ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿರುವ ಕೇಂದ್ರ ಸರ್ಕಾರ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Date:

Advertisements

“ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಹೊಸಪೇಟೆಯಲ್ಲಿ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ. ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ” ಎಂದರು.

Advertisements

“15ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಂದಿನ ಮೂರು ವರ್ಷದಲ್ಲಾದರೂ ಸರ್ಕಾರ ಜನಪರವಾಗಿರಬಹುದೇ?

ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ

“ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ” ಎಂದರು.

ಬಿಜೆಪಿಯ ಕಮಿಷನ್ ಭ್ರಷ್ಟಾಚಾರ ಸಾಭೀತಾಗಿದೆ: ಸಿಎಂ

“ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ” ಎಂದು ಹೇಳಿದರು.

“1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯ ರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ” ಎಂದರು.

ಚಿನ್ನದ ಬೆಲೆ ಈಗ ಎಷ್ಟಿದೆ?

“ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ಪರವಾಗಿ ಜನಾಭಿಪ್ರಾಯ ಇದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

Download Eedina App Android / iOS

X