತೆಂಗು ಮತ್ತು ಕೊಬ್ಬರಿಗೆ ಬೆಲೆಗಳು ಪಾತಾಳಕ್ಕೆ ಕುಸಿದಿದೆ ಎಂದು ತೆಂಗು ಬೆಳೆಗಾರರು ತಮ್ಮ ಅಳಲು ತೋಡಿಕೊಂಡರು.

ಕೃಷಿ ಉತ್ಪನ್ನಗಳಿಗೆ ಬಳಸುವ ಎಲ್ಲ ಸಾಮಗ್ರಿಗಳ ಬೆಲೆ ಏರಿಕೆಯಿಂದಾಗಿ ಕೃಷಿ ಉತ್ಪಾದನಾ ವೆಚ್ಚ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ, ರೈತರ ಪರಿಸ್ಥಿತಿ ಅತ್ಯಂತ ದುಸ್ತರವಾಗುತ್ತಿದೆ. ನಷ್ಟವಾಗುತ್ತಿರುವ ಕಾರಣ ರೈತರು ಕೃಷಿಯನ್ನು ಬಿಟ್ಟು ನಗರಗಳಿಗೆ ಕೆಲಸಕ್ಕೆ ವಲಸೆ ಹೋಗುತ್ತಿದ್ದಾರೆ. ಇಂತಹ ಪರಿಸ್ಥಿತಿಯನ್ನು ತಡೆಗಟ್ಟಬೇಕಿದ್ದರೆ ತೆಂಗು ಮತ್ತು ಕೊಬ್ಬರಿಗೆ ಕೃಷಿ ತಜ್ಞ ಡಾ. ಎಂ ಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸ್ಸಿನಂತೆ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.

Advertisements
ತೆಂಗು ಬೆಳೆಗಾರರ ಪ್ರತಿಭಟನೆ
ಚನ್ನರಾಯಪಟ್ಟಣ ತಹಶೀಲ್ದಾರ್‌ ಕಚೇರಿ ಎದುರು ತೆಂಗು ಬೆಳೆಗಾರರು ಪ್ರತಿಭಟನೆ ನಡೆಸಿದರು.

ಒಂದು ಅಂದಾಜಿನ ಪ್ರಕಾರ ಒಂದು ತೆಂಗಿನ ಕಾಯಿಗೆ ಕನಿಷ್ಠ 50 ರೂಪಾಯಿ ಮತ್ತು ಒಂದು ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ 25 ಸಾವಿರ ರೂಪಾಯಿ ಬೆಲೆಯನ್ನು ಸರ್ಕಾರವೇ ನಿಗದಿ ಮಾಡಬೇಕು. ಜೊತೆಗೆ ಸ್ಥಳೀಯ ಎಪಿಎಂಸಿಗಳಲ್ಲಿ ನಡೆಯುವ ಭ್ರಷ್ಟಾಚಾರವನ್ನು ತಡೆಗಟ್ಟಿ ಎಪಿಎಂಸಿ ಮಾರುಕಟ್ಟೆಯನ್ನು ಬಲಪಡಿಸಬೇಕು, ರೈತರಿಗೆ ಸ್ಥಳೀಯ ಮಾರುಕಟ್ಟೆಯನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಗಾಯದ ಮೇಲೆ ಬರೆ

ರೈತರ ಗಾಯದ ಮೇಲೆ ಬರೆ ಎಳದಂತೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ವಿದ್ಯುತ್‌ ಪಂಪ್‌ಸೆಟ್‌ಗಳಿಗೆ ಡಿಜಿಟಲ್‌ ಮೀಟರ್ ಅಳವಡಿಸುವ ಮೂಲಕ ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿದೆ. ಕೂಡಲೇ ಇಂತಹ ರೈತ ವಿರೋಧಿ ನೀತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ವಿಶೇಷ ಪ್ಯಾಕೇಜ್‌ ಘೋಷಿಸಿ

