ಮಂಗಳೂರು | ಅಭಿವೃದ್ಧಿಯಲ್ಲಿ ರಾಜಕೀಯ ಬೇಡ: ವೇದಿಕೆಯಲ್ಲೇ ಬಿಜೆಪಿ ಶಾಸಕ ಕಾಮತ್‌ಗೆ ಪಾಠ ಮಾಡಿದ ಸಿಎಂ!

Date:

Advertisements

“ಮಿ. ಕಾಮತ್‌. ನಾನೇ ಇದಕ್ಕೆ ಗುದ್ದಲಿ ಪೂಜೆ ಮಾಡಿದ್ದು, ನಾನೇ ಇವತ್ತು ಉದ್ಘಾಟನೆ ಮಾಡಿದ್ದು. ನಿಮ್ಮ ಭಾಷಣದಲ್ಲಿ ಸ್ಮಾರ್ಟ್‌ ಸಿಟಿ ಪ್ರಧಾನಮಂತ್ರಿ ಮೋದಿಯವರ ಕನಸು ಅಂತ ತಿಳಿಸಿದ್ರಿ. ಅದು ನಿಜ. ಆದರೆ, ನಾವೂ ಕೂಡ(ರಾಜ್ಯ ಸರ್ಕಾರ) ಸ್ಮಾರ್ಟ್‌ ಸಿಟಿಯ ಯೋಜನೆಗಳಿಗೆ ಶೇ.50ರಷ್ಟು ಅನುದಾನ ಕೊಡ್ತಿದ್ದೇವೆ. ನೀವು ನಾಲಕ್ಕು ವರ್ಷ ರಾಜ್ಯದಲ್ಲಿ ಅಧಿಕಾರದಲ್ಲಿದ್ರಲ್ವಾ. ಆಗ ಯಾಕೆ ಖರ್ಚು ಮಾಡ್ಲಿಲ್ಲ? ಸರಿಯಾಗಿ ಖರ್ಚು ಮಾಡಿದ್ದಿದ್ದರೆ ಇಷ್ಟು ದಿನ ಬೇಕಿತ್ತಾ? ಈ ‘ಪ್ರಜಾ ಸೌಧ’ ನಿರ್ಮಾಣ ಆಗುವುದಕ್ಕೆ ಕಾರಣ ರಮಾನಾಥ ರೈ. ಜಿಲ್ಲಾಡಳಿತಕ್ಕೆ ಹೊಸ ಕಚೇರಿ ಬೇಕು ಅಂತ ನನ್ನ ಮೇಲೆ ಒತ್ತಡ ತಂದದ್ದು ರಮಾನಾಥ ರೈ. ಹಾಗಾಗಿ, ಇತಿಹಾಸವನ್ನು ತಿರುಚಿ ಹೇಳಕೂಡದು. ರಾಜಕೀಯ ಮಾಡೋಣ. ಆದರೆ, ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಬೇಡ….”

ಹೀಗಂತ ವೇದಿಕೆಯಲ್ಲೇ ನಿಂತು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಪಾಠ ಮಾಡಿದ್ದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ.

ಈ ಬೆಳವಣಿಗೆ ನಡೆದದ್ದು ದಕ್ಷಿಣ ಕನ್ನಡದ ನೂತನ ಜಿಲ್ಲಾಡಳಿತ ಕೇಂದ್ರ ಮಂಗಳೂರಿನ ಪಡೀಲ್‌ನಲ್ಲಿ ‘ಪ್ರಜಾ ಸೌಧ’ ಉದ್ಘಾಟನಾ ಸಮಾರಂಭದಲ್ಲಿ.

Advertisements

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್, ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವುದಕ್ಕೆ ಮುನ್ನ ಮಾತನಾಡಿದ್ದರು. ಈ ವೇಳೆ ತಮ್ಮ ಭಾಷಣದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸು. ಅದರಿಂದಾಗಿ ಇಂದು ಪ್ರಜಾ ಸೌಧ ಉದ್ಘಾಟನೆಯಾಗಿದೆ. ಜಿಲ್ಲಾಡಳಿತದ ಕಟ್ಟಡಕ್ಕೆ ಸ್ಮಾರ್ಟ್ ಸಿಟಿಯ ಹಣ ಬಳಕೆಯಾದದ್ದು ಇದೇ ಮೊದಲು” ಎಂದು ಹೇಳುವ ಮೂಲಕ ಹೊಗಳಿದ್ದರು.

