ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಚಿವರ ಹೇಳಿಕೆಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಆದರೆ ಸದ್ಯ ಬಂಧನಕ್ಕೆ ತಾತ್ಕಾಲಿಕ ತಡೆ ನೀಡಿದೆ.
“ನಮ್ಮ ಹೆಣ್ಣುಮಕ್ಕಳ ಸಿಂಧೂರ ಅಳಿಸಿದ್ದ ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು” ಎಂದು ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ವಿಜಯ್ ಶಾ ನೀಡಿದ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದೂರೂ ದಾಖಲಾಗಿದೆ.
ಇದನ್ನು ಓದಿದ್ದೀರಾ? ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು: ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ
ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು ಈ ವಿಷಯದ ತನಿಖೆಗಾಗಿ ಮಧ್ಯಪ್ರದೇಶ ಕೇಡರ್‌ನ ಮೂವರು ಐಪಿಎಸ್ ಅಧಿಕಾರಿಗಳ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಆದೇಶಿಸಿದೆ. ನಾಳೆಯೊಳಗೆ ಎಸ್‌ಐಟಿ ರಚಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದೆ. “ನಾವು ಈ ತನಿಖೆಯನ್ನು ಬಹಳ ನಿಕಟವಾಗಿ ಪರಿಶೀಲಿಸಲು ಬಯಸುತ್ತೇವೆ” ಎಂದು ನ್ಯಾಯಾಲಯ ಹೇಳಿದೆ.
BREAKING: Supreme Court orders SIT probe against BJP's Vijay Shah for remarks on Col Sofiya Qureshi, stays his arrest
— Bar and Bench (@barandbench) May 19, 2025
Court rejected Shah's apology and asked him to join the investigation.
Read more: https://t.co/aujzIJmt44 pic.twitter.com/CDpBUbVfCh
ಈ ನಡುವೆ ನ್ಯಾಯಾಲಯವು ಶಾ ಅವರ ಬಂಧನಕ್ಕೆ ತಡೆ ನೀಡಿದೆ. ಆದರೆ ವಿಜಯ್ ಶಾ ಕ್ಷಮೆಯಾಚಿಸಿರುವುದನ್ನು ಪ್ರಶ್ನಿಸಿದ ಉನ್ನತ ನ್ಯಾಯಾಲಯವು, “ಕ್ಷಮೆಯಾಚಿಸಲು ಯಾವುದೇ ನ್ಯಾಯಾಂಗ ನಿಂದನೆ ಮಾಡಿಲ್ಲ” ಎಂದು ಹೇಳಿದೆ.
“ನೀವು ಸಂಪೂರ್ಣವಾಗಿ ಯೋಚಿಸದೆ ಮಾಡಿದ ರೀತಿಯ ಕೀಳು ಹೇಳಿಕೆಗಳು, ನಮಗೆ ಈ ಕ್ಷಮೆಯಾಚನೆ ಅಗತ್ಯವಿಲ್ಲ” ಎಂದು ನ್ಯಾಯಾಲಯವು ಟೀಕಿಸಿದೆ. ಹಾಗೆಯೇ ಈ ಹೇಳಿಕೆಯ ಪರಿಣಾಮದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಎಂದಿದೆ. ಕ್ಷಮೆಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
