ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬಳ್ಳಾರಿಯ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಾಲೇಜ್ ಆಫ್ ಎಜುಕೇಶನ್ (ಬಿ.ಇಡಿ) ಇವರ ಸಂಯುಕ್ತಾಶ್ರಯದಲ್ಲಿ ಮೇ. 22 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಗವಿಮಠ ಕ್ಯಾಂಪಸ್ ನಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮೇಳ ನಡೆಯಲಿದೆ. ಈ ಬೃಹತ್ ಮೇಳದಲ್ಲಿ ಕೊಪ್ಪಳ, ಹುಬ್ಬಳ್ಳಿ, ಬೆಂಗಳೂರು, ಬೆಳಗಾವಿ, ಬಳ್ಳಾರಿ, ಹಾಸನ, ಶಿವಮೊಗ್ಗ ಹಾಗೂ ಇತರೆ ಭಾಗಗಳ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ. 18 ರಿಂದ 35 ವರ್ಷದ ಆಸಕ್ತ ನಿರುದ್ಯೋಗ ಪುರುಷ, ಮಹಿಳಾ ಹಾಗೂ ವಿಕಲಚೇತನ ಅಭ್ಯರ್ಥಿಗಳು ಈ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ವಿದ್ಯಾರ್ಹತೆ: ಎಸ್ಎಸ್ಎಲ್‌ಸಿ, ಪಿಯುಸಿ, ತತ್ಸಮಾನ, ಐಟಿಐ, ಡಿಪ್ಲೊಮಾ, ಕಂಪ್ಯೂಟರ್ ತರಬೇತಿ ಹಾಗೂ ಯಾವುದೇ ಪದವಿ ಅಭ್ಯರ್ಥಿಗಳು, ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 10 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ (Resume) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಮೇಳದಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಇದನ್ನೂ ಓದಿ: ಕೊಪ್ಪಳ | ಮನರೇಗಾ ಕಾಮಗಾರಿ ಸ್ಥಳದಲ್ಲಿ ಶೈಕ್ಷಣಿಕ ಜಾಗೃತಿ ಕಾರ್ಯಕ್ರಮ
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಛೇರಿ ಮೊ. ನಂ: 9353515518ಗೆ ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.