ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧ: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್

Date:

Advertisements

ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧವಾಗಿದ್ದೇವೆ ಎಂದು ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಭಾರತವನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಭಾರತದ ಪಂಜಾಬ್ ಪ್ರಾಂತ್ಯದಲ್ಲಿರುವ ಕಮ್ರಾ ವಾಯುನೆಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶೆಹಬಾಜ್ ಈ ಹೇಳಿಕೆ ನೀಡಿದ್ದಾರೆ.

ಕಮ್ರಾ ವಾಯುನೆಲೆಯಲ್ಲಿ ಇತ್ತೀಚೆಗೆ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಸೇನಾ ಘರ್ಷಣೆಯಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಮತ್ತು ಸೈನಿಕರೊಂದಿಗೆ ಪಾಕ್ ಪ್ರಧಾನಿ ಸಂವಾದ ನಡೆಸಿದರು. ಬಳಿಕ “ನಾವು ಅದರೊಂದಿಗೆ (ಭಾರತ) ಶಾಂತಿ ಮಾತುಕತೆ ನಡೆಸಲು ಸಿದ್ಧರಿದ್ದೇವೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ

Advertisements

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶವು ನಮ್ಮ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗಗಳಾಗಿವೆ ಎಂದು ಭಾರತ ಹೇಳಿದೆ. ಆದರೆ “ಶಾಂತಿಗಾಗಿ ನಾವು ಮುಂದಿಡುವ ಷರತ್ತುಗಳಲ್ಲಿ ಕಾಶ್ಮೀರ ಸಮಸ್ಯೆಯೂ ಒಳಗೊಂಡಿವೆ” ಪಾಕ್ ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.

ಶೆಹಬಾಜ್ ಜೊತೆ ಉಪ ಪ್ರಧಾನಿ ಇಶಾಕ್ ದಾರ್, ರಕ್ಷಣಾ ಸಚಿವ ಖವಾಜಾ ಆಸಿಫ್, ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್, ವಾಯುಪಡೆಯ ಮುಖ್ಯಸ್ಥ, ವಾಯುಪಡೆಯ ಮುಖ್ಯಸ್ಥ ಮಾರ್ಷಲ್ ಜಹೀರ್ ಅಹ್ಮದ್ ಬಾಬರ್ ಸಿಧು ಅವರು ವಾಯುನೆಲೆಗೆ ತೆರಳಿದ್ದರು ಎಂದು ವರದಿಯಾಗಿದೆ.

ಏಪ್ರಿಲ್ 22ರಂದು ಪಾಕಿಸ್ತಾನದ ಉಗ್ರ ಸಂಘಟನೆಯು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದನಾ ದಾಳಿ ನಡೆಸಿ 26 ಪ್ರವಾಸಿಗರನ್ನು ಕೊಂದಿದೆ. ಈ ದಾಳಿ ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಪಹಲ್ಗಾಮ್ ದಾಳಿಯ ಹೊಣೆ ಹೊತ್ತುಕೊಂಡಿದೆ.

ಈ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಲ್ಲಿ ದಾಳಿ ನಡೆಸಿವೆ. ಅದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಅಧಿಕೃತವಾಗಿ ಯುದ್ಧ ಆರಂಭಿಸುವುದಕ್ಕೂ ಮುನ್ನವೇ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದೀಗ ಶಾಂತಿ ಮಾತುಕತೆಯ ಪ್ರಸ್ತಾಪವನ್ನು ಪಾಕ್ ಮುಂದಿಟ್ಟಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಅಫ್ಘಾನಿಸ್ತಾನ | ಭೀಕರ ಅಪಘಾತ: ಹೊತ್ತಿ ಉರಿದ ಬಸ್, 17 ಮಕ್ಕಳು ಸೇರಿ 71 ಮಂದಿ ದಾರುಣ ಸಾವು

ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಬಸ್...

ಗಾಝಾದಲ್ಲಿ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಕೊಂಡ ಹಮಾಸ್: ವರದಿ

ಗಾಝಾದ ಮೇಲೆ ಇಸ್ರೇಲ್ ದಾಳಿ ಕೊನೆಗೊಳಿಸುವ ನಿಟ್ಟಿನಲ್ಲಿ ಕದನ ವಿರಾಮ ಪ್ರಸ್ತಾಪದ...

Download Eedina App Android / iOS

X