ಜಿೆಸ್‌ಟಿ ಹಣ, ಸ್ಮಾರ್ಟ್ ಸಿಟಿ ಯೋಜನೆ ಪಾಲಿನ ಹಣವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿಲ್ಲ. ಈ ಅನುದಾನವನ್ನು ರಾಜ್ಯಕ್ಕೆ ತರುವ ನಿಟ್ಟಿನಲ್ಲಿ ಬಿಜೆಪಿ ಸಂಸದರು ಸಂಪೂರ್ಣ ವಿಫಲರಾಗಿದ್ದಾರೆ. ಈ ಅಸಹಕಾರದ ನಡುವೆಯೂ ರಾಜ್ಯ ಸರ್ಕಾರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಸ್ ಎಂ ಪಾಟೀಲ ಗಣಿಹಾರ ಹೇಳಿದರು.
ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಜೆಪಿಗರು ವಿನಾಕಾರಣ ಸರ್ಕಾರದ ಕಾಲೆಳೆದು ಗೊಂದಲ ಉಂಟು ಮಾಡಿದರೂ ಅವುಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಿ ಮುನ್ನೆಡೆದಿದೆ. ಎರಡು ವರ್ಷಗಳ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳಿಗೆ ₹96 ಸಾವಿರ ಕೋಟಿಯಷ್ಟು ಬೃಹತ್ ಅನುದಾನವನ್ನು ನೇರ ಫಲಾನುಭವಿಗಳಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದೆ” ಎಂದರು.
“ಹೊಸಪೇಟೆಯಲ್ಲಿ ಮೇ 20 ರಂದು ನಡೆಯಲಿರುವ ಸಾಧನ ಸಮಾವೇಶದಲ್ಲಿ ಲಕ್ಷಾಂತರ ಕಾರ್ಯಕರ್ತರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲಾದ ನಾಯಕರು ಭಾಗಿಯಾಗಲಿದ್ದಾರೆ” ಎಂದು ತಿಳಿಸಿದರು.
ಇದನ್ನೂ ಓದಿ: ವಿಜಯಪುರ | ಚಿತ್ರಕಲಾ ಶಿಕ್ಷಕರ ನೇಮಕದಲ್ಲಿ ಸರ್ಕಾರ ತಾತ್ಸಾರ; ಪೊನ್ನಪ್ಪ ಕಡೇಮನಿ ಆಕ್ರೋಶ
ಕಾಂಗ್ರೆಸ್ ಹಿರಿಯ ಮುಖಂಡ ವೈಜಾನಾಥ ಕರ್ಪೂರಮಠ ಮಾತನಾಡಿ, “ಬಿಜೆಪಿ ಕೇವಲ ಹಿಂದೂ-ಮುಸ್ಲಿಂ ವಿಷಯ ಎತ್ತುತ್ತಿದೆ. ಬಿಜೆಪಿಗೆ ರಾಜ್ಯದ ಅಭಿವೃದ್ಧಿ, ಜನರ ಹಿತ ಬೇಕಿಲ್ಲ” ಎಂದು ಟೀಕಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಸಂತ ಹೊನಮೊಡೆ ಇದ್ದರು.