ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಶುಕ್ರವಾರ (ಮೇ 16) ಸಂಜೆ ಐದು ಗಂಟೆಗೆ ಪ್ರಕಟವಾಗಲಿದೆ. ಪರೀಕ್ಷಾ ಶುಲ್ಕ ಇಲ್ಲದೆಯೇ ಎರಡನೇ ಬಾರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಏಪ್ರಿಲ್ 24ರಿಂದ ಮೇ 8ರವರೆಗೆ ಪರೀಕ್ಷೆ ನಡೆದಿತ್ತು.
ಪರೀಕ್ಷೆಯಲ್ಲಿಅನುತ್ತೀರ್ಣರಾಗಿದ್ದ 1.70 ಲಕ್ಷ ವಿದ್ಯಾರ್ಥಿಗಳ ಪೈಕಿ 1.57 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಂಡಿದ್ದರು. ಸುಮಾರು ಶೇಕಡ 92.4ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಇದನ್ನು ಓದಿದ್ದೀರಾ? ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಇನ್ನು ಸುಮಾರು 70 ಸಾವಿರ ವಿದ್ಯಾರ್ಥಿಗಳು ಮೊದಲ ಪರೀಕ್ಷೆಯಲ್ಲಿ ಬಂದ ಫಲಿತಾಂಶ ಸಮಾಧಾನವಾಗದೆ ಫಲಿತಾಂಶ ವೃದ್ಧಿಗಾಗಿ ಮತ್ತೆ ಪರೀಕ್ಷೆಗೆ ಹಾಜರಾಗಿದ್ದರು. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ – karresults.nic.inನಲ್ಲಿ ನೋಡಬಹುದು.
ಶುಕ್ರವಾರ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ 1.94 ಲಕ್ಷ ವಿದ್ಯಾರ್ಥಿಗಳಲ್ಲಿ 60,692 ಮಂದಿ ಉತ್ತೀರ್ಣರಾಗಿದ್ದಾರೆ. ಮೊದಲ ಮತ್ತು ಎರಡನೇ ಪರೀಕ್ಷೆ ಫಲಿತಾಂಶ ಸೇರಿಸಿ ಒಟ್ಟಾರೆಯಾಗಿ ದ್ವಿತೀಯ ಪಿಯುಸಿ ಫಲಿತಾಂಶ ಶೇ. 77.96 ಆಗಿದೆ.
ಇನ್ನು ಫಲಿತಾಂಶ ವೃದ್ಧಿಗಾಗಿ ಮತ್ತೆ ಪರೀಕ್ಷೆಗೆ ಹಾಜರಾಗಿದ್ದ 71,964 ವಿದ್ಯಾರ್ಥಿಗಳಲ್ಲಿ 41,719 ವಿದ್ಯಾರ್ಥಿಗಳು ಮೊದಲ ಪರೀಕ್ಷೆಗಿಂತ ಅಧಿಕ ಅಂಕ ಪಡೆದಿದ್ದಾರೆ.
ಇದನ್ನು ಓದಿದ್ದೀರಾ? ಬ್ರೇಕಿಂಗ್ ನ್ಯೂಸ್ | ಶುಕ್ರವಾರ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಎಂಜನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣದ ಪ್ರವೇಶಕ್ಕೆ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಸಿಇಟಿ ಫಲಿತಾಂಶಕ್ಕೂ ಮುನ್ನವೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆ-2 ಫಲಿತಾಂಶ ಪ್ರಕಟಿಸಿದೆ.
ಕೆಎಸ್‌ಇಎಬಿ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 3 ಅನ್ನು ಜೂನ್ 9ರಿಂದ 21ರವರೆಗೆ ನಡೆಸುತ್ತದೆ. ಆ ಪರೀಕ್ಷೆಗೂ ಯಾವುದೇ ಶುಲ್ಕವಿಲ್ಲ. ಇನ್ನು ದ್ವಿತೀಯ ಪಿಯುಸಿ ಮೊದಲ ಪರೀಕ್ಷೆ ಫಲಿತಾಂಶ ಏಪ್ರಿಲ್ 8ರಂದು ಮಧ್ಯಾಹ್ನ 12.30ರ ಸುಮಾರಿಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.
