ಅರಣ್ಯ ಇಲಾಖೆಗೆ ಸೇರಿದ ಅಕೇಶಿಯ ನಡುತೋಪಿನಲ್ಲಿ ಅಕ್ರಮವಾಗಿ ಮರವನ್ನು ಕಡಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ವ್ಯಾಪ್ತಿಯ ಗುಡ್ಡಟ್ಟಿ ಗ್ರಾಮದ ನಡೆದಿದೆ.

ಸರ್ವೆ ನಂಬರ್ 254 ರಲ್ಲಿ ಅರಣ್ಯ ಇಲಾಖೆಗೆ ಸೇರಿದ, ಬೆಲೆ ಬಾಳುವ ಅಕೇಶಿಯ ಮರಗಳನ್ನು ಕಡಿದು ಗುಪ್ತವಾಗಿ ಸಾಗಾಣೆ ಮಾಡಿದ್ದಾರೆ. ಈ ಕುರಿತು ಸ್ಥಳೀಯರು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮರಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಹಸುವಿನ ಕೆಚ್ಚಲು ಕತ್ತರಿಸಿದ ಕಿಡಿಗೇಡಿಗಳು
ಅಕ್ರಮದಲ್ಲಿ ಅರಣ್ಯ ಇಲಾಖೆಯ ಕೆಲ ಅಧಿಕಾರಿಗಳೇ ಶಾಮೀಲು ಆಗಿರುವ ಶಂಕೆ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳೀಯರ ಒತ್ತಾಯದ ಮೇರೆಗೆ ಘಟನೆಗೆ ಸಂಬಂಧಿಸಿದಂತೆ ತನಿಖೆ ಗಂಭೀರವಾಗಿ ಕೈಗೊಳ್ಳಬೇಕು. ಅರಣ್ಯ ಸಂಪತ್ತನ್ನು ಕಾಪಾಡು ನಿಟ್ಟಿನಲ್ಲಿ ಅಧಿಕಾರಿಗಳು ಕೂಡ ನಿರ್ಲಕ್ಷ ತೋರಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.