ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ : ಮೇ 18 ರಂದು ಖಾತೆದಾರರಿಗೆ ಭೂ ಪರಿಹಾರ ನೀಡಲು ಜಿಲ್ಲಾಧಿಕಾರಿ ಸೂಚನೆ

Date:

Advertisements

 ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ತಿಪಟೂರು ಉಪವಿಭಾಗಾಧಿಕಾರಿ, ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರು ಮೇ 18ರಂದು ಜಂಟಿಯಾಗಿ ಕ್ಯಾಂಪ್ ನಡೆಸಿ ಖಾತೆದಾರರಿಗೆ ಭೂ ಪರಿಹಾರವನ್ನು ಪಾವತಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. 

 ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಗುರುವಾರ ಭೂಸ್ವಾಧೀನ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗಾಗಿ ಭೂಸ್ವಾಧೀನ ಪಡಿಸಿಕೊಂಡಿರುವ ಚಿಕ್ಕನಾಯಕನಹಳ್ಳಿ ತಾಲ್ಲೂಕು ಬೆಳ್ಳಾರ, ತಿಮ್ಲಾಪುರ, ಹುಲ್ಲೇನಹಳ್ಳಿ, ಕಲ್ಲಹಳ್ಳಿ, ಡಿಂಕನಹಳ್ಳಿ, ಮೋಟಿಹಳ್ಳಿ ಹಾಗೂ ತಿಮ್ಮನಹಳ್ಳಿ ಗ್ರಾಮಗಳ 226 ಭೂ ಮಾಲೀಕರಿಗೆ ಮೇ 18ರಂದು ಭೂ ಪರಿಹಾರ ಪಾವತಿಸಬೇಕು. ಅಂದಾಜು 20 ಕೋಟಿ ರೂ.ಗಳಷ್ಟು ಭೂ ಪರಿಹಾರ ಪಾವತಿಸಲು ಬಾಕಿಯಿದ್ದು, ಭೂ ಮಾಲೀಕರಿಂದ ಅಗತ್ಯ ದಾಖಲೆಗಳನ್ನು ಪಡೆದು ಪರಿಹಾರ ಹಣವನ್ನು ಪಾವತಿಸಲು ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು.

 ಭೈರಲಿಂಗನಹಳ್ಳಿ ಹಾಗೂ ಕೇಶವಾಪುರದಲ್ಲಿ ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಯಿಂದ ಈವರೆಗೂ ಮರ ಮತ್ತು ಮಾಲ್ಕಿ ಮೌಲ್ಯ ನಿರ್ಧರಣೆ ಮಾಡದೇ ಇರುವುದರಿಂದ ಭೂಸ್ವಾಧೀನ ಪ್ರಕ್ರಿಯೆ ಬಾಕಿ ಉಳಿದುಕೊಂಡಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕೂಡಲೇ ಸದರಿ ಗ್ರಾಮಗಳ ಮರ ಮತ್ತು ಮಾಲ್ಕಿ ಮೌಲ್ಯ ನಿರ್ಧರಣೆ ಮಾಡಿ ವರದಿ ಸಲ್ಲಿಸಬೇಕೆಂದು ನಿರ್ದೇಶನ ನೀಡಿದರು.

Advertisements

 ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಹೇಮಾವತಿ, ಭದ್ರಾ ಮೇಲ್ದಂಡೆ, ಎತ್ತಿನಹೊಳೆ, ರೈಲ್ವೆ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಗಳು ಈವರೆಗೂ ಅನುಮೋದನೆಯಾಗದಿದ್ದಲ್ಲಿ ತಮ್ಮ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು. 

 ಎತ್ತಿನ ಹೊಳೆ ಯೋಜನೆಗಾಗಿ ತಿಪಟೂರು ತಾಲ್ಲೂಕು ಚೌಡ್ಲಾಪುರ ಗ್ರಾಮದಲ್ಲಿ 60 ಎಕರೆ ಪ್ರದೇಶವನ್ನು ಭೂಸ್ವಾಧೀನ ಪಡಿಸಿಕೊಳ್ಳಲು ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಸೂಚನೆ ನೀಡಿದರು. 

 ತುಮಕೂರು ನಗರದ ಬೈಪಾಸ್ ರಸ್ತೆಯಲ್ಲಿರುವ ಗೌರಿಪುರ ಹಾಗೂ ಭೈರಸಂದ್ರ ಗ್ರಾಮದ ಬಳಿ ಬೌಂಡರಿ ಕಲ್ಲು ಸಮಸ್ಯೆ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಅಡ್ಡಿಯಾಗಿದೆ. ಕೂಡಲೇ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

 ಸಭೆಯಲ್ಲಿ ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ವಿವಿಧ ಯೋಜನೆಗಳ ವಿಶೇಷ ಭೂಸ್ವಾಧೀನಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X