ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ವಾರ್ಷಿಕವಾಗಿ ₹15 ಲಕ್ಷ ಪಿಂಚಣಿ ಪಡೆಯಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಈ ಮೂಲಕ ಹೆಚ್ಚುವರಿ ನ್ಯಾಯಮೂರ್ತಿಗಳು ಸೇರಿದಂತೆ ಹೈಕೋರ್ಟ್‌ನ ಎಲ್ಲ ನ್ಯಾಯಮೂರ್ತಿಗಳು ಪೂರ್ಣ ಪಿಂಚಣಿ ಮತ್ತು ನಿವೃತ್ತಿ ಸೌಲಭ್ಯಗಳನ್ನು ಪಡೆಯಲು ಅರ್ಹರು ಎಂದು ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.
