ದೇಶದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ ನಿಗದಿ ಮಾಡಿ, ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಾಯಚೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.
“ರಾಜ್ಯ ಸರ್ಕಾರ ಪೋಷಣ್ ಟ್ರಾಕ್ ಕಾರ್ಯಕ್ರಮದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿರುವ ಮೊಬೈಲ್ ಫೋನ್ಗಳು ಹ್ಯಾಂಗ್ ಆಗುತ್ತಿದ್ದು, ಕೆಲಸ ಮಾಡಲು ಉಪಯೋಗವಾಗುತ್ತಿಲ್ಲ. ಹಳೆ ಮೊಬೈಲ್ಗಳನ್ನು ಹಿಂಪಡೆದು, ಹೊಸ ಮಾದರಿ 4 ಅಥವಾ 6ಜಿಬಿ ರ್ಯಾಮ್ ಹೊಂದಿರುವ ಮೊಬೈಲ್ ನೀಡಿದರೆ ಅನುಕೂಲವಾಗುತ್ತದೆ” ಎಂದು ಒತ್ತಾಯಿಸಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಇಎಸ್ಐ, ಪಿಎಫ್, ಎಕ್ಸ್ಗ್ರೇಷಿಯಾ ಸೇರಿದಂತೆ ಇತರ ಸೌಲಭ್ಯಗಳನ್ನು ನೀಡಿ ಸಾಮಾಜಿಕ ಭದ್ರತೆ ಒದಗಿಸಬೇಕು. 45 ಮತ್ತು 46ನೇ ಇಂಡಿಯನ್ ಲೇಬರ್ ಕಾನ್ಫರೆನ್ಸ್ಗಳ ಶಿಫಾರಸುಗಳನ್ನು ಜಾರಿ ಮಾಡಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಹಾಸನ | ಅಂಗನವಾಡಿ ಕಾರ್ಯಕರ್ತೆಯರ ಅಗತ್ಯತೆ ಪೂರೈಕೆಗೆ ಆಗ್ರಹ
“ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯೂಟಿ ನೀಡುವ ಕುರಿತು ಕೋರ್ಟ್ ನೀಡಿರುವ ತೀರ್ಪುನ್ನು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷೆ ಎಚ್ ಪದ್ಮಾ, ತಾಲೂಕು ಕಾರ್ಯದರ್ಶಿ ನರ್ಮದಾ, ಖಜಾಂಚಿ ಎಸ್ ರಂಗಮ್ಮ ಸಿಐಟಿಯು ಮುಖಂಡರುಗಳಾದ ಡಿ ಎಸ್ ಶರಣಬಸವ, ಕೆ ಜಿ ವೀರೇಶ ಹಾಗೂ ಅಂಗನವಾಡಿ ಕಾರ್ಯಕರ್ತರು ಇದ್ದರು.