ಬೆಂಗಳೂರಿನಲ್ಲಿರುವ ಐತಿಹಾಸಿಕ ಹರೇ ಕೃಷ್ಣ ದೇವಸ್ಥಾನವು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣದ ನಿಯಂತ್ರಣದ ವಿಚಾರದಲ್ಲಿ ಇಸ್ಕಾನ್ ಮುಂಬೈ ಪರವಾಗಿ ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇಸ್ಕಾನ್ ಬೆಂಗಳೂರಿನ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ.
ನ್ಯಾಯಮೂರ್ತಿಗಳಾದ ಎ ಎಸ್ ಓಕಾ ಮತ್ತು ಆಗಸ್ಟೀನ್ ಜಾರ್ಜ್ ಮಾಸಿಹ್ ಅವರನ್ನೊಳಗೊಂಡ ಪೀಠವು ಈ ತೀರ್ಪು ನೀಡಿದೆ. 2011ರ ಮೇ 23ರಂದು ಹೈಕೋರ್ಟ್ ತೀರ್ಪನ್ನು ನೀಡಿದೆ. ಈ ತೀರ್ಪನ್ನು ಪಶ್ನಿಸಿ ಇಸ್ಕಾನ್ ಬೆಂಗಳೂರು 2011ರ ಜೂನ್ 2ರಂದು ಉನ್ನತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.
ಇದನ್ನು ಓದಿದ್ದೀರಾ? ‘ಇಸ್ಕಾನ್’ ನಿಷೇಧಕ್ಕೆ ಬಾಂಗ್ಲಾ ಹೈಕೋರ್ಟ್ ನಕಾರ
2009ರಲ್ಲಿ ಬೆಂಗಳೂರಿನ ಸ್ಥಳೀಯ ನ್ಯಾಯಾಲಯವು ಇಸ್ಕಾನ್ ಬೆಂಗಳೂರಿನ ಪರವಾಗಿ ತೀರ್ಪು ನೀಡಿತ್ತು. ಆದರೆ ಹೈಕೋರ್ಟ್ ಈ ತೀರ್ಪು ರದ್ದುಗೊಳಿಸಿ, ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನವು ಇಸ್ಕಾನ್ ಮುಂಬೈಗೆ ಸೇರಿದ್ದು ಎಂಬ ತೀರ್ಪು ನೀಡಿತು.
ಹೈಕೋರ್ಟ್ ತೀರ್ಪು ಪ್ರಶ್ನಿಸಿ ಬೆಂಗಳೂರು ಇಸ್ಕಾನ್‌ನ ಪದಾಧಿಕಾರಿ ಕೋದಂಡರಾಮ ದಾಸ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕೋದಂಡರಾಮ ಅರ್ಜಿ ಪುರಸ್ಕರಿಸಿದ ಉನ್ನತ ನ್ಯಾಯಾಲಯವು ಬೆಂಗಳೂರಿನಲ್ಲಿ ಹರೇ ಕೃಷ್ಣ ದೇವಸ್ಥಾನವು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ತೀರ್ಪು ನೀಡಿದೆ.
ಕರ್ನಾಟಕ-ನೋಂದಾಯಿತ ಸಮಾಜವಾದ ಇಸ್ಕಾನ್ ಬೆಂಗಳೂರು, ದಶಕಗಳಿಂದ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅರ್ಜಿದಾರರು ವಾದಿಸಿದ್ದರು. 1860ರ ರಾಷ್ಟ್ರೀಯ ಸಂಘಗಳ ನೋಂದಣಿ ಕಾಯ್ದೆ ಮತ್ತು ಬಾಂಬೆ ಸಾರ್ವಜನಿಕ ಟ್ರಸ್ಟ್ ಕಾಯ್ದೆ, 1950ರ ಅಡಿಯಲ್ಲಿ ನೋಂದಾಯಿಸಲಾದ ಇಸ್ಕಾನ್ ಮುಂಬೈ, ಇಸ್ಕಾನ್ ಬೆಂಗಳೂರು ತನ್ನ ಶಾಖೆಯಾಗಿದೆ. ಇದರ ಆಸ್ತಿ ತನ್ನ ವ್ಯಾಪ್ತಿಗೆ ಸೇರಿದ ಎಂದು ಇಸ್ಕಾನ್ ಮುಂಬೈ ವಾದಿಸಿದೆ.
