ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಗೆ ವಿನಯ್‌ಕುಮಾರ ಮಾಳಗೆ ಅವರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
‘ಕರ್ನಾಟಕದ ಜೀವ ವೈವಿಧೃತೆಯ ಸಂರಕ್ಷಣೆ, ಅರಣ್ಯ ರಕ್ಷಣೆ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಹಸಿರು ಆವರಣ ವೃದ್ಧಿಸಲು ನಾನು ರಚನಾತ್ಮಕವಾಗಿ ಕೆಲಸ ಮಾಡಲು ಬದ್ದನಾಗಿದ್ದೇನೆ. ರಾಜ್ಯದ ಸುಸ್ಥಿರ ಭವಿಷ್ಯಕ್ಕಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ’ ಎಂದರು.
‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರಣ್ಯ ಪ್ರದೇಶ ವೃದ್ಧಿ, ಹುಲ್ಲುಗಾವಲು ಪ್ರದೇಶದ ಸಂರಕ್ಷಣೆ ಹಾಗೂ ಅಲ್ಲಿನ ಜೀವ ವೈವಿಧ್ಯದ ಸಂರಕ್ಷಣೆಗೆ ವಿಶೇಷ ಒತ್ತು ನೀಡಲಾಗುವುದು’ ಎಂದು ತಿಳಿಸಿದ್ದಾರೆ.