ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಮೃತಪಟ್ಟ ಘಟನೆ ಪಂಜಾಬ್‌ನಲ್ಲಿ ಮೇ 17 ರಂದು ನಡೆದಿದೆ.
ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ದೆಹಲಿಯಲ್ಲಿ ಉದ್ಯೋಗದಲ್ಲಿದ್ದರು.
ಮುಂದೆ ಜಪಾನ್‌ಗೆ ಉದ್ಯೋಗಕ್ಕೆ ಹೋಗುವವರಿದ್ದು, ಪಂಜಾಬ್ ಎಲ್ ಪಿಯು ಪಗ್ವಾಡ ಕಾಲೇಜಿನಿಂದ ಪ್ರಮಾಣಪತ್ರ ಪಡೆಯಲು ತೆರಳಿದ್ದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಂತಿ ಬಯಸುವುದು ದೇಶದ್ರೋಹವಲ್ಲ!
ಪ್ರಮಾಣ ಪತ್ರ ಪಡೆದ ಕೂಡಲೇ ಮನೆಯವರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದರೆಂದು ತಿಳಿದು ಬಂದಿದೆ. ಇದಾದ ಬಳಿಕ ಈಕೆ ನಿಗೂಢವಾಗಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ಪಂಜಾಬ್‌ನ ಜಲಂದರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬದವರು ಪಂಜಾಬ್‌ಗೆ ಪ್ರಯಾಣ ಬೆಳೆಸಿದ್ದಾರೆ. ಹೆಚ್ಚಿನ ಮಾಹಿತಿಗಳು ಕುಟುಂಬದವರು ಪಂಜಾಬ್ ತಲುಪಿದ ಬಳಿಕವಷ್ಟೆ ತಿಳಿದುಬರಬೇಕಿದೆ.