ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಕಾರ್ಖಾನೆಯಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ.
ಮುಂಬೈನಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಸೋಲಾಪುರ ಎಂಐಡಿಸಿಯ ಅಕ್ಕಲ್ಕೋಟ್ ರಸ್ತೆಯಲ್ಲಿರುವ ಸೆಂಟ್ರಲ್ ಜವಳಿ ಕಾರ್ಖಾನೆಯಲ್ಲಿ ಬೆಳಗಿನ ಜಾವ 3:45 ರ ಸುಮಾರಿಗೆ ಸರ್ಕ್ಯೂಟ್ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ಹೈದರಾಬಾದ್ನ ಚಾರ್ಮಿನಾರ್ ಬಳಿ ಭಾರಿ ಬೆಂಕಿ ಅವಘಡ; ಕನಿಷ್ಠ 17 ಮಂದಿ ಸಾವು
ಮೃತರಲ್ಲಿ ಕಾರ್ಖಾನೆಯ ಮಾಲೀಕ ಹಾಜಿ ಉಸ್ಮಾನ್ ಹಸನ್ಭಾಯ್ ಮನ್ಸೂರಿ, ಅವರ ಒಂದೂವರೆ ವರ್ಷದ ಮೊಮ್ಮಗ ಸೇರಿದಂತೆ ಅವರ ಕುಟುಂಬದ ಮೂವರು ಸದಸ್ಯರು ಮತ್ತು ನಾಲ್ವರು ಕಾರ್ಮಿಕರು ಸೇರಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಎಂದು ಅಧಿಕಾರಿಗಳು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಇನ್ನು ಉರಿಯುತ್ತಿರುವ ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗೆ ಐದರಿಂದ ಆರು ಗಂಟೆಗಳು ಬೇಕಾಯಿತು. ಈಗಲೂ ಅಗ್ನಿಶಾಮಕದಳ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಇನ್ನು ಇಂದು ಮುಂಜಾನೆ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಆಭರಣ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಈವರೆಗೆ 17 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಎಂಟು ಮಕ್ಕಳು. ಹಲವು ಮಂದಿಗೆ ಗಾಯವಾಗಿದೆ.
