ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ಸುರಿದ ಮಳೆಗೆ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಕಾಶಪ್ಪ ಶಿರಹಟ್ಟಿ ಶವವಾಗಿ ಪತ್ತೆಯಾದವರು. ನಿನ್ನೆಯಿಂದ ನಗರಸಭೆ ಸಿಬ್ಬಂದಿ ಹಾಗೂ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸಿದ್ದರು. ಇಂದು ಘಟಪ್ರಭಾ ನದಿ ದಡದ ಶೆಟ್ಟೆವ್ವನ ತೋಟದ ಬಳಿ ಶವಗಾಗಿ ಪತ್ತೆಯಾಗಿದ್ದಾರೆ.
ಸುರಿದ ಮಳೆಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಚರಂಡಿಗೆ ಕಾಶಪ್ಪ ಬಿದ್ದಿದ್ದರು. ತಕ್ಷಣವೇ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರಂತರ ಹುಡುಕಾಟ ನಡೆಸಿದ್ದರು. ನಿರಂತರ ಹುಡುಕಾಟದ ಬಳಿಕ ಇಂದು ಚರಂಡಿಯಲ್ಲಿಯೇ ಕಾಶಪ್ಪ ಅವರ ಮೃತದೇಹ ಸಿಕ್ಕಿದೆ. ಈ ವೇಳೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಗೋಕಾಕ್ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.