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತೆಂಗು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು, ಉತ್ತಮ ಮಾರುಕಟ್ಟೆ ಒದಗಿಸಲು ವಿಶೇಷ ಪ್ಯಾಕೇಜನ್ನು ಘೋಷಿಸಬೇಕು. ಹಾಗೆ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆಗಳನ್ನು ಬಲಪಡಿಸಿ ಕೃಷಿಗೆ ಪೂರಕವಾಗಿ ರೈತರಿಗೆ ಅನುಕೂಲವಾಗುವಂತೆ ಎಪಿಎಂಸಿ ಮಾರುಕಟ್ಟೆ ಬಲಪಡಿಸಿ, ಭ್ರಷ್ಟಾಚಾರ ನಿರ್ಮೂಲನೆ ಮಾಡಿ ತೆಂಗುಬೆಳೆಗಾರರ ಸಮಸ್ಯೆಗಳ ಬಗೆಹರಿಸಬೇಕು ಎಂದು ತೆಂಗು ಬೆಳೆಗಾರರು ತಮ್ಮ ಹಕ್ಕೊತ್ತಾಯ ಮಾಡಿದರು.

ತೆಂಗು ಬೆಳೆಗಾರರ ಸಮಾವೇಶ
ಚನ್ನರಾಯಪಟ್ಟಣದ ಅಂಬೇಡ್ಕರ್ ಭವನದಲ್ಲಿ ತೆಂಗು ಬೆಳೆಗಾರರ ಸಮಾವೇಶ ನಡೆಯಿತು

