ಗದಗ | ಮನರೇಗಾ ಯೋಜನೆಯಡಿ ಕೆಲಸ ಮಾಡಿ ಪದವಿ ಪಡೆದ ಮೂವರು ವಿದ್ಯಾರ್ಥಿನಿಯರು; ಕುಟುಂಬಗಳಿಗೂ ನೆರವು

Date:

Advertisements

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮ ಪಂಚಾಯಿತಿಯ ವೆಂಕಟಾಪುರ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರು ತಮ್ಮ ವೇತನವನ್ನು ಶಿಕ್ಷಣಕ್ಕಾಗಿ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ.

ಮನರೇಗಾ(MNREGA) ಯೋಜನೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂವರು ವಿದ್ಯಾರ್ಥಿನಿಯರು ಕೂಲಿ ಹಣವನ್ನು ತಮ್ಮ ಶಿಕ್ಷಣಕ್ಕಾಗಿ ಉತ್ತಮವಾಗಿ ಬಳಸಿಕೊಳ್ಳುತ್ತಿದ್ದು, ತಮ್ಮ ಕುಟುಂಬದ ಕಿರಿಯ ಸದಸ್ಯರ ಶಿಕ್ಷಣದ ಖರ್ಚುಗಳನ್ನೂ ಕೂಡ ಭರಿಸುತ್ತಿರುವುದರಿಂದ ಪಟ್ಟಣದಾದ್ಯಂತ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರು ವರ್ಷದ 100 ದಿನಗಳಲ್ಲಿ 37,000 ರೂಪಾಯಿಗಳನ್ನು ಗಳಿಸುತ್ತಾರೆ.

ವಿಜಯಲಕ್ಷ್ಮಿ ಶಿವಶಿಂಪಿಗರ್ ಅವರು ಕಳೆದ ವರ್ಷ MNREGA ಸಹಾಯದಿಂದ ತಮ್ಮ ಪದವಿ ಪಡೆದಿದ್ದಾರೆ. ಈಗ ತಮ್ಮ ಚಿಕ್ಕ ಸಹೋದರ ಬಿಎ ಪದವಿ ಪಡೆಯುವಂತೆ ಶುಲ್ಕ ಮತ್ತು ಇತರ ವೆಚ್ಚಗಳನ್ನು ಭರಿಸುತ್ತಿದ್ದಾರೆ. ನಾವು ಕುಟುಂಬದ ನಾಲ್ಕು ಸದಸ್ಯರು ತಮ್ಮ ದಿನನಿತ್ಯದ ಅಗತ್ಯಗಳನ್ನು ಪೂರೈಸಿಕೊಳ್ಳಲು ಮನರೇಗಾ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇವೆಂದು ಮಾಧ್ಯಮದೊಂದಿಗೆ ಹೇಳಿಕೊಂಡಿದ್ದಾರೆ.

Advertisements
ಮನರೇಗಾದಿಂದ ಪದವಿ

ಚಂದ್ರಿಕಾ ಬಸವರಾಜ್ ಕಟಗೇರಿ ಗದಗದ ಖಾಸಗಿ ಕಾಲೇಜೊಂದರಲ್ಲಿ ಬಿಎ ಎರಡನೇ ಸೆಮಿಸ್ಟರ್ ಓದುತ್ತಿರುವುದಾಗಿ ಹೇಳಿಕೊಂಡಿದ್ದು, “ನಾನು ವಾರಾಂತ್ಯ, ಸಾಮಾನ್ಯ ಮತ್ತು ಬೇಸಿಗೆ ರಜಾದಿನಗಳಲ್ಲಿ ಮನರೇಗಾ ಅಡಿಯಲ್ಲಿ ಕೆಲಸ ಮಾಡುತ್ತೇನೆ. ಇದರಿಂದ ನನ್ನ ಕಾಲೇಜು ಶುಲ್ಕ, ಪ್ರಯಾಣ ಹಾಗೂ ಇತರ ವೆಚ್ಚಗಳನ್ನು ಭರಿಸಲು ಸಾಧ್ಯವಾಗುತ್ತದೆ. ಅಲ್ಲದೆ, ನಾನು ಪ್ರೌಢಶಾಲೆಯಲ್ಲಿ ಓದುತ್ತಿರುವ ನನ್ನ ಇಬ್ಬರು ಕಿರಿಯ ಸಹೋದರರ ಶೈಕ್ಷಣಿಕ ವೆಚ್ಚವನ್ನೂ ಕೂಡ ಭರಿಸುತ್ತಿದ್ದೇನೆ. ಇದರೊಂದಿಗೆ, ನಾವು ನಮ್ಮ ಕುಟುಂಬದ ಮೇಲಿನ ಹೊರೆಯನ್ನು ಕಡಿಮೆ ಮಾಡಿದ್ದೇವೆ. ನನ್ನ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದಾಗ ಅವರ ವೈದ್ಯಕೀಯ ವೆಚ್ಚಕ್ಕೂ ನಾನು ದುಡಿದ ಮನರೇಗಾ ಕೂಲಿ ಸಹಾಯವಾಗಿದೆ” ಎಂದು ಅವರು ಹೆಮ್ಮೆಯಿಂದ ಹೇಳುತ್ತಾರೆ.

