ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ ಬಗ್ಗೆ ಡಿಸಿ ವರದಿ ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಕೆಲಸವನ್ನು ಸ್ಥಗಿತಗೊಳಿಸುವಂತೆ ಸರ್ಕಾರದ ಆದೇಶ ಹೊರತಾಗಿಯೂ ಕೆಲಸ ಮುಂದುವರೆದಿರುವ ಬಗ್ಗೆ ವಿಜಯನಗರದ ಹೊಸಪೇಟೆಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದರು.

ಗ್ಯಾರಂಟಿಗಳಿಗೆ ಹಣದ ಕೊರತೆಯಿಲ್ಲ

Advertisements

ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಜನರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ” ಎಂದರು.

ಹೊಸಪೇಟೆಯಲ್ಲಿ ಎರಡು ವರ್ಷದ ಸಾಧನಾ ಸಮಾವೇಶ

“ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಸಾಧನಾ ಸಮಾವೇಶವನ್ನು ವಿಜಯನಗರದ ಹೊಸಪೇಟೆಯಲ್ಲಿ ಮೇ 20 ರಂದು ಆಯೋಜಿಸಿದ್ದು, ಕಾರ್ಯಕ್ರಮಕ್ಕೆ ಸುಮಾರು ಮೂರು ಲಕ್ಷ ಜನ ಆಗಮಿಸುವ ಸಾಧ್ಯತೆಯಿದೆ” ಎಂದು ಹೇಳಿದರು.

ಆಡಳಿತಾತ್ಮಕ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ರಚನೆ

ಗ್ರೇಟರ್ ಬೆಂಗಳೂರು ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಟೀಕಿಸುತ್ತಿರುವ ಬಗ್ಗೆ ಉತ್ತರಿಸಿ, “ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ವಿಭಾಗಗಳನ್ನು ರಚಿಸಬೇಕೆಂದು ಅಂದಿನ ಬಿಜೆಪಿಯ ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ರವರು ಯೋಜಿಸಿದ್ದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನ ನೆಲೆಸಿದ್ದು, ಈ ನಗರದ ಆಡಳಿತವನ್ನು ಒಂದು ಮಹಾನಗರ ಪಾಲಿಕೆ ನಿರ್ವಹಿಸುವುದು ಕಷ್ಟಸಾಧ್ಯ. ಆದ್ದರಿಂದ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ಮಹಾನಗರಕ್ಕೆ ಮೂರು ಅಥವಾ ಹೆಚ್ಚು ಮಹಾನಗರಪಾಲಿಕೆಗಳನ್ನು ರಚಿಸಬೇಕೆಂಬ ಚಿಂತನೆಯಿಂದ ನನ್ನ ಹಿಂದಿನ ಮುಖ್ಯಮಂತ್ರಿಯ ಅವಧಿಯಲ್ಲಿ ಬಿ.ಎಸ್.ಪಾಟೀಲ್, ಸಿದ್ದಯ್ಯ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿತ್ತು. ಆದ್ದರಿಂದ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ, ಈ ಚಿಂತನೆಯನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ” ಎಂದರು.

ಗಂಗಾವತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ

ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಅನರ್ಹತೆಯ ಕುರಿತ ಪ್ರಶ್ನೆಗೆ ಉತ್ತರಿಸಿ, “ನ್ಯಾಯಾಲಯ ಅವರಿಗೆ ಏಳು ವರ್ಷಗಳ ಶಿಕ್ಷೆಗೆ ಗುರಿಪಡಿಸಿದ್ದು, ಸಂವಿಧಾನದಂತೆ ಅವರು ಅನರ್ಹರಾಗುತ್ತಾರೆ. ಈ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದರೆ, ಪಕ್ಷದ ತೀರ್ಮಾನದಂತೆ ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಗಂಗಾವತಿ ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಖಂಡಿತ ಗೆಲ್ಲುತ್ತದೆ. ಪ್ರಜಾಪ್ರಭುತ್ವದಲ್ಲಿ ಟೀಕಿಸುವುದು ಸಹಜ. ಆದರೆ ನಮ್ಮ ಸರ್ಕಾರದ ಸಾಧನೆ, ನಮ್ಮ ಬದ್ಧತೆಯ ಬಗ್ಗೆ ಜನರಿಗೆ ತಿಳಿದೇ ತಿಳಿಯುತ್ತದೆ” ಎಂದು ಹೇಳಿದರು.

ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆಯಾಗಬೇಕು

“2008-2013ರವರೆಗೆ ವಿರೋಧಪಕ್ಷದ ನಾಯಕನಾಗಿ , ಲೋಕಾಯುಕ್ತ ಸಂತೋಷ್ ಹೆಗಡೆ ಅವರ ಅಕ್ರಮ ಗಣಿಗಾರಿಕೆಯ ವರದಿ ಆಧರಿಸಿ, ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲಾಗಿತ್ತು. ಅಂದು ಬಿಜೆಪಿಸರ್ಕಾರದ ಅದನ್ನು ವಿರೋಧಿಸಿತ್ತು. ಅಂದು ಅಕ್ರಮ ಗಣಿಗಾರಿಕೆ ವಿರುದ್ಧ ನಡೆಸಿದ ಹೋರಾಟಕ್ಕೆ ಇಂದು ಫಲ ದೊರೆತಿದೆ. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆಯಾಗಬೇಕು ಹಾಗೂ ಅಕ್ರಮ ಗಣಿಗಾರಿಕೆ ನಿಲ್ಲಬೇಕು” ಎಂದು ಆಗ್ರಹಿಸಿದರು.

ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ಸದಾ ವಿರೋಧಿಸಿದ್ದೇನೆ

ಸಿದ್ದರಾಮಯ್ಯನವರು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದರು ಎಂದು ಜನಾರ್ಧನ ರೆಡ್ಡಿಯವರ ಹೇಳಿಕೆಯ ಬಗ್ಗೆ ಪ್ರತಿಕ್ರಯಿಸಿ, “ಅವರ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X