ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ – ಡಿಸಿಎಂ ಭೇಟಿ, ಮಹಿಳೆ ಸಾವಿಗೆ ಪರಿಹಾರ ಘೋಷಣೆ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಸುರಿದ ಮಳೆಯಿಂದ ಹಾನಿಗೆ ಒಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಭೇಟಿ ನೀಡಿ ಪರಿಶೀಲಿಸಿದರು.

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಜನರಿಗೆ ತೊಂದರೆಯಾಗುತ್ತದೆ ಎಂದು ಮನಗಂಡು ಇಂದು ಕೆಲವು ಸ್ಥಳಗಳಿಗೆ ಭೇಟಿ ನೀಡಲಾಗಿದೆ. ನಾಳಿದ್ದು (ಮೇ 21) ಇಡೀ ದಿನ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರಿನ ಶಾಸಕರೊಂದಿಗೆ ನಗರ ಪ್ರದಕ್ಷಿಣೆ ಮಾಡಲಾಗುವುದು” ಎಂದು ತಿಳಿಸಿದರು.

“ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಲಾಗುವುದು. ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ಕೊಡಲಾಗುವುದು” ಎಂದು ಹೇಳಿದರು.

Advertisements

ಈವರೆಗೆ 491 ಕಿ.ಮೀ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣ

“ನಗರದಲ್ಲಿ ರಾಜಕಾಲುವೆಗಳು ಒತ್ತುವರಿಯಾಗಿದ್ದು, ಚರಂಡಿಗಳು ಆಳವಿಲ್ಲದೆ ಚಿಕ್ಕದಾಗಿರುವುದಲ್ಲದೆ ಹೂಳು ತುಂಬಿದೆ. ಇದನ್ನು ತೆರವು ಮಾಡಲು ನಗರಪಾಲಿಕೆಯವರಿಗೆ ಅನೇಕ ಬಾರಿ ಸೂಚನೆ ನೀಡಲಾಗಿದ್ದು, ಇನ್ನೂ ಕಾಮಗಾರಿಗಳು ನಡೆಯುತ್ತಿವೆ. 859.90 ಕಿ. ಮಿ ಉದ್ದದ ರಾಜಕಾಲುವೆಗಳು ಇವೆ. ಇಲ್ಲಿಯವರೆಗೆ 491 ಕಿಮಿ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲಾಗಿದೆ. 195 ಉದ್ದದಲ್ಲಿ ತಡೆಗೋಡೆ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದ್ದು, 173 ಕಿ.ಮಿ ಉದ್ದದ ರಾಜಕಾಲುವೆಗಳನ್ನು ವರ್ಲ್ಡ್ ಬ್ಯಾಂಕ್ ವತಿಯಿಂದ ಕೈಗೊಳ್ಳಲಾಗಿದ್ದು, ರಾಜಕಾಲುವೆ ಕಾರ್ಯ ಪ್ರಗತಿಯಲ್ಲಿದೆ” ಎಂದರು.

ಮಳೆ 3 2

“ರಾಜಕಾಲುವೆಗಳಾಗದೆ ರಸ್ತೆಗಳಲ್ಲಿ ನೀರು ನಿಲ್ಲುವುದನ್ನು ತಪ್ಪಿಸುವುದು ಕಷ್ಟ. ಬೆಂಗಳೂರು ನಗರದಲ್ಲಿ ಸುಮಾರು 210 ತಗ್ಗು ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಎಂದು ಗುರುತು ಮಾಡಲಾಗಿದೆ. 166 ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ. ಬಾಕಿ 44 ಪ್ರದೇಶಗಳಲ್ಲಿ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ 24 ಕಾಮಗಾರಿ ಪ್ರಗತಿಯಲ್ಲಿದ್ದು, ಇವು ಪೂರ್ಣಗೊಂಡರೆ ಈ ಸಮಸ್ಯೆ ಬಹಳಷ್ಟು ಕಡಿಮೆಯಾಗಲಿದೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಹಿಳೆ ಸಾವು: ಪರಿಹಾರ ಘೋಷಣೆ

ವೈಟ್ ಫೀಲ್ಡ್ ನಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಸರ್ಕಾರದ ವತಿಯಿಂದ 5 ಲಕ್ಷ ರೂ.ಗಳ ಪರಿಹಾರವನ್ನು ನೀಡುವುದಾಗಿ ಸಿಎಂ ಘೋಷಿಸಿದರು.

ರಾಜಕಾಲುವೆಗಳ ಕಾಮಗಾರಿ ಕೈಗೊಳ್ಳಲಾಗಿದೆ

“ಸಂಚಾರಿ ಪೊಲೀಸರು 132 ಸ್ಥಳಗಳನ್ನು ಗುರುತಿಸಿದ್ದಾರೆ. ಈ ಪೈಕಿ 82 ಕಾಮಗಾರಿ ಪೂರ್ಣಗೊಂಡಿದ್ದು, 41 ಕಾಮಗಾರಿಗಳು ಬಾಕಿ ಇವೆ. ಈ ವರ್ಷ ಇಡೀ ಬೆಂಗಳೂರಿನ ರಾಜಕಾಲುವೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸಿಲ್ಕ್ ಬೋರ್ಡ್ ಜಂಕ್ಷನ್, ಹೆಬ್ಬಾಳ ಜಂಕ್ಷನ್ ಬಳಿ ಅತಿ ಹೆಚ್ಚು ಮಳೆಯಾಗಿದ್ದು, ನೀರು ಹರಿದುಹೋಗುವಂತೆ ದಾರಿ ಮಾಡಲು ರೈಲ್ವೆಯವರಿಗೆ ಕೆಲಸವನ್ನು ವಹಿಸಲಾಗಿದೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X