ಇಂದಿರಾ ಕ್ಯಾಂಟೀನ್ ದುರಸ್ಥಿಕಾರ್ಯ ಕೈಗೊಳ್ಳಲು ಸೂಚನೆ ನೀಡಿದ ಬಿಬಿಎಂಪಿ ‌ಮುಖ್ಯ ಆಯುಕ್ತ

Date:

Advertisements
  • ಕೈ ತೊಳೆಯುವ ನೀರಿನ ವ್ಯವಸ್ಥೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಬೇಕು
  • ಸಾರ್ವಜನಿಕರ ಉಪಯೋಗಕ್ಕಾಗಿ ಶೌಚಾಲಯವನ್ನು ತೆರೆಯಬೇಕು; ಬಿಬಿಎಂಪಿ ಮುಖ್ಯ ಆಯುಕ್ತ

ಬೆಂಗಳೂರಿನ ಪೂರ್ವ ವಲಯದ ಹೆಬ್ಬಾಳ ಹಾಗೂ ವಿಶ್ವನಾಥ ನಾಗೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಇಂದಿರಾ ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ ಕ್ಯಾಂಟೀನ್ ನಿರ್ವಹಣೆ ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲಿಸಿ, ಅಲ್ಲಿ ಇರುವಂತಹ ದುರಸ್ಥಿಕಾರ್ಯಗಳನ್ನು ಕೂಡಲೆ ಕೈಗೆತ್ತಿಕೊಂಡು ಸರಿಪಡಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, “ಇಂದಿರಾ ಕ್ಯಾಂಟೀನ್‌ನಲ್ಲಿ ದುರಸ್ಥಿಯಲ್ಲಿರುವ ಬಲ್ಬ್ ಸರಿಪಡಿಸಬೇಕು, ಕೈ ತೊಳೆಯುವ ನೀರಿನ ವ್ಯವಸ್ಥೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಬೇಕು. ಇರುವ ಶೌಚಾಲಯವನ್ನು ಸಾರ್ವಜನಿಕರ ಉಪಯೋಗಕ್ಕಾಗಿ ತೆರೆಯಬೇಕು” ಎಂದರು.

ಇಂದಿರಾ ಕ್ಯಾಂಟೀನ್ ತಪಾಸಣೆಯ ವೇಳೆ ಸಾರ್ವಜನಿಕರ ಬಳಿ ತಿಂಡಿಯ ಗುಣಮಟ್ಟ ವಿಚಾರಿಸಿದಾಗ ಪ್ರತಿನಿತ್ಯ ಅಕ್ಕಿಯಿಂದ ಮಾಡಿದಂತಹ ಆಹಾರ ಮಾತ್ರ ಲಭ್ಯವಾಗಲಿದ್ದು, ಅದನ್ನು ಬದಲಿಸಲು ಮನವಿ ಮಾಡಿದರು.

Advertisements

ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, “ಇಂದಿರಾ ಕ್ಯಾಂಟೀನ್‌ಗಳಲ್ಲಿ ನೀಡುವ ಆಹಾರದ ಮೆನು ಶೀಘ್ರವೇ ಬದಲಾಗಲಿದ್ದು, ದಿನನಿತ್ಯ ಬೇರೆ-ಬೇರೆ ತಿಂಡಿ-ಊಟದ ವ್ಯವಸ್ಥೆ ಮಾಡಲಾಗುವುದು” ಎಂದು ಹೇಳಿದರು.

“ಇಂದಿರಾ ಕ್ಯಾಂಟೀನ್‌ಗಳಿಗೆ ನಿಯೋಜಿಸಿರುವ ಮಾರ್ಷಲ್‌ಗಳನ್ನು ಬರೀ ಇಂದಿರಾ ಕ್ಯಾಂಟೀನ್ ನೋಡಿಕೊಳ್ಳುವುದು ಮಾತ್ರವಲ್ಲದೇ ಬೇರೆ-ಬೇರೆ ಜವಾಬ್ದಾರಿ ಸಹ ನೀಡಬೇಕೆಂದು ವಲಯ ಜಂಟಿ ಆಯುಕ್ತರಿಗೆ ತಿಳಿಸಿದರು. ಜತೆಗೆ ಇಂದಿರಾ ಕ್ಯಾಂಟೀನ್, ಆಹಾರದ ಗುಣಮಟ್ಟ, ಹೆಚ್ಚು ಹಣ ಪಡೆಯುವ ವಿಚಾರವಾಗಿ ದೂರುಗಳಿದ್ದಲ್ಲಿ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ದೂರು ನೀಡಬಹುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಾಡಹಗಲೇ ಜೋಡಿ ಕೊಲೆ; ಮೂವರು ಆರೋಪಿಗಳ ಬಂಧನ

“ಇಂದಿರಾ ಕ್ಯಾಂಟೀನ್ ನಾಮಫಲಕ ಹಾಳಾಗಿದ್ದು, ಅದನ್ನು ಕೂಡಲೇ ಬದಲಿಸಬೇಕು. ಬದಲಿಸುವ ಜತೆಗೆ ಬೇರೆ ಸಣ್ಣ-ಪುಟ್ಟ ದುರಸ್ಥಿ ಕಾರ್ಯಗಳನ್ನು ಕೈಗೊಂಡು ಸರಿಪಡಿಸಬೇಕು” ಎಂದರು.

ಈ ವೇಳೆ ವಲಯ ಜಂಟಿ ಆಯುಕ್ತೆ ಪಲ್ಲವಿ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ವಲಯ ಮುಖ್ಯ ಅಭಿಯಂತರರಾದ ಸುಗುಣಾ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X