ಕನ್ನಡದ ಲೇಖಕಿ ಬಾನು ಮುಷ್ತಾಕ್‌ಗೆ ಅಂತಾರಾಷ್ಟ್ರೀಯ ‘ಬೂಕರ್’ ಪ್ರಶಸ್ತಿ

Date:

Advertisements

ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ‘ಬೂಕರ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರ ಸಣ್ಣ ಕತೆಗಳ ಇಂಗ್ಲಿಷ್ ಅನುವಾದಿತ ‘ಹಾರ್ಟ್ ಲ್ಯಾಂಪ್’ ಕೃತಿಗೆ ಪ್ರಶಸ್ತಿ ಒಲಿದುಬಂದಿದೆ.

ಲಂಡನ್‌ನಲ್ಲಿ ಮೇ 21ರಂದು ನಡೆದ ಸಮಾರಂಭದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿದೆ. ವಿಜೇತರಿಗೆ 50,000 ಪೌಂಡ್(ರೂ. 57.28 ಲಕ್ಷ) ಬಹುಮಾನ ದೊರೆಯಲಿದೆ. ಈ ಮೊತ್ತವನ್ನು ಲೇಖಕರು ಮತ್ತು ಅನುವಾದಕರ ನಡುವೆ ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಬರಹಗಾರ್ತಿ ಅರುಂಧತಿ ರಾಯ್‌ಗೆ 2024ನೇ ಸಾಲಿನ ಪೆನ್ ಪಿಂಟರ್ ಪ್ರಶಸ್ತಿ

Advertisements

ಬಾನು ಮುಷ್ತಾಕ್ ವಿರಚಿತ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯನ್ನು ದೀಪಾ ಭಸ್ತಿ ಅವರು ಇಂಗ್ಲಿಷ್‌ಗೆ ಅನುವಾದ ಮಾಡಿದ್ದಾರೆ. ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್‌ಲೇಟ್ಸ್’ ಪ್ರಶಸ್ತಿಯೂ ದೊರೆತಿದೆ.

2025ನೇ ಸಾಲಿನ ಬೂಕರ್ ಪ್ರಶಸ್ತಿ ವಿಜೇತ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಷ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ. ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ” ಅಭಿನಂದನೆ ಸಲ್ಲಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X