ಪಾಕಿಸ್ತಾನಕ್ಕೆ ಬೇಹುಗಾರಿಕೆ; ಯುಪಿ ಉದ್ಯಮಿ ಶಹಜಾದ್ ಎಸ್‌ಟಿಎಫ್ ವಶಕ್ಕೆ

Date:

Advertisements

ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್‌ಗಾಗಿ ಗಡಿಯಾಚೆಗಿನ ಕಳ್ಳಸಾಗಣೆ ಮತ್ತು ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎನ್ನುವ ಆರೋಪದ ಮೇಲೆ ಉತ್ತರ ಪ್ರದೇಶದ ರಾಂಪುರದ ಉದ್ಯಮಿಯೊಬ್ಬರನ್ನು‌ ಯುಪಿ ಎಸ್‌ಟಿಎಫ್‌ (ಸ್ಪೆಷಲ್‌ ಟಾಸ್ಕ್‌ ಫೋರ್ಸ್) ವಶಕ್ಕೆ ಪಡೆದಿದೆ.

ಆರೋಪಿ ಶಹಜಾದ್, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ. ಅಲ್ಲದೇ ಒಂದು ವರ್ಷದಲ್ಲೇ ಹಲವು ಬಾರಿ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ್ದ. ಮೇಕಪ್ ವಸ್ತು, ಬಟ್ಟೆ, ಮಸಾಲೆ ಪದಾರ್ಥಗಳು ಮತ್ತು ಇನ್ನಿತರ ವಸ್ತುಗಳನ್ನು ಕಳ್ಳಸಾಗಾಟ ಮಾಡುತ್ತಿದ್ದ ಎಂದು ಎಸ್‌ಟಿಎಫ್ ತಿಳಿಸಿದೆ.

ಶಹಜಾದ್ ಭಾರತದಲ್ಲಿನ ಐಎಸ್‌ಐ ಏಜೆಂಟ್‌ಗಳಿಗೆ ಹಣ ಮತ್ತು ಭಾರತೀಯ ಸಿಮ್ ಕಾರ್ಡ್‌ಗಳನ್ನು ಒದಗಿಸುತ್ತಿದ್ದ. ರಾಮ್‌ಪುರ ಜಿಲ್ಲೆ ಮತ್ತು ಉತ್ತರ ಪ್ರದೇಶದ ಇತರ ಭಾಗಗಳಿಂದ ಜನರನ್ನು ಐಎಸ್‌ಐಗಾಗಿ ಕೆಲಸ ಮಾಡಲು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದ. ಅಲ್ಲದೇ ಐಎಸ್‌ಐಗೆ ತೆರಳುತ್ತಿದ್ದ ಜನರ ವೀಸಾದ ವ್ಯವಸ್ಥೆಯನ್ನು ಐಎಸ್‌ಐ ಏಜೆಂಟ್‌ಗಳೇ ಮಾಡಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ವರದಿಯಾಗಿದೆ.

Advertisements

ಇದನ್ನೂ ಓದಿ: ಬಂಧಿತ ಬಿಎಸ್‌ಎಫ್ ಯೋಧನನ್ನು ಭಾರತಕ್ಕೆ ಹಸ್ತಾಂತರಿಸಿದ ಪಾಕಿಸ್ತಾನ

ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿದ್ದ ಪಾಕಿಸ್ತಾನಿ ಸಿಬ್ಬಂದಿಗೆ ಭದ್ರತೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ನೀಡುತ್ತಿದ್ದಳು ಎಂಬ ಆರೋಪದಡಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಕೆಲದಿನಗಳ ಹಿಂದಷ್ಟೇ ಬಂಧಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X