ಯಮುನಾ ನದಿ ಮಾಲಿನ್ಯದ ಬಗ್ಗೆ ಉನ್ನತ ಮಟ್ಟದ ಸಮಿತಿಯ ಮುಖ್ಯಸ್ಥರನ್ನಾಗಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರನ್ನು ನೇಮಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.
ಸಿಜೆಐ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪಿ ಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಎನ್‌ಜಿಟಿ ಆದೇಶಕ್ಕೆ ತಡೆ ನೀಡಿದೆ.
ಯಮುನಾ ನದಿ ಮಾಲಿನ್ಯದ ಬಗ್ಗೆ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರನ್ನಾಗಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರನ್ನು ನೇಮಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ ಹೊರಡಿಸಿತ್ತು. ಇದಕ್ಕೆ ದೆಹಲಿಯ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು.
ದೆಹಲಿ ಸರ್ಕಾರದ ಪರವಾಗಿ ಹಿರಿಯ ವಕೀಲ ಡಾ.ಎ.ಎಂ.ಸಿಂಘ್ವಿ ಅವರು ವಾದ ಮಂಡಿಸಿದ್ದರು.