ವಿಜಯಪುರ | ರೋಗಿಗಳಿಗೆ ಗುಣಮಟ್ಟದ ಸೇವೆ ನೀಡುವಂತೆ ಡಾ. ನಾಗಲಕ್ಷ್ಮಿ ಚೌಧರಿ ಸೂಚನೆ

Date:

Advertisements

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ನೀಗಿಸಿ, ಮೂಲಸೌಕರ್ಯಗಳನ್ನು ಕಲ್ಪಿಸಿ ರೋಗಿಗಳಿಗೆ ಗುಣಮಟ್ಟದ ಸೇವೆ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಾಲೂಕು ವೈದ್ಯಾಧಿಕಾರಿ ಎಸ್ ಟಿ ತಿವಾರಿಯವರಿಗೆ ಸೂಚಿಸಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು ಹೆರಿಗೆ ಕೋಣೆಗೆ ಹೋಗಿ ಹೆರಿಗೆಗೆ ಇರುವ ಸೌಲಭ್ಯಗಳ ಬಗ್ಗೆ ನರ್ಸ್ ಹಾಗೂ ವೈದ್ಯರಿಂದ ಮಾಹಿತಿ ಪಡೆದು, ಹೆರಿಗೆ ಕೊಠಡಿ ವೀಕ್ಷಿಸಿ, “ಇದೇನು ಹೆರಿಗೆ ಕೊಠಡಿಯೋ ಅಥವಾ ಸ್ಟೋರ್‌ ರೂಮ್‌ ಮಾಡಿಕೊಂಡಿದ್ದೀರೋ” ಎಂದು ಪ್ರಶ್ನಿಸಿದರು.

ಹೆರಿಗೆ ಮಾಡಲು ಬಳಸುವ ಉಪಕರಣಗಳು, ಮಗುವನ್ನು ಆರೈಕೆ ಮಾಡುವ ಬಗೆಗಿನ ಪ್ರಶ್ನೆಗಳಿಗೆ ನರ್ಸ್ ಸಮರ್ಪಕವಾಗಿ ಉತ್ತರಿಸಿದರು. ಆಸ್ಪತ್ರೆಯ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ರೈತರ ಬೆಳೆವಿಮೆ ಹಣ ಬಿಡುಗಡೆ ಮಾಡಿದರೆ ಬಿತ್ತನೆಗೆ ಆಸರೆಯಾಗುತ್ತದೆ: ಶರಣಬಸಪ್ಪ ಮಮಶೆಟ್ಟಿ

ಸರ್ಕಾರದ ಗೃಹಲಕ್ಷ್ಮಿ ಸೇರಿದಂತೆ ಎಲ್ಲ ಸೌಲಭ್ಯಗಳು ಸರಿಯಾಗಿ ಸಿಗುತ್ತಿರುವ ಬಗ್ಗೆ ಮಹಿಳೆಯರಿಂದ ಮಾಹಿತಿ ಪಡೆದು, ಆಹವಾಲು ಸ್ವೀಕರಿಸಿದರು. ಈ ವೇಳೆ ತಾಲೂಕು ವೈದ್ಯಾಧಿಕಾರಿ ಎಸ್ ಟಿ ತಿವಾರಿ, ಸಿ ಬಿ ವಿರಕ್ತ ಮಠ, ವೈ ಎಸ್ ತಳ್ಳೋಳ್ಳಿ, ಡಾ. ಕಾಶಿಬಾಯಿ ಪಾಟೀಲ, ಸಾಗರ್ ಪಾಟೀಲ, ರೇಷ್ಮಾಬಾನು ಹವೆಲಿ, ಡಿಎಸ್ಎಸ್ ಮುಖಂಡ ಮಲ್ಲು ತಳವಾರ, ಹನುಮಂತ ಕುರಿ, ವಿರೇಶ ಕಂದಗಲ್, ಕರವೇ ಮುಖಂಡ ರಫೀಕ್ ತೆಗ್ಗಿನಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X