ಬೀದರ್‌ | ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ : ಆಸ್ಪತ್ರೆ ಬಂದ್‌ ಮಾಡಿ ಪ್ರತಿಭಟನೆ

Date:

Advertisements

ಬಸವಕಲ್ಯಾಣ ನಗರದ ತಾಲ್ಲೂಕು ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯ ಡಾ.ಮಹಾದೇವಪ್ಪ ಅವರ ಮೇಲೆ ರೋಗಿಯೊಂದಿಗೆ ಬಂದಿದ್ದ ಕೆಲವರು ಹಲ್ಲೆ ನಡೆಸಿರುವುದನ್ನು ಖಂಡಿಸಿದ ವೈದ್ಯರು, ಸಿಬ್ಬಂದಿ ಶನಿವಾರ ಕೆಲಕಾಲ ಆಸ್ಪತ್ರೆ ಬಂದ್ ಮಾಡಿ ಪ್ರತಿಭಟಿಸಿದರು.

ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಅಪರ್ಣಾ ಮಹಾನಂದ ಮಾತನಾಡಿ, ʼಆಸ್ಪತ್ರೆಯ ಗೇಟ್‌ ವಿಷಯ ತೆಗೆದು ರಾತ್ರಿ 12.45ಕ್ಕೆ ರೋಗಿಯೊಂದಿಗೆ ಬಂದಿದ್ದ ನಾಲ್ವರು ರೋಗಿಯ ತಪಾಸಣೆ ನಡೆಸುತ್ತಿದ್ದರೂ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆದ್ದರಿಂದ ಅವರ ಮೇಲೆ ಸೂಕ್ತ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಆಸ್ಪತ್ರೆಗೆ ರಕ್ಷಣಾ ಸಿಬ್ಬಂದಿ, ಕಾವಲುಗಾರರನ್ನು ನೇಮಿಸಬೇಕುʼ ಎಂದು ಆಗ್ರಹಿಸಿದರು.

ʼಅನೇಕ ವರ್ಷಗಳಿಂದ ಇಲ್ಲಿ ಸೇವೆ ಸಲ್ಲಿಸುತ್ತಿರುವ ನನಗೆ ಇಂಥ ಘಟನೆ ಇದೇ ಮೊದಲ ಸಲ ಕಂಡಿದೆ. ಇಂಥದರಿಂದ ವೈದ್ಯರು ಮತ್ತು ಸಿಬ್ಬಂದಿಯವರ ಮನಸ್ಸಿಗೆ ನೋವಾಗುತ್ತದೆ. ಯಾವುದೇ ತಪ್ಪಿಲ್ಲದಿದ್ದರೂ ವೈದ್ಯರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ’ ಎಂದು ತಿಳಿಸಿದರು.

Advertisements

ಈ ಸಂಬಂಧ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ದತ್ತಾತ್ರೇಯ ಗಾದಾ ಅವರಿಗೆ ಸಲ್ಲಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಶೋಕ ಮೈಲಾರಿ, ಡಾ.ಯುವರಾಜ ಬಿರಾದಾರ, ಡಾ.ಜ್ಯೋತಿ ಖಂಡ್ರೆ, ಡಾ.ದೀಪಕ ಜಾಧವ, ಡಾ.ಜಕಿಯೊದ್ದೀನ್, ಡಾ.ಸಂದೀಪ ಬಿರಾದಾರ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಅಲ್ಪಸಂಖ್ಯಾತರ ಶಾಲಾ-ಕಾಲೇಜು ʼಅತಿಥಿʼ ಆಯ್ಕೆಗೆ ಪ್ರವೇಶ ಪರೀಕ್ಷೆ: ಉಪವಾಸ ಧರಣಿ ಎಚ್ಚರಿಕೆ!

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X