ಮನರೇಗಾದಿಂದ ಪದವಿ 1

“ಮನರೇಗಾ ಕೂಲಿ ಹಣದ ಸಹಾಯದಿಂದ ಪದವಿ ಪೂರ್ವ ಮತ್ತು ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿದ್ದೇನೆ. ಈಗ ನಾನು ಉದ್ಯೋಗವನ್ನು ಹುಡುಕುತ್ತಿದ್ದು, ಖಾಸಗಿ ಕಂಪನಿಗಳಲ್ಲಿ ಕೆಲವು ಸಂದರ್ಶನಗಳಿಗೆ ಹಾಜರಾಗುತ್ತಿದ್ದೇನೆ. ಪ್ರಸ್ತುತ ನಾನು ನನ್ನ ಇಬ್ಬರು ಸೋದರಿಯರ ಶಾಲೆ ಮತ್ತು ಕಾಲೇಜಿನ ಶಿಕ್ಷಣ ವೆಚ್ಚವನ್ನೂ ಭರಿಸುತ್ತಿದ್ದೇನೆ. ಮನರೇಗಾ ಇಲ್ಲದಿದ್ದರೆ ಬಹುಷಃ ನಾವು ನಮ್ಮ ಶಿಕ್ಷಣವನ್ನು ಮುಂದುವರೆಸುತ್ತಿರಲಿಲ್ಲ” ಎಂದು ಶೋಭಾ ಗೋಣಿಸ್ವಾಮಿ ಹೇಳಿಕೊಂಡಿದ್ದಾರೆ.

ಮನರೇಗಾದಿಂದ ಪದವಿ 2

“ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳು ಪದವಿ ವಿದ್ಯಾರ್ಥಿಗಳು ಹಾಗೂ ಇನ್ನಿತರ ವಂಚಿತರನ್ನು ಆಕರ್ಷಿಸುತ್ತಿವೆ. ಮೂವರು ವಿದ್ಯಾರ್ಥಿನಿಯರು, ಅವರ ಮತ್ತು ತಮ್ಮ ಕುಟುಂಬದ ಕಿರಿಯ ಸಹೋದರರ ಶಿಕ್ಷಣಕ್ಕೂ ಮನರೇಗಾ ಕೂಲಿ ಹಣವನ್ನು ಬಳಸುತ್ತಿರುವುದು ಸಂತೋಷವನ್ನುಂಟುಮಾಡಿದೆ” ಎಂದು ಮುಂಡರಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿದ್ದೀರಾ? ರಾಜ್ಯದ ಹಲವೆಡೆ ಭಾರೀ ಮಳೆ; ಬೆಳೆಹಾನಿಯಿಂದ ಕಾಂಗಾಲಾದ ರೈತರು

“ಯಾವುದೇ ಪದವಿ ವಿದ್ಯಾರ್ಥಿಗಳು ಆರ್ಥಿಕವಾಗಿ ತೊಂದರೆ ಅನುಭವಿಸುತ್ತಿದ್ದರೆ, ಅವರು ತಮ್ಮ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಮನರೇಗಾ ಯೋಜನೆಯಡಿ ಕೆಲಸವನ್ನು ಪಡೆಯಬಹುದು” ಎಂದು ತಿಳಿಸಿದ್ದಾರೆ.

ವರದಿ : ಸಂಗಮೇಶ್‌ ಮೆಣಸಿನಕಾಯಿ, ಟೈಮ್ಸ್‌ ಆಫ್‌ ಇಂಡಿಯಾ

ಕನ್ನಡಕ್ಕೆ ಅನುವಾದ : ರೇಖಾ ಹಾಸನ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X