ಮಂಗಳೂರು | ಸಿಎಂ ಸಿದ್ದರಾಮಯ್ಯನವರಿಗೆ ಕಪ್ಪು ಬಾವುಟ ಪ್ರದರ್ಶನ: ಬಿಜೆಪಿ ಕಾರ್ಯಕರ್ತರ ಬಂಧನ

Date:

Advertisements

ದಕ್ಷಿಣ ಕನ್ನಡದ ನೂತನ ಜಿಲ್ಲಾಡಳಿತ ಕೇಂದ್ರ ‘ಪ್ರಜಾ ಸೌಧ’ ಉದ್ಘಾಟನಾ ಸಮಾರಂಭಕ್ಕೆ ಮಂಗಳೂರಿಗೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿಯ ಕೆಲವು ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ, ಬೆಂಗಾವಲಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪಡೀಲ್‌ನಲ್ಲಿ ನಡೆಯಲಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಯೆಯ್ಯಾಡಿಯಲ್ಲಿ ದಿಢೀರನೇ ಪ್ರತ್ಯಕ್ಷರಾದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲು ಆರಂಭಿಸಿದರು.

ಬಜಪೆಯಲ್ಲಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಯಲ್ಲಿ ಉಗ್ರ ಕೈವಾಡವಿದೆ. ಹಾಗಾಗಿ, ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಹಾಗೂ ಸುಹಾಸ್ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಘೋಷಣೆ ಮಾಡಬೇಕು ಎಂದು ಬಿಜೆಪಿ ಮಂಗಳೂರು ಉತ್ತರ ಮಂಡಲ ಯುವಮೋರ್ಚಾ ಕಾರ್ಯಕರ್ತರು ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ನಡೆಸಲು ಮುಂದಾದರು.

Advertisements

ಇದನ್ನು ಓದಿದ್ದೀರಾ? ಪುತ್ತೂರು | ‘ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ’ದ ಹೇಳಿಕೆ: ರೌಡಿಶೀಟರ್ ಭರತ್ ಕುಮ್ಡೇಲು ವಿರುದ್ಧ ಎಫ್‌ಐಆರ್

ಈ ವೇಳೆ ತಕ್ಷಣ ಕಾರ್ಯ ಪ್ರವೃತ್ತರಾದ ಬಂದೋಬಸ್ತ್‌ನಲ್ಲಿದ್ದ ಪೊಲೀಸರು, ಪ್ರತಿಭಟನಾಕಾರರನ್ನು ಬಂಧಿಸಿ, ಕರೆದೊಯ್ದರು.

WhatsApp Image 2025 05 16 at 5.24.57 PM
WhatsApp Image 2025 05 16 at 5.24.58 PM
WhatsApp Image 2025 05 16 at 5.24.59 PM
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X