ಕಾಮತ್

ಬಳಿಕ ವೇದಿಕೆಯಲ್ಲಿ ಭಾಷಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಗುದ್ದಲಿ ಪೂಜೆ ನೆರವೇರಿಸಿ ಮೊದಲ ಹಂತದ ಕಾಮಗಾರಿಗೆ ಹಣ ಬಿಡುಗಡೆ ಮಾಡಿದ್ದೆವು. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧದ ಕೆಲಸ ನಿಂತು ಹೋಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಾಮಗಾರಿ ಮುಂದುವರೆಯಲೇ ಇಲ್ಲ. ಇದನ್ನು ಪೂರ್ಣಗೊಳಿಸಲು ಮತ್ತೆ ನಾವೇ ಅಧಿಕಾರಕ್ಕೆ ಬರಬೇಕಾಯಿತು. ಬಿಜೆಪಿ ಅವಧಿಯಲ್ಲಿ ಉದ್ಘಾಟನೆ ಆಗಲಿಲ್ಲ ಏಕೆ? ಜಿಲ್ಲಾಡಳಿತಕ್ಕೆ ಹೊಸ ಕಟ್ಟಡದ ಕನಸು ಕಂಡದ್ದು ರಮಾನಾಥ ರೈ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ” ಎಂದು ವೇದಿಕೆಯಲ್ಲೇ ಪಾಠ ಮಾಡಿದರು.

ಇದನ್ನು ಓದಿದ್ದೀರಾ? ಟ್ರಂಪ್ ‘ಅವರದ್ದು ಅವರು ನೋಡಿಕೊಳ್ಳುತ್ತಾರೆ’ ಅಂದರೂ, ಮೋದಿ ಸುಮ್ಮನಿರುವುದೇಕೆ?

“ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಡ್ತೀವಿ. ಕೇಂದ್ರ ರಾಜ್ಯಕ್ಕೆ ವಾಪಾಸ್ ಕೊಡುವುದು, ಸ್ಮಾರ್ಟ್ ಸಿಟಿ ಯೋಜನೆ ಸೇರಿ ಕೇವಲ 65 ಸಾವಿರ ಕೋಟಿ. ಶೇ15-16 ರಷ್ಟು ಮಾತ್ರ ವಾಪಾಸ್ ಕೊಡುತ್ತಿದೆ. ಇದು ಕೇಂದ್ರ ನಮ್ಮ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಅಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು , ಪ್ರಧಾನಿ ಮೋದಿಯವರಿಗೆ ಹೇಳಿ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ನಿಲ್ಲಿಸಿ ಎಂದು ಶಾಸಕ ಕಾಮತ್ ಅವರಿಗೆ ಕಿವಿ ಮಾತು ಹೇಳಿದರು.

ದಕ್ಷಿಣ ಕನ್ನಡ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ: ಸಿಎಂ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ.‌ ಸಚಿವ ಕೃಷ್ಣಬೈರೇಗೌಡರು ವಿಶೇಷ ಕಾಳಜಿ, ಸಾಕಷ್ಟು ಶ್ರಮ ವಹಿಸಿ ಜಿಲ್ಲೆಯನ್ನು ಪೋಡಿಮುಕ್ತ ಮಾಡುವ ದಿಕ್ಕಿನಲ್ಲಿ ಕೆಲಸಗಳು ಆಗಿವೆ ಎಂದು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.‌

ಚಮ 1

ಮನುಷ್ಯರು ಪರಸ್ಪರ ಪ್ರೀತಿಸುವ ಸಮಾಜವನ್ನು ಗಟ್ಟಿಗೊಳಿಸೋಣ: ಸಿ.ಎಂ ಕರೆ

ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ. ಮನುಷ್ಯರು ಮನುಷ್ಯರನ್ನು ಪ್ರೀತಿಸುವ ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು‌. ಈ ಸಮಾಜವನ್ನು ನಾವು ಇನ್ನಷ್ಟು ಗಟ್ಟಿಗೊಳಿಸೋಣ. ಜೊತೆಗೆ ಅಸಮಾನತೆಯ ಸಮಾಜವನ್ನು ಸುಧಾರಿಸಿ ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಸಮಾಜ ಕಟ್ಟೋಣ ಎಂದು ಕರೆ ನೀಡಿದರು.

ಅತ್ಯಂತ ಪ್ರಜ್ಞಾವಂತರೇ ಇರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆಗಳು ನಡೆಯಬಾರದು ಎಂದರು.‌

ನುಡಿದಂತೆ ನಡೆದಿದ್ದೇವೆ…ಹೇಳಿದ್ದನ್ನು ಮಾಡಿದ್ದೇವೆ

ನಾವು ನುಡಿದಂತೆ ನಡೆದಿದ್ದೇವೆ. ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಕೊಡುವ ಭರವಸೆ ನೀಡಿದ್ದೆವು. ಅದರಂತೆ ಪುತ್ತೂರಿಗೂ ಮೆಡಿಕಲ್ ಕಾಲೇಜು ಕೊಟ್ಟಿದ್ದೇವೆ. ಸದ್ಯ 250 ಬೆಡ್ ಗಳ ಆಸ್ಪತ್ರೆ ಮಾಡ್ತೀವಿ. ಆಮೇಲೆ ಮತ್ತೆ 250 ಬೆಡ್ ಗಳನ್ನು ವಿಸ್ತರಿಸುತ್ತೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X