ಮಳೆಯಲ್ಲಿ ಮುಳುಗುತ್ತಿರುವ ಬೆಂಗಳೂರು, ಎರಡು ವರ್ಷದಲ್ಲಿ ಕಾಂಗ್ರೆಸ್‌ ಮಾಡಿದ್ದೇನು: ಆರ್‌.ಅಶೋಕ್ ಪ್ರಶ್ನೆ

Date:

Advertisements

ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ಹಣವನ್ನು ಬೆಂಗಳೂರಿನ ಅಭಿವೃದ್ಧಿಗೆ ನೀಡಿದ್ದು, ಆ ಕಾಮಗಾರಿಗಳನ್ನು ಕಾಂಗ್ರೆಸ್‌ ಸರ್ಕಾರ ರದ್ದು ಮಾಡಿದೆ. ಆ ಕಾಮಗಾರಿಗಳು ನಡೆದಿದ್ದರೆ ಇಂತಹ ಪ್ರವಾಹದ ಸ್ಥಿತಿ ಬರುತ್ತಿರಲಿಲ್ಲ. ಬೆಂಗಳೂರಿಗೆ ಕಳೆದ 2 ವರ್ಷಗಳಲ್ಲಿ ಏನು ಮಾಡಿದ್ದೀರಿ ಎಂದು ತಿಳಿಸಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನಲ್ಲಿ‌ ಮಂಗಳವಾರ ಬಿಜೆಪಿಯವರು ಪ್ರವಾಹ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, “ಇಡೀ ಬೆಂಗಳೂರು ಮಳೆಯಿಂದಾಗಿ ಮುಳುಗುತ್ತಿದ್ದು, ಜನರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಐದು ಜನರು ಸತ್ತಿದ್ದಾರೆ. ಇಂಥವರ ಸಾವಿನ ಮೇಲೆ ಕಾಂಗ್ರೆಸ್‌ ಸಾಧನೆಯ ಸಮಾವೇಶ ಮಾಡುತ್ತಿದೆ” ಎಂದು ಟೀಕಿಸಿದರು.

“ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು. ಕಾಂಗ್ರೆಸ್‌ನ ತಪ್ಪಿನಿಂದಲೇ ಜನರು ಸತ್ತಿದ್ದಾರೆ. ಇಂತಹ ಸಮಾವೇಶ ಮಾಡುವ ನೈತಿಕ ಅರ್ಹತೆ ಸರ್ಕಾರಕ್ಕೆ ಇಲ್ಲ. ಬೆಂಗಳೂರಿನ ಸಾಯಿ ಬಡಾವಣೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿ, ಅಭಿವೃದ್ಧಿ ಮಾಡುತ್ತೇನೆಂದು ಹೇಳಿದ್ದರು. ಸಿಲ್ಕ್‌ ಬೋರ್ಡ್‌ ಬಳಿ ಕಳೆದ ಸಲವೂ ಪ್ರವಾಹವಾಗಿತ್ತು. ಇಷ್ಟಾದರೂ ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆಯಾಗಿಲ್ಲ” ಎಂದರು.

Advertisements

“ಬಿಜೆಪಿ ಅವಧಿಯಲ್ಲಿ ರಾಜಕಾಲುವೆ, ರಸ್ತೆ ಅಭಿವೃದ್ಧಿಗೆ 1,600 ಕೋಟಿ ರೂ. ನೀಡಲಾಗಿತ್ತು. ಅದನ್ನು ಕಾಂಗ್ರೆಸ್‌ ರದ್ದು ಮಾಡಿದೆ. ಆ ಅಭಿವೃದ್ಧಿ ಕಾರ್ಯ ನಡೆದಿದ್ದರೆ, ಈ ರೀತಿ ಪ್ರವಾಹ ಆಗುತ್ತಿರಲಿಲ್ಲ. ಬೆಂಗಳೂರಿಗೆ ಪ್ರಗತಿಗೆ ಹಣ ನೀಡದೆ ಲೂಟಿ ಮಾಡಲು ಆ ಹಣವನ್ನು ಬಳಸಲಾಗಿದೆ. ಎಲ್ಲ ಹಣವನ್ನು ಸುರಂಗ ಮಾರ್ಗ ಯೋಜನೆಗೆ ಮೀಸಲಿಟ್ಟಿದ್ದಾರೆ. ಈಗ ಎಲ್ಲ ರಸ್ತೆಗಳಲ್ಲಿ ಸುರಂಗ ಆಗಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಂದಿನ ಮೂರು ವರ್ಷದಲ್ಲಾದರೂ ಸರ್ಕಾರ ಜನಪರವಾಗಿರಬಹುದೇ?

“ಪ್ರವಾಹದ ಸ್ಥಳಗಳಲ್ಲಿ ಸೆನ್ಸರ್‌ ಅಳವಡಿಸಲಾಗುವುದು ಎಂದು ಸರ್ಕಾರ ಹೇಳಿತ್ತು. ಆದರೆ ಯಾವ ಕೆಲಸವೂ ಆಗಿಲ್ಲ. ಏಪ್ರಿಲ್‌ 15 ರಂದೇ ಹವಾಮಾನ ಇಲಾಖೆ ಮಳೆ ಜೋರಾಗಲಿದೆ ಎಂದು ಸೂಚನೆ ನೀಡಿತ್ತು. ಒಂದು ತಿಂಗಳ ಸಮಯದಲ್ಲಿ ಬಿಬಿಎಂಪಿಯಿಂದ ಮುಂಜಾಗ್ರತಾ ಸಭೆ ನಡೆಸಿಲ್ಲ. ಸಮಾವೇಶಕ್ಕೆ ಮಾತ್ರ ತರಾತುರಿಯಲ್ಲಿ ಸಿದ್ಧತೆ ಮಾಡಿಕೊಂಡರು. 14 ಸಾವಿರ ಗುಂಡಿ ಮುಚ್ಚಿದ್ದೇವೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಈಗ ಕಾಂಗ್ರೆಸ್‌ ಪಕ್ಷವನ್ನು ಮುಚ್ಚಿಹಾಕಲು ಜನರೇ ಗುಂಡಿ ತೆಗೆಯುತ್ತಿದ್ದಾರೆ” ಎಂದರು.

“ಯುದ್ಧಕ್ಕೆ ಸಾಕ್ಷಿ ಕೇಳುವ ಇವರು, ಜನರು ಸಾಯುತ್ತಿರುವುದನ್ನು ಬಂದು ನೋಡಲಿ. ಇದಕ್ಕೆ ಯಾವುದೇ ಸಾಕ್ಷಿ ಬೇಕಿಲ್ಲ. ಬಿಜೆಪಿ ಅವಧಿಯಲ್ಲಿ ಪ್ರತಿ ವರ್ಷ ಏಳೆಂಟು ಸಾವಿರ ಕೋಟಿ ರೂ. ನೀಡಲಾಗುತ್ತಿತ್ತು. ಕಾಂಗ್ರೆಸ್‌ ಸರ್ಕಾರ ಬೆಂಗಳೂರಿಗೆ ನೀಡಿರುವ ಹಣವೆಲ್ಲವನ್ನೂ ಸುರಂಗ ನಿರ್ಮಿಸಲು ಬಳಸಲಾಗುತ್ತಿದೆ. ಬೆಂಗಳೂರು ಮುಳುಗುತ್ತಿರುವ ಬಗ್ಗೆ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ. ಗ್ರೇಟರ್‌ ಬೆಂಗಳೂರು ಹೋಗಿ ವಾಟರ್‌ ಬೆಂಗಳೂರು ಆಗಿದೆ. ಮನೆ ಬಾಗಿಲಿಗೆ ಅವಾಂತರ, ಸಾವುಗಳನ್ನು ಸರ್ಕಾರ ತರುತ್ತಿದೆ” ಎಂದು ಆರೋಪಿಸಿದರು.

ವಿಜಯೇಂದ್ರ ಹೇಳಿದ್ದೇನು?

“ರಾಜ್ಯದ ಕಾಂಗ್ರೆಸ್ ಸರಕಾರವು ಬೆಂಗಳೂರಿನಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಪೂರ್ವಭಾವಿ ಕೆಲಸ ಮಾಡಿಸುವುದನ್ನು ಬಿಟ್ಟು ಹೊಸಪೇಟೆಯಲ್ಲಿ ಮೋಜು ಮಾಡುತ್ತಿದೆ. ಎರಡು ವರ್ಷ ಪೂರ್ಣಗೊಳಿಸಿದ್ದನ್ನು ತಿಳಿಸಿ ಮೋಜು ಮಾಡುತ್ತಿರುವುದು ಅಕ್ಷಮ್ಯ ಅಪರಾಧ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದರು.

“ಕೆಲವೇ ಕೆಲವು ಗಂಟೆ ಮಳೆ ಬಂದ ಸಂದರ್ಭದಲ್ಲಿ ಇಡೀ ಬೆಂಗಳೂರು ಮಹಾನಗರವು ಜಲಾವೃತವಾಗಿದೆ. ನಾಲ್ಕು ಜನರು ಪ್ರಾಣ ಕಳಕೊಂಡಿದ್ದಾರೆ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯನವರು ಗ್ರೇಟರ್ ಬೆಂಗಳೂರು ಬಗ್ಗೆ ಮಾತನಾಡುತ್ತಾರೆ. ಬೆಂಗಳೂರಿಗೆ ಕೇವಲ ಗ್ರೇಟರ್ ಹೆಸರು ಸೇರಿಸಿದರೆ ಸಾಕಾಗುವುದಿಲ್ಲ ಸ್ವಾಮೀ.. ಎಂದರಲ್ಲದೆ, ಬೆಂಗಳೂರಿನ ಅಭಿವೃದ್ಧಿಗೆ ಎಷ್ಟು ಸಾವಿರ ಕೋಟಿ ಅನುದಾನ ಕೊಡಲಾಗಿದೆ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X