ಬೇಡಿಕೆಗಳು

  • ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಕರ್ನಾಟಕ ಕೃಷಿ ಬೆಲೆ ಆಯೋಗದ ಶಿಫಾರಸ್ಸಿನಂತೆ ಕೂಡಲೇ ಒಂದು ಕ್ವಿಂಟಾಲ್ ದುಂಡು ಕೊಬ್ಬರಿಯ ಬೆಲೆಯು 16,730 ರೂ. ನಿಗದಿಯಾಗಬೇಕು.
  • ತೆಂಗಿನ ಬೆಲೆಯೂ ಮಾರುಕಟ್ಟೆಯಲ್ಲಿ ವಿಪರೀತ ಕುಸಿತ ಕಂಡಿರುವುದರಿಂದ ಕೃಷಿ ತಜ್ಞ ಡಾ. ಎಂ ಎಸ್ ಸ್ವಾಮಿನಾಥನ್‌ ಆಯೋಗದ ಶಿಫಾರಸ್ಸಿನಂತೆ ಉತ್ಪಾದನಾ ವೆಚ್ಚಕ್ಕೆ ಶೇ.50 ರಷ್ಟು ಲಾಭಾಂಶ ಸೇರಿಸಿ ಬೆಲೆ ನಿಗದಿ ಮಾಡಬೇಕು.
  • ತೆಂಗು ಮತ್ತು ಕೊಬ್ಬರಿಯನ್ನು ಎಪಿಎಂಸಿ ಮಾರುಕಟ್ಟೆಯ ಮೂಲಕ ರಾಜ್ಯ ಸರ್ಕಾರವೇ ಖರೀದಿಸಬೇಕು.
  • ಪ್ರಸ್ತುತ ನಫೆಡ್‌ (NAFED) ಮೂಲಕ ನಡೆಯುತ್ತಿರುವ ಕೊಬ್ಬರಿ ಮಾರುಕಟ್ಟೆಯಲ್ಲಿಯೂ ಕರ್ನಾಟಕ ಕೃಷಿ ಬೆಲೆ ಆಯೋಗದ ಶಿಫಾರಸ್ಸಿನಂತೆ ಕೂಡಲೇ ಒಂದು ಕ್ವಿಂಟಾಲ್ ದುಂಡು ಕೊಬ್ಬರಿಯ ಬೆಲೆಯು 16,730 ರೂ. ನಿಗದಿಯಾಗಬೇಕು ಮತ್ತು ವರ್ಷ ಪೂರ್ತಿ ಮಾರುಕಟ್ಟೆ ಚಾಲ್ತಿಯಲ್ಲಿರಬೇಕು. ಇಲ್ಲಿರುವ ಭ್ರಷ್ಟಾಚಾರ ತಡೆಗಟ್ಟಿ ರೈತಪರ ನೀತಿಗಳನ್ನು ಜಾರಿಗೊಳಿಸಬೇಕು.
  • ವಿದ್ಯುತ್‌ ಪಂಪ್‌ಸೆಟ್‌ಗಳಿಗೆ ಡಿಜಿಟಲ್ ಮೀಟರ್ ಅಳವಡಿಕೆಯನ್ನು ಕೈಬಿಡಬೇಕು, ಉಚಿತ ವಿದ್ಯುತ್ ಸೌಲಭ್ಯವನ್ನು ಮುಂದುವರೆಸಬೇಕು ಹಾಗೂ ಪಂಪ್‌ಸೆಟ್‌ಗಳ ಆರ್‌ಆರ್‌ ನಂಬರ್ ಮತ್ತು ಆಧಾರ್‌ ಜೋಡಣೆ ಕೈಬಿಡಬೇಕು.
  • ರೈತರಿಗೆ ಅನುಕೂಲವಾಗುವಂತೆ ಎಪಿಎಂಸಿ ಮಾರುಕಟ್ಟೆ ಬಲಪಡಿಸಿ, ಭ್ರಷ್ಟಾಚಾರ ತಡೆಗಟ್ಟಿ, ಮಾರುಕಟ್ಟೆಯ
    ಪ್ರಾಂಗಣದಲ್ಲಿ ರೈತರಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸಬೇಕು.
  • ತೆಂಗಿನ ಉತ್ಪನ್ನ ಮತ್ತು ಉಪ ಉತ್ಪನ್ನಗಳ ಮೌಲ್ಯವರ್ಧನೆಗೆ ಬೇಕಾದಂತೆ ಕೃಷಿ ಆಧಾರಿತ ಕೈಗಾರಿಕೆಗಳನ್ನು
    ಸ್ಥಾಪಿಸಬೇಕು.
  • ತೆಂಗು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು.
  • ತೆಂಗು ಬೆಳೆಗಾರರ ಸಮಸ್ಯೆಗಳನ್ನು ಆಲಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮತ್ತು ರೈತ ಸಂಘಟನೆಗಳನ್ನು ಒಳಗೊಂಡ ಜಂಟಿ ಸಭೆಯನ್ನು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಸಬೇಕು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಜೈನಮುನಿ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹ

ತೆಂಗು ಬೆಳೆಗಾರರ ಪ್ರತಿಭಟನಾ ಸಮಾವೇಶದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎಚ್ ಆರ್ ನವೀನ್ ಕುಮಾರ್, ಮುಖಂಡರಾದ ಎಚ್ ಎಸ್ ಮಂಜುನಾಥ್, ತುಮಕೂರು ಜಿಲ್ಲಾ ಮುಖಂಡರಾದ ಚನ್ನಬಸಣ್ಣ, ತಾಲೂಕು ಮುಖಂಡರಾದ ವಾಸುದೇವ ಕಲ್ಕೆರೆ, ವಳಗೆರಳ್ಳಿ ರಾಮಚಂದ್ರ, ಕೃಷ್ಣೇಗೌಡ, ಕಬ್ಬಳಿ ದೊರೆಸ್ವಾಮಿ, ಚೌಡೇನಹಳ್ಳಿ ಕೃಷ್ಣೇಗೌಡ, ಮಿಲ್ಟ್ರಿ ಮಂಜು, ರಾಜ್ಯ ರೈತ ಸಂಘದ ಹರೀಶ್, ಮೀಸೆ ಮಂಜಣ್ಣ ಹಾಗೂ ಇತರರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X