ಒಳ ಮೀಸಲಾತಿಯ ವಿಚಾರದಲ್ಲಿ ಸರ್ಕಾರವೇ ಗೊಂದಲ ಸೃಷ್ಟಿ ಮಾಡಿದೆ, ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಚಿಕ್ಕಮಗಳೂರು ನಗರದಲ್ಲಿ ತಿಳಿಸಿದರು.
ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಒಳ ಮೀಸಲಾತಿಯನ್ನು ಘೋಷಣೆ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೆವು, ನಮ್ಮ ಸರ್ಕಾರದ ಅವಧಿಯಲ್ಲಿ ಇದನ್ನು ಜಾರಿಗೆ ತರಲು ಅವಕಾಶ ಇರಲಿಲ್ಲ. ನಂತರ ನ್ಯಾಯಾಲಯ ರಾಜ್ಯ ಸರ್ಕಾರಗಳಿಗೆ ಒಳ ಮೀಸಲಾತಿಯನ್ನು ಜಾರಿಗೆ ತರುವ ಅಧಿಕಾರವನ್ನು ನೀಡಿತು. ಬಿಜೆಪಿ ಸರ್ಕಾರ ಘೋಷಿಸಿದ್ದ ಒಳ ಮೀಸಲಾತಿಯನ್ನು ಜಾರಿಗೆ ತರಲು ಈ ಸರ್ಕಾರ ಮುಂದಾಗದೆ ನಾಗಮೋಹನ್ ಸಮಿತಿಯನ್ನು ರಚಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮಳೆಯ ಆರ್ಭಟ; ರೆಡ್ ಅಲರ್ಟ್ ಘೋಷಣೆ
ಜಾತಿಗಣತಿಯಲ್ಲಿ ಜನರು ತಮ್ಮ ಉಪಜಾತಿಗಳನ್ನು ಸಮೀಕ್ಷೆಯಲ್ಲಿ ಬರೆಸುತ್ತಿದ್ದಾರೆ. ಛಲವಾದಿಯಲ್ಲಿ 48 ಉಪನಾಮಗಳಿವೆ, ಇದಕ್ಕೆಲ್ಲ ತುಪ್ಪ ಸವರುವ ಕೆಲಸವನ್ನು ಸರ್ಕಾರ ಮಾಡಬಾರದು ಅಂತ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.