ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಂತೂ ಅಲ್ಲಲ್ಲಿ ತುಂಬಿ ಕೆರೆಗಳಂತೆ ಆದ ರಸ್ತೆಗಳಿಂದಾಗಿ ಓಡಾಟ ಕಷ್ಟವಾಗಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಇಂದು ಮತ್ತು ನಾಳೆ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ. ಈ ಕಾರಣದಿಂದಾಗಿ ಹವಾಮಾನ ಇಲಾಖೆ ಇಂದು ಮತ್ತೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ. ಇನ್ನುಳಿದ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
