ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್; ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಬಂಧನ

Date:

Advertisements

ಆಪರೇಷನ್ ಸಿಂಧೂರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಯುವ ಮೋರ್ಚಾ ನಾಯಕರೊಬ್ಬರ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅಜೀತ್ ಸಿಂಗ್, “ಅಲಿ ಖಾನ್ ಮಹ್ಮದಾಬಾದ್ ಅವರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಆಪರೇಷನ್ ಸಿಂಧೂರಕ್ಕೆ ಸಂಬಂಧಿಸಿದಂತೆ ಅವರ ಕೆಲವು ಹೇಳಿಕೆಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ. ಅಶೋಕ ವಿಶ್ವವಿದ್ಯಾಲಯವೂ ಬಂಧನವನ್ನು ದೃಢೀಕರಿಸಿದೆ. ಹಾಗೆಯೇ ತನಿಖೆಗೆ ಸಹಕರಿಸುವುದಾಗಿ ಹೇಳಿದೆ.

ಇದನ್ನು ಓದಿದ್ದೀರಾ? ‘ಆಪರೇಷನ್ ಸಿಂಧೂರ’ ಯಶಸ್ಸಿಗೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಕಾಂಗ್ರೆಸ್ ಸರ್ಕಾರ ಸೂಚನೆ

Advertisements

ಸಹಾಯಕ ಪ್ರಾಧ್ಯಾಪಕರ ಪೋಸ್ಟ್ ವಿರುದ್ಧ ಹರಿಯಾಣ ರಾಜ್ಯ ಮಹಿಳಾ ಆಯೋಗವು ನೋಟಿಸ್ ಕಳುಹಿಸಿದ ಕೆಲವೇ ದಿನಗಳ ನಂತರ ಬಂಧನ ಮಾಡಲಾಗಿದೆ. ಆದರೆ ಸದ್ಯ ಅಲಿ ಖಾನ್ ಪೋಸ್ಟ್ ವೈರಲ್ ಆಗುತ್ತಿದೆ. ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕರು ನಿಮ್ಮ ಈ ಬರಹಕ್ಕೆ ದೂರು ದಾಖಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಇನ್ನು “ದೇಶದ ಹೆಣ್ಣುಮಕ್ಕಳಾದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರನ್ನು ನಾವು ವಂದಿಸುತ್ತೇವೆ. ಆದರೆ ರಾಜಕೀಯ ವಿಜ್ಞಾನವನ್ನು ಕಲಿಸುವ ಪ್ರಾಧ್ಯಾಪಕರು ಅವರನ್ನು ಉದ್ದೇಶಿಸಿ ಬಳಸಿರುವ ಪದಗಳ ಹಿನ್ನೆಲೆ ಅವರು ಆಯೋಗದ ಮುಂದೆ ಹಾಜರಾಗಿ ವಿಷಾದ ವ್ಯಕ್ತಪಡಿಸುತ್ತಾರೆ ಎಂದು ನಾನು ನಿರೀಕ್ಷಿಸಿದ್ದೆ” ಎಂದು ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ಹೇಳಿದ್ದರು.

ಆದರೆ ಆಯೋಗದ ನೋಟಿಸ್‌ಗೆ ಅಲಿ ಪ್ರತಿಕ್ರಿಯಿಸಿದ್ದಾರೆ. “ಆಯೋಗವು ತನ್ನ ಹೇಳಿಕೆಯನ್ನು ತಪ್ಪಾಗಿ ಓದಿದೆ. ಮಹಿಳಾ ಆಯೋಗವು ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿ ನನ್ನ ಪೋಸ್ಟ್‌ಗಳನ್ನು ತಪ್ಪಾಗಿ ಅರ್ಥೈಸಿಕೊಂಡಿದೆ. ಇದು ನನಗೆ ಆಶ್ಚರ್ಯವಾಗಿದೆ. ಅರ್ಥವನ್ನೇ ತಲೆಕೆಳಗಾಗಿ ಮಾಡಿದ್ದಾರೆ” ಎಂದಿದ್ದಾರೆ.

ಏನಿದು ಪ್ರಕರಣ, ಪೋಸ್ಟ್‌ನಲ್ಲಿ ಏನಿದೆ?

ಪಹಲ್ಗಾಮ್ ದಾಳಿಗೆ ವಿರುದ್ಧವಾಗಿ ಭಾರತ ಆಪರೇಷನ್ ಸಿಂಧೂರ ನಡೆಸಿ ಭಯೋತ್ಪಾದಕ ಶಿಬಿರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯ ಒಂದು ದಿನದ ನಂತರ ಮೇ 8ರಂದು ಮಹ್ಮದಾಬಾದ್ ಮಾಡಿದ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಸುತ್ತ ವಿವಾದ ಉಂಟಾಗಿದೆ.

ಮಿಲಿಟರಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಮುಸ್ಲಿಂ ಮಹಿಳಾ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಹಿಂದುತ್ವವಾದಿಗಳು ಹೊಗಳಿದ್ದನ್ನು ಮಹ್ಮದಾಬಾದ್ ತಮ್ಮ ಪೋಸ್ಟ್‌ನಲ್ಲಿ ವ್ಯಂಗ್ಯವಾಗಿ ಉಲ್ಲೇಖಿಸಿದ್ದರು. ಹಾಗೆಯೇ ದೇಶದಲ್ಲಿ ಮುಸ್ಲಿಮರ ವಿರುದ್ಧ ನಡೆಯುವ ಬುಲ್ಡೋಜರ್ ದಾಳಿಗಳ ಬಗ್ಗೆಯೂ ಉಲ್ಲೇಖಿಸಿದ್ದರು.

screenshot

ಆದರೆ ಹರಿಯಾಣ ರಾಜ್ಯ ಮಹಿಳಾ ಆಯೋಗವು ಅವರ ಹೇಳಿಕೆ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ. ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಘನತೆಯನ್ನು ಹಾಳುಮಾಡಿದ್ದಾರೆ, ಕೋಮು ದ್ವೇಷವನ್ನು ಹುಟ್ಟಿಸುತ್ತಿದ್ದಾರೆ ಎಂದು ಆರೋಪಿಸಿದೆ. ಹಾಗೆಯೇ ಬಂಧನಕ್ಕೂ ಕೆಲವು ದಿನಗಳ ಹಿಂದೆ ಸಮನ್ಸ್ ಜಾರಿ ಮಾಡಿತ್ತು.

ಇದಕ್ಕೆ ಪ್ರತಿಕ್ರಿಯೆಯಾಗಿ ಅಲಿ ಖಾನ್ ತಮ್ಮ ಹೇಳಿಕೆಗಳನ್ನು “ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ. ಸಮನ್ಸ್ ಅನ್ನು “ಹೊಸ ರೀತಿಯ ಸೆನ್ಸಾರ್‌ಶಿಪ್ ಮತ್ತು ಕಿರುಕುಳ”ದ ಭಾಗವೆಂದು ವಿವರಿಸಿದ್ದಾರೆ.

sindoor

ಸದ್ಯ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಬಂಧನ ಮಾಡಲಾಗಿದ್ದು, ಅವರ ಪೋಸ್ಟ್ ಹರಿದಾಡುತ್ತಿದೆ. ಈ ಪೋಸ್ಟ್‌ಗಾಗಿ ನಿಮ್ಮ ಬಂಧನ ಮಾಡಲಾಯಿತೇ, ಮಹಿಳಾ ಆಯೋಗ ನಿಮಗೆ ಸಮನ್ಸ್ ನೀಡುವಂತಹ ವಿಚಾರ ಏನಿದೆ ಎಂದು ನೆಟ್ಟಿಗರು ಪ್ರಶ್ನಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X