ಉಡುಪಿ | ಕರಾವಳಿಯ ಜಾನಪದ ಅಧ್ಯಯನಕ್ಕೆ ಶಿವರಾಮ ಕಾರಂತರ ಕೊಡುಗೆ ಅಪಾರ – ಎಸ್ ಎ ಕೃಷ್ಣಯ್ಯ

Date:

Advertisements

ಕರಾವಳಿಯ ಜಾನಪದವನ್ನು ಕೇಂದ್ರವಾಗಿಟ್ಟುಕೊಂಡು ಡಾ. ಶಿವರಾಮ ಕಾರಂತರು ಸಾಹಿತ್ಯ ರಚನೆ ಮಾಡಿದ್ದಾರೆ. ಈ ದೃಷ್ಟಿಯಿಂದ ಕಾರಂತರ ಸಾಹಿತ್ಯದ ಅಧ್ಯಯನವೆಂದರೆ ಕರಾವಳಿಯ ಜಾನಪದ ಅಧ್ಯಯನವು ಆಗುತ್ತಿದೆ ಎಂದು ಖ್ಯಾತ ಜಾನಪದ ಸಂಶೋಧಕ ಪ್ರೊ. ಎಸ್.ಎ. ಕೃಷ್ಣಯ್ಯ ಹೇಳಿದರು.

ಅವರು ಇಂದು ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಸಭಾಭವನದಲ್ಲಿ ಕೋಟ ಶಿವರಾಮ ಕಾರಂತ ಟ್ರಸ್ಟ್ ಹಾಗೂ ಡಾ. ಜಿ ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತ್ತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಡಾ. ಶಿವರಾಮ ಕಾರಂತರ ಬರಹ ಮತ್ತು ಜಾನಪದ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

1005425803

ಡಾ. ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಡಾ. ಶಿವರಾಮ ಕಾರಂತರು ಸಾಹಿತ್ಯ ಮಾತ್ರವಲ್ಲದೇ, ಪರಿಸರದ ಬಗೆಗೆ ಅವರ ಹೋರಾಟ ಮಹತ್ತರವಾಗಿದೆ. ದಿಟ್ಟತನ, ಸ್ಪಷ್ಟ ನೇರ ಮಾತು ಅವರಲ್ಲಿ ಕಾಣುತ್ತಿದ್ದು, ವಿಶ್ವದಲ್ಲೇ ಕರಾವಳಿಯ ಹೆಸರನ್ನು ಸಾಹಿತ್ಯದಲ್ಲಿ ಮುಂಚೂಣಿಯಲ್ಲಿ ಇರಿಸುವಲ್ಲಿ ಕಾರಂತರ ಪಾತ್ರ ಪ್ರಮುಖವಾಗಿದೆ.

Advertisements

ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಮಾತನಾಡಿ, ಪ್ರಕೃತಿಯ ಸೂಕ್ಷ್ಮತೆಗಳನ್ನು ಗಮನಿಸಿ, ಅದನ್ನು ತಮ್ಮ ಸಾಹಿತ್ಯದ ಮೂಲಕ ಜನರಿಗೆ ತಲುಪಿಸಿದ ಕೆಲವೇ ಕೆಲವು ಸಾಹಿತಿಗಳಲ್ಲಿ ಕಾರಂತರು ಒಬ್ಬರು. ವಿವಿಧ ಕ್ಷೇತ್ರಗಳಲ್ಲಿ ಅವರು ಹೊಂದಿದ್ದ ಜ್ಞಾನ ಅಗಾಧವಾಗಿದೆ ಎಂದರು.

ಡಾ. ಜಿ ಶಂಕರ್ ಮಹಿಳಾ ಸರಕಾರಿ ಪ್ರಥಮ ಕಾಲೇಜು ಹಾಗೂ ಸ್ನಾತ್ತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಪ್ರೊ. ಶ್ರೀಧರ್ ಪ್ರಸಾದ್ ಕೆ. ಕಾರ್ಯಕ್ರಮದ ಅಧ್ಯಕ್ಷ್ಯತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು ಹಾಗೂ ಇತ್ತೀಚೆಗೆ ನಿಧನರಾದ ಪ್ರೊ. ಹೇರಂಜೆ ಕೃಷ್ಣ ಭಟ್ ಹಾಗೂ ನಂದಳಿಕೆ ಬಾಲಚಂದ್ರ ರಾವ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ. ನಿಕೇತನಾ ಸಹ ಪ್ರಾಧ್ಯಾಪಕ ಡಾ. ಪ್ರಸನ್ನ ಪಿ.ಬಿ., ಪ್ರಾಧ್ಯಾಪಕಿ ಹೇಮಾವತಿ ಹಾಗೂ ಮತ್ತಿತತರು ಉಪಸ್ಥಿತರಿದ್ದರು.

ಡಾ. ಶಿವರಾಮ ಕಾರಂತ ಟ್ರಸ್ಟ್ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ತ್ರಿವೇಣಿ ನಿರೂಪಿಸಿ, ಶಿವರಾಮ ಕಾರಂತ ಟ್ರಸ್ಟ್ನ ಸದಸ್ಯ ಜಿ. ಎಮ್ ಶರೀಫ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X