ಗದಗ | ಗ್ಯಾರಂಟಿ ಸೌಲಭ್ಯ ಒದಗಿಸುವಲ್ಲಿ ಜಿಲ್ಲೆಯ ಸಾಧನೆ ಪ್ರಶಂಸನೀಯ: ಎಸ್‌ ಆರ್‌ ಪಾಟೀಲ

Date:

Advertisements

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಪಂಚಗ್ಯಾರಂಟಿ ಯೋಜನೆಗಳನ್ನು ಉತ್ತಮವಾಗಿ ಗದಗ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಈ ಸಾಧನೆಗೆ ಗದಗ ಜಿಲ್ಲೆ ಪ್ರಶಂಸನೀಯ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್ ಆರ್ ಪಾಟೀಲ ಅವರು ಹೇಳಿದರು.

ಗದಗ ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾದಿಕಾರದ ಕಚೇರಿಯಲ್ಲಿ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಂಚಗ್ಯಾರಂಟಿ ಅನುಷ್ಠಾನದಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿಯೇ ಉತ್ತಮ ಸಾಧನೆ ಮಾಡಿದೆ. ಅರ್ಹರಿಗೆ ಸರ್ಕಾರದ ಸೌಲಭ್ಯ ಒದಗಿಸುವಲ್ಲಿ ಜಿಲ್ಲೆಯು ಮುಂಚೂಣಿಯಲ್ಲಿದೆ. ಅದಕ್ಕಾಗಿ ಸಮಿತಿಯ ಜಿಲ್ಲಾ ಹಾಗೂ ತಾಲೂಕಾ ಅಧ್ಯಕ್ಷರು, ಸದಸ್ಯರುಗಳಿಗೆ ಅಭಿನಂದನೆಗಳು. ಅದೇ ತರಹ ಇಲಾಖಾಧಿಕಾರಿಗಳ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

“ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಗಳು ಆರ್ಥಿಕ ಸಬಲತೆಯೊಂದಿಗೆ ಸ್ತ್ರೀ ಸ್ವಾತಂತ್ರ್ಯ ನೀಡಿದೆ. ಮಹಿಳೆ ಸ್ವತಂತ್ರವಾಗಿ ಕುಟುಂಬ ನಿರ್ವಹಣೆ ಮಾಡುವ ಮೂಲಕ ಕುಟುಂಬವನ್ನು ಆರ್ಥಿಕವಾಗಿ ಪ್ರಬಲವಾಗಿಸಲು ಪಂಚ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ. ಅವುಗಳನ್ನು ಇನ್ನಷ್ಟು ಅರ್ಹರಿಗೆ ತಲುಪಿಸುವಲ್ಲಿ ಅಧಿಕಾರಿ ವರ್ಗ ಶ್ರಮಿಸಬೇಕು” ಎಂದು ನಿರ್ದೇಶನ ನೀಡಿದರು.

Advertisements

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ ಮಾತನಾಡಿ, “ಯುವನಿಧಿ ಫಲಾನುಭವಿಗಳು ಉದ್ಯೋಗ ಮೇಳಕ್ಕೆ ಆಗಮಿಸುವ ಮೂಲಕ ಉದ್ಯೋಗ ಪಡೆಯಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಉದ್ಯೋಗಾಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕೆಂದು ಸೂಚಿಸಿದರು. ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಅಕ್ಕಿಯು ಅಕ್ರಮ ಕಾಳ ಸಂತೆಯಲ್ಲಿ ಸಾಗಾಟ ಮಾಡುವುದನ್ನು ಅಧಿಕಾರಿ ವರ್ಗ ಸಂಪೂರ್ಣ ಹತೋಟೆಗೆ ತರಬೇಕು. ಆ ಮೂಲಕ ಅನ್ನಭಾಗ್ಯದ ಫಲಾನುಭವಿಗಳಿಗೆ ಯೋಜನೆ ತಲುಪುವ ಮೂಲಕ ಹಸಿವು ಮುಕ್ತ ಕರ್ನಾಟಕ ಸಾಕಾರವಾಗಲು ಶ್ರಮಿಸಬೇಕು” ಎಂದರು.

ಪ್ರಾಧಿಕಾರದ ತಾಲೂಕಾಧ್ಯಕ್ಷ ಅಶೋಕ ಮಂದಾಲಿ ಮಾತನಾಡಿ, “ಪಂಚ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಸದ್ಭಳಕೆ ಮಾಡಿಕೊಳ್ಳುವ ಮೂಲಕ ಫಲಾನುಭವಿಗಳು ತಮ್ಮದೇ ರೀತಿಯ ಆರ್ಥಿಕ ಸಂಪನ್ಮೂಲ ಕಂಡುಕೊಂಡಿದ್ದಾರೆ. ಹಲವಾರು ಮಹಿಳೆಯರು ಸ್ವ ಉದ್ಯೋಗ ಕೈಗೊಂಡ ಸಾಕಷ್ಟು ಉದಾಹರಣೆಗಳು ಜಿಲ್ಲೆಯಲ್ಲಿವೆ” ಎಂದರು.

ಸಮಿತಿ ಸದಸ್ಯ ಕೃಷ್ಣಗೌಡ ಎಚ್ ಪಾಟೀಲ ಮಾತನಾಡಿ, “ಕೆಲವು ಫಲಾನುಭವಿಗಳ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಮೊತ್ತವು ಬ್ಯಾಂಕ್ ಖಾತೆಗೆ ಜಮೆಯಾಗದೇ ಇರುವ ಪ್ರಕರಣಗಳು ಕಂಡುಬಂದಿವೆ. ಅಧಿಕಾರಿ ವರ್ಗ ಅವುಗಳನ್ನು ಪರಿಶೀಲಿಸಿ ಅರ್ಹರಿಗೆ ಯೋಜನೆಯ ಹಣ ಜಮೆ ಮಾಡಿಸುವಲ್ಲಿ ಗಮನ ಹರಿಸುವಂತೆ” ತಿಳಿಸಿದರು.

ಇದನ್ನೂ ಓದಿ: ಗದಗ | ಬೀದಿ ನಾಯಿಗಳ ದಾಳಿಗೆ ಮಹಿಳೆ ಬಲಿ

ಗೃಹಲಕ್ಷ್ಮೀ ಯೋಜನೆಯಡಿ ಶೇ 92.02, ಅನ್ನಭಾಗ್ಯ ಯೋಜನೆಯಡಿ ಶೇ 97.96, ಗೃಹ ಜ್ಯೋತಿ ಯೋಜನೆಯಡಿ ಶೇ 95.51, ಯುವನಿಧಿ ಯೋಜನೆಯಡಿ ಶೇ 98 ಹಾಗೂ ಶಕ್ತಿ ಯೋಜನೆಯಡಿ ಶೇ 100 ರಷ್ಟು ಪ್ರಗತಿ ಸಾಧನೆಯಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ಒದಗಿಸಿದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ನೀಲವ್ವ ಬೋಳನವರ್, ಸದಸ್ಯರುಗಳಾದ ಈಶಣ್ಣ ಹುಣಸೀಕಟ್ಟಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯ್ಕರ, ದೇಸಾಯಿ, ಸಾವಿತ್ರ‍್ರಿ ಹೂಗಾರ ಸೇರಿದಂತೆ ಇತರೆ ಸದಸ್ಯರು